Wednesday, December 1, 2021

ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿಗಳು ಹೇಳಿವೆ: ನಳಿನ್‌ ಕುಮಾರ್‌ ಕಟೀಲು

ಹುಬ್ಬಳ್ಳಿ: ಎಐಸಿಸಿ ನಾಯಕ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿಗಳು ಹೇಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

 


ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ಅವರಿಗೆ ಪಕ್ಷವನ್ನೇ ಮುನ್ನೆಡಿಸಲು ಆಗ್ತಿಲ್ಲ.

ಇನ್ನು ದೇಶ ಮುನ್ನೆಡಿಸುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ನಳಿನ್ ಕುಮಾರ್ ಕಟೀಲುರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಲೇವಡಿ ಮಾಡಿದರು.

ಸಿಂದಗಿ ತಾಲ್ಲೂಕು ಬಳಗಾನೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅಭ್ಯರ್ಥಿ ಅಶೋಕ ಮನಗೂಳಿ ಪರ ಮತಯಾಚಿಸಿದ ಅವರು,

ಕಟೀಲ್ ಅಂಥ ಹೇಳಿಕೆ ನೀಡಬಾರದಿತ್ತು ಎಂದರು. ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ವಾಗ್ದಾಳಿ ನಡೆಸಿದರು. ಪೆಟ್ರೊಲ್-ಡಿಸೇಲ್ ದರ‌ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಏನೂ ಅನುಕೂಲ ಮಾಡಿಕೊಟ್ಟಿಲ್ಲ. ಬಡವರ ನೋವು ಮೋದಿಗೆ ಅರ್ಥವಾಗಲ್ಲಾ. ಇಂಥ ಸರ್ಕಾರವನ್ನು ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...