ಉಪ್ಪಳ: ಇಲ್ಲಿನ ಸರಕಾರಿ ಪಿಯು ಕಾಲೇಜಿನಲ್ಲಿ ರ್‍ಯಾಗಿಂಗ್ ನಡೆದಿದ್ದು, ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಯ ಕೂದಲು ಕತ್ತರಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
ದ್ವಿತೀಯ ಪಿಯುಸಿಯ ತರಗತಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿಯ ಕೂದಲು ಕತ್ತರಿಸುವ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ರ್‍ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ದೂರು ನೀಡಿಲ್ಲ. ಇದರಿಂದ ಘಟನೆ ಬೆಳಕಿಗೆ ಬರಲು ತಡವಾಗಿದ್ದು, ವಿದ್ಯಾರ್ಥಿ ಈ ಬಗ್ಗೆ ಗಮನಕ್ಕೆ ತಂದಿಲ್ಲ.
ಯಾವುದೇ ದೂರು ನೀಡಿಲ್ಲ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಂಜೇಶ್ವರ ಪೊಲೀಸರು ಶಾಲೆಗೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.