Connect with us

LATEST NEWS

ರಾಯಾಚೂರು : ಮಹಿಳಾ ಪಿಎಸ್‌ಐ ಟಾರ್ಚರ್ ಆರೋಪ :ಡೆತ್ ನೋಟ್ ಬರೆದಿಟ್ಟು ಯುವಕ ನಾಪತ್ತೆ..!

Published

on

ಪೋಲೀಸ್‌ ಠಾಣೆಯ ಮಹಿಳಾ ಪಿಎಸ್ಸೈ ಗೀತಾಂಜಲಿ ಶಿಂಧೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ, ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ರಾಯಾಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ವರದಿಯಾಗಿದೆ.

ರಾಯಚೂರು : ಪೋಲೀಸ್‌ ಠಾಣೆಯ ಮಹಿಳಾ ಪಿಎಸ್ಸೈ ಗೀತಾಂಜಲಿ ಶಿಂಧೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ, ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ರಾಯಾಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ವರದಿಯಾಗಿದೆ.

ಸಿರವಾರ ನಿವಾಸಿ ತಾಯಣ್ಣ ನಾಪತ್ತೆಯಾದ ಯುವಕನಾಗಿದ್ದಾನೆ.

ಪಿಎಸ್ಸೈ ಗೀತಾಂಜಲಿ ಶಿಂಧೆ ಕಿರುಕುಳ ನೀಡುತ್ತಿರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಪಿಎಸ್ಸೈ ಗೀತಾಂಜಲಿ ಅವರೇ ಕಾರಣ ಎಂದು ತಾಯಣ್ಣ ಬರೆದಿದ್ದೆನ್ನಲಾದ ಡೆತ್ ನೋಟ್ ನಲ್ಲಿ ಆಪಾದಿಸಲಾಗಿದೆ.

’ಪಿಎಸ್ಸೈ ಗೀತಾಂಜಲಿ ಶಿಂಧೆ ಮೂರು ತಿಂಗಳಿಂದ ವಿನಾಕಾರಣ ನನ್ನನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದರು’ ಎಂದು ತಾಯಣ್ಣ ಆರೋಪ ಮಾಡಿದ್ದಾರೆ.

ಸಂಬಂಧಿಕರ ಜಮೀನಿನ ಭತ್ತ ಕಟಾವು ಮಾಡಿರುವ ಬಗ್ಗೆ ತಾಯಣ್ಣ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕಾರಣಕ್ಕಾಗಿ ತಾಯಣ್ಣನನ್ನು ಡಿಸೆಂಬರ್‌ 2 ರಂದು ಠಾಣೆಗೆ ಕರೆಸಿ, ಬಹಳ ಹೊತ್ತು ಲಾಕಪ್​ನಲ್ಲಿ ಕೂರಿಸಿದ್ದರು.

ಇದರಿಂದ ಮನ‌ನೊಂದಿರುವುದಾಗಿ ಯುವಕ ತಿಳಿಸಿದ್ದಾನೆ. ನನಗೆ ಹೊರಗಡೆ ಹೋದಾಗಲೆಲ್ಲ ಜೀಪ್​ ನಿಲ್ಲಿಸಿ, ನನಗೆ ಹೊಡೆದಂತಹ ಅನೇಕ ಪ್ರಸಂಗಗಳು ಇವೆ.

ಅದನ್ನು ಈವರೆಗೂ ನಾನು ಯಾರಿಗೂ ಹೇಳಿಕೊಂಡಿರಲಿಲ್ಲ. ಇದೀಗ ನಾನು ಬಹಳಷ್ಟು ನೊಂದಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ತಾಯಣ್ಣ ನಾಪತ್ತೆಯಾಗಿರುವುದರಿಂದ ಕುಟುಂಬದವರು ಆತಂಕಿತರಾಗಿದ್ದು, ಹುಡುಕಾಟ ಆರಂಭಿಸಿದ್ದಾರೆ ಜೊತೆಗೆ ಘಟನೆಯ ಬಗ್ಗೆ ಜಿಲ್ಲಾ ಎಸ್‌ ಪಿ ತನಿಖೆಗೆ ಆದೇಶಿಸಲಾಗಿದೆ.

Click to comment

Leave a Reply

Your email address will not be published. Required fields are marked *

bangalore

ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾ*ಸ್ಟ್ ಆಗಿ ಯುವಕನ ದುರ್ಮರ*ಣ

Published

on

ಬೆಂಗಳೂರು : ಏರ್‌ ಪ್ರೆಶರ್‌ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್‌ ಆಗಿ ಯುವಕ ಮೃ*ತಪಟ್ಟಿದ್ದಾನೆ. ಹುಡುಗಾಟದಲ್ಲಿ ಆಡಿದ ಆಟ ಘನಘೋರ ಅಂತ್ಯ ಕಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಯೋಗೀಶ್(28) ಮೃ*ತ ಯುವಕ.

ಹುಡುಗಾಟಕ್ಕೆ ಹೋಯ್ತು ಪ್ರಾಣ…!

ಮಾರ್ಚ್ 25ರಂದು ಬೈಕ್‌ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್‌ಸಿ (CNS) ಬೈಕ್ ಸರ್ವೀಸ್ ಸೆಂಟರ್‌ಗೆ ಯೋಗೀಶ್‌ ಎಂಬ ಯುವಕ ತೆರಳಿದ್ದ. ಅದೇ ಸರ್ವೀಸ್‌ ಸೆಂಟರ್‌ನಲ್ಲಿ ಯೋಗೀಶ್‌ ಸ್ನೇಹಿತ ಮುರುಳಿ ಎಂಬಾತ ಕೆಲಸ ಮಾಡುತ್ತಿದ್ದ. ಸ್ನೇಹಿತರಿಬ್ಬರೂ ಒಬ್ಬರಿಗೊಬ್ಬರು ತರ್ಲೆ, ತಂಟೆ ಮಾಡಿಕೊಂಡು ಆಟವಾಡುತ್ತಿದ್ದರು. ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್ ಪ್ಲೇಶರ್ ಪೈಪ್‌ನಿಂದ ಇಬ್ಬರು ಆಟ ಆಡುತ್ತಿದ್ದರು.

ಮೊದಲಿಗೆ ಮುರುಳಿ, ಯೋಗೀಶ್‌ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಏರ್‌ ಪ್ಲೇಶರ್‌ನಿಂದ ಗಾಳಿ ಬಿಟ್ಟಿದ್ದಾನೆ. ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್‌ ಹೊಟ್ಟೆ ಊದಿಕೊಂಡು ಕರುಳು ಬ್ಲಾ*ಸ್ಟ್ ಆಗಿದೆ. ತಕ್ಷಣ ಯೋಗೀಶ್ ನರಳಾಟ ಕಂಡು ಮುರುಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗಿಶ್ ಮೃ*ತಪಟ್ಟಿದ್ದಾನೆ.

ಸದ್ಯ ಯೋಗೀಶ್‌ ಪೋಷಕರು ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಮುರಳಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಕನ್ಯಾನ ಸದಾಶಿವ ಶೆಟ್ಟಿಗೆ ಮಾತೃ ವಿಯೋಗ

Published

on

ಬೆಳ್ತಂಗಡಿ : ಕೊಡುಗೈ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ತಾಯಿ, ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಪತ್ನಿ ಲೀಲಾವತಿ ಶೆಟ್ಟಿ ನಿಧ*ನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮೀ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಗಣ್ಯರ ಸಂತಾಪ :

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಶಶಿಧರ್ ಶೆಟ್ಟಿ, ಯಕ್ಷಧ್ರುವ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Continue Reading

DAKSHINA KANNADA

ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?

Published

on

ಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್‌ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.

ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಮಲಯಾಳಂ ಸಿನಿಮಾದಲ್ಲಿ ಬಿಝಿ :

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ಮಲಯಾಳಂನಲ್ಲಿ RIAL 5- ಹಾರ‌ರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.

Continue Reading

LATEST NEWS

Trending