Wednesday, December 1, 2021

ಒಂದು ಬೇಕು ಎಷ್ಟೂ ಮಾಡಬಹುದು ಅಂತಿದ್ದರೆ ಜನಸಂಖ್ಯಾ ನಿಯಂತ್ರಣ ಕಷ್ಟ: ಶಾಸಕ ರಘುಪತಿ ಭಟ್‌

ಮಂಗಳೂರು: ಒಂದು ಬೇಕು ಎಷ್ಟೂ ಮಾಡಬಹುದು ಅಂತಿದ್ದರೆ ಜನಸಂಖ್ಯಾ ನಿಯಂತ್ರಣ ಕಷ್ಟ. ಉತ್ತರಪ್ರದೇಶದಂತೆ ನಮ್ಮ ರಾಜ್ಯದಲ್ಲೂ ಕಾನೂನು ಜಾರಿಗೆ ಬರಬೇಕು. ಆಗಸ್ಟ್‌ನ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಒತ್ತಾಯ ಮಾಡುತ್ತೇನೆ ಎಂದು ಎಂದು ಉಡುಪಿ ಶಾಸಕ ರಘುಪತಿ ಭಟ್‌ ಅವರು ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಜನಸಂಖ್ಯಾ ದಿನ ಹಾಗೂ ಮಲೇರಿಯಾ/ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತಕ್ಕೆ‌ ಮತ್ತು ವಿಶ್ವಕ್ಕೆ ಬೇಕಾದ ಮಾನವ ಸಂಪತ್ತನ್ನು ಒದಗಿಸಬಹುದು. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿ. ಉತ್ತರ ಪ್ರದೇಶದಂತೆ ನಮ್ಮ‌ ರಾಜ್ಯದಲ್ಲೂ ಈ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಇಂತಹ ಕಾನೂನು ರೂಪಿಸಲು ರಾಜ್ಯ ಸರಕಾರ ಮುಂದೆ ಬರಬೇಕು. ಜನಸಂಖ್ಯೆ ಅಸಮತೋಲನವಾದರೆ ಆರ್ಥಿಕವಾಗಿ ಹೊಡೆತ ಎಂದು ಅವರು ಹೇಳಿದರು.

ಇನ್ನು ಮಲೇರಿಯಾ ನಿಯಂತ್ರಣ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಈಗ ಮಳೆಗಾಲ ಪ್ರಾರಂಭವಾಗಿದೆ. ಅಲ್ಲಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಬಗ್ಗೆ ಸರಕಾರ, ಆರೋಗ್ಯ ಇಲಾಖೆ ಎಚ್ಚರಿಕೆಯಿಂದ ಇರಬೇಕು ಟೈರ್‌, ಪ್ಲಾಸ್ಟಿಕ್‌ನಲ್ಲಿ ನೀರು ಶೇಖರಣೆಯಾಗಂತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...