Connect with us

  LATEST NEWS

  ಉತ್ತರಕ್ಕೆ ರಾಹುಲ್…ದಕ್ಷಿಣಕ್ಕೆ ಪ್ರಿಯಾಂಕಾ..! ಕಾಂಗ್ರೆಸ್ ಪ್ಲ್ಯಾನ್‌ ಏನು ?

  Published

  on

  ದೆಹಲಿ/ಮಂಗಳೂರು:  ವಯನಾಡು ಹಾಗೂ ರಾಯ್‌ಬರೇಲಿ ಎರಡನ್ನೂ ಗೆದ್ದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದ್ಯ ದೇಶದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿರುವ ರಾಹುಲ್ ಗಾಂಧಿ ಸದ್ಯ ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಪ್ರವಾಸ ಮಾಡ್ತಾ ಇದ್ದಾರೆ. ಇತ್ತ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಉಪಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ರಾಜಸ್ಥಾನದಿಂದ ರಾಜ್ಯ ಸಭಾ ಸದಸ್ಯೆಯಾಗಿ ಸೋನಿಯಾ ಗಾಂಧಿ ಪಶ್ಚಿಮದ ರಾಜ್ಯಗಳತ್ತ ಗಮನ ಹರಿಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

  ಉತ್ತರ ಭಾರತದಲ್ಲಿ ರಾಹುಲ್ ನಿರಂತರ ಪ್ರವಾಸ..!


  ವಿರೋಧ ಪಕ್ಷದ ನಾಯಕನಾದ ಬಳಿಕ ಉತ್ತರ ಭಾರತದ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್ ಗಾಂಧಿ ತಮ್ಮ ಎಂದಿನ ಶೈಲಿಯಲ್ಲೇ ಜನರನ್ನು ಭೇಟಿಯಾಗ್ತಾ ಇದ್ದಾರೆ. ಅಸ್ಸಾಂ ನೆರೆ ಸಂತ್ರಸ್ತರು, ಹತ್ರಾಸ್‌ ಕಾಲ್ತುಳಿತ ಸಂತ್ರಸ್ತರು, ಮಣಿಪುರ ಗಲಭೆಯ ಸಂತ್ರಸ್ತರು, ಹೀಗೇ ಎಲ್ಲರನ್ನೂ ಭೇಟಿಯಾಗಿ ಸಾಂತ್ವಾನ ಹೇಳ್ತಾ ಇದ್ದಾರೆ. ತನ್ನ ಕ್ಷೇತ್ರವಾದ ರಾಯ್‌ ಬರೇಲಿಯಲ್ಲೂ ಸುತ್ತಾಡಿಕೊಂಡು ಫುಲ್ ಆಕ್ಟಿವ್ ಆಗಿದ್ದಾರೆ. ಸಂತ್ರಸ್ತರ ನೆರವಿಗೆ ಬಾರದ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸುವ ಮೂಲಕ ಉತ್ತರ ಭಾರತದ ಜನರ ವಿಶ್ವಾಸ ಗಳಿಸುತ್ತಿದ್ದಾರೆ. ಇನ್ನು ತನ್ನದೇ ಕ್ಷೇತ್ರ ರಾಯ್‌ ಬರೇಲಿಯಲ್ಲೂ ಕೂಡಾ ಓಡಾಡಿಕೊಂಡು ಜನರ ಜೊತೆ ಬೆರೆಯುತ್ತಿರುವ ರಾಹುಲ್ ಗಾಂಧಿ ಜನರಿಗೆ ಬಹಳಷ್ಟು ಹತ್ತಿರವಾಗಿದ್ದಾರೆ.

  ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್

  ದಕ್ಷಿಣದಲ್ಲಿ ಹವಾ ಸೃಷ್ಠಿಸಲು ಸಜ್ಜಾದ ಪ್ರಿಯಾಂಕಾ..!


  ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸಿದ್ದ ಪ್ರಿಯಾಂಕ ಗಾಂಧಿ ಶೀಘ್ರವಾಗಿ ಕೇರಳದ ವಯನಾಡಿಗೆ ಶಿಫ್ಟ್‌ ಆಗುತ್ತಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದ ಪ್ರಿಯಾಂಕಾ ಸದ್ಯ ಕೇರಳದತ್ತ ಗಮನಹರಿಸಿದ್ದಾರೆ. ರಾಹುಲ್ ಗಾಂಧಿಗೆ ಮರುಜೀವ ನೀಡಿದ್ದ ವಯನಾಡಿನಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಮುಂದಾಗಿದ್ದು, ಗೆಲುವಿನ ನಿರೀಕ್ಷೆಯಲ್ಲೂ ಇದ್ದಾರೆ. ಕೇರಳದಲ್ಲಿ ಗೆಲುವು ಸಾಧಿಸಿದ್ರೆ ದಕ್ಷಿಣ ಭಾರತದಲ್ಲಿ ಪ್ರಿಯಾಂಕ ಹವಾ ಸೃಷ್ಠಿಯಾಗುವ ಎಲ್ಲಾ ಲಕ್ಷಣ ಗೋಚರಿಸಿದೆ.

  ಗಾಂಧಿ ಕುಟುಂಬ ಮುಂದಿಟ್ಟು ಕಾಂಗ್ರೆಸ್ ತಂತ್ರಗಾರಿಕೆ..!
  ಉತ್ತರ, ದಕ್ಷಿಣ ಹಾಗೂ ಪಶ್ಚಿಮದಲ್ಲಿ ರಾಹುಲ್ , ಪ್ರಿಯಾಂಕಾ , ಸೋನಿಯಾ ಗಾಂಧಿ ಮೂಲಕ ಪಕ್ಷ ಸಂಘಟನೆಯ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಇದೊಂದು ಕಾಂಗ್ರೆಸ್‌ನ ಉತ್ತಮ ರಾಜಕೀಯ ತಂತ್ರಗಾರಿಕೆ ಅಂತ ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ರಾಹುಲ್ ಗಾಂಧಿಗೆ ಮೊದಲ ಅಗ್ನಿ ಪರೀಕ್ಷೆಯಾಗಿದೆ. ರಾಯ್‌ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ ಇಲ್ಲಿ ಎಷ್ಟು ಪ್ರಾಭಲ್ಯ ಬೆಳೆಸಿದ್ದಾರೆ ಅನ್ನೋದು ಉಪಚುನಾವಣೆ ಸಾಬೀತು ಪಡಿಸಲಿದೆ.

  ‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ’ ಕೇರಳದಲ್ಲಿ ಪೊಲೀಸರ ಬಲೆಗೆ ಬಿದ್ದ ದಿವ್ಯಾ ವಸಂತ

  ಉತ್ತರ ಪ್ರದೇಶದಲ್ಲಿ 15 ವರ್ಷದ ಬಳಿಕ ಬದಲಾವಣೆಯ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಆಶಾಕಿರಣವಾಗಿದ್ದಾರೆ. ಈ ಬಾರಿ ಇಂಡಿ ಒಕ್ಕೂಟದ ಜೊತೆ ಸೇರಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಇನ್ನಿಲ್ಲದ ಶಾಕ್ ನೀಡಿದ್ದಾರೆ. ರಾಜಕೀಯ ವಿಶ್ಲೇಷಕರ ಪ್ರಕಾರ ಇದು ಕಾಂಗ್ರೆಸ್‌ನ ಉತ್ತಮ ನಡೆಯಾಗಿದ್ದು, ಎದುರಾಳಿ ಪಕ್ಷಗಳಿಗೆ ದೊಡ್ಡ ಸವಾಲು ನೀಡುವ ಸಾಧ್ಯತೆಯನ್ನು ನಿರೀಕ್ಷಿಸಿದ್ದಾರೆ.

  LATEST NEWS

  ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

  Published

  on

  ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃ*ತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

  ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃ*ತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  LATEST NEWS

  ಶಿರೂರು ಗುಡ್ಡ ಕುಸಿ*ತ ಪ್ರಕರಣ : ನೀರುಪಾಲಾಗಿದ್ದ ವೃದ್ಧೆಯ ಶ*ವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

  Published

  on

  ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
  ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾ*ನಿಗೊಳಗಾಗಿದೆ.

  ಬೇಸರದ ಸಂಗತಿ ಎಂದರೆ, ಮೃ*ತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದಾರೆ.

  ಹೆಗಲಾದ ಪತ್ರಕರ್ತರು :
  ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶ*ವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃ*ತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂ*ಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

  ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್.ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶ*ವಸಂಸ್ಕಾರದಲ್ಲಿ ಸಹಕರಿಸಿದರು.

  ಇದನ್ನೂ ಓದಿ : 4 ವರ್ಷದ ಬಾಲಕಿ ಕಿಡ್ನಾ*ಪ್, ಅತ್ಯಾ*ಚಾರ ಮಾಡಿ ಕೊ*ಲೆ.. ಮೃ*ತದೇಹ ಏನು ಮಾಡಿದ್ದ ಗೊತ್ತಾ?
  ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
  ಶಿರೂರು ಗುಡ್ಡ ಕು*ಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರಿ ಸದ್ದಿನೊಂದಿಗೆ ಸ್ಫೋ*ಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾ*ಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

  ನೀರು‌ ಚಿಮ್ಮುತ್ತಿದ್ದಂತೆ ಬಾಂ*ಬ್‌ನಂತೆ ಸ್ಫೋ*ಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನಗಾಗಿ ಶೋಧ ಮುಂದುವರಿದಿದೆ.

  Continue Reading

  DAKSHINA KANNADA

  ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಮಧ್ಯೆ ಅಪ*ಘಾತ; ಹಲವರಿಗೆ ಗಾ*ಯ

  Published

  on

  ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿ*ಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾ*ಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

  ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪ*ಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾ*ಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾ*ನಿ ಸಂಭವಿಸಿಲ್ಲ.

  KSRTC, ಟ್ಯಾಂಕರ್ ಅಪ*ಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  Continue Reading

  LATEST NEWS

  Trending