Tuesday, May 30, 2023

‘ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ’ ಎಂದಿದ್ದ ರಾಹುಲ್ ಗಾಂಧಿಗೆ 2 ವರ್ಷ ಜೈಲು

ನವದೆಹಲಿ: ಮೋದಿ ಪದನಾಮ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಗುಜರಾತ್​ನ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.


ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದ್ದು, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.
ಕರೋಲ್‌ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಅವರು “ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿಯೇ ಇರಲಿ, ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಏಕೆ ಇದೆ?” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀರವ್‌ ಮೋದಿ, ಲಲಿತ್‌ ಮೋದಿ ಅವರಂತಹ ದೇಶಬಿಟ್ಟು ಪರಾರಿಯಾದ ವ್ಯಕ್ತಿಗಳೊಂದಿಗೆ ಹೋಲಿಸಿ ಅವರು ಪ್ರಶ್ನಿಸಿದ್ದರು.
ಈ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ಜಾಮೀನು ನೀಡಿದ್ದು ಮೇಲ್ಮನವಿ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ಶಿಕ್ಷೆಯನ್ನು ಸದ್ಯಕ್ಕೆ ಅಮಾನತಿನಲ್ಲಿಡಲಾಗಿದೆ.

LEAVE A REPLY

Please enter your comment!
Please enter your name here

Hot Topics