Connect with us

LATEST NEWS

ಉಸ್ತುವಾರಿ ಸಚಿವರ ಭೇಟಿಗೆ ನಿರಾಕರಣೆ: ಚರಂಡಿ ನೀರು ಮೈಮೇಲೆ ಸುರಿ​ದು​ ಪ್ರತಿಭಟಿಸಿದ ಮಹಿಳೆ..!

Published

on

ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರು ತಮ್ಮ ಬೇಡಿಕೆ ಸಲ್ಲಿಸಲು ಉಸ್ತುವಾರಿ ಸಚಿವರ ಭೇಟಿಗೆ ಅವಕಾಶ ನೀಡದ ಕಾರಣ  ರಾಜಕಾಲುವೆಯಲ್ಲಿ ನಿಂತು ಕೊಳಕು ನೀರನ್ನು ಮೈಮೇಲೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ರಾಯಾಚೂರಿನಲ್ಲಿ ವರದಿಯಾಗಿದೆ.

ರಾಯಚೂರು: ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರು ತಮ್ಮ ಬೇಡಿಕೆ ಸಲ್ಲಿಸಲು ಉಸ್ತುವಾರಿ ಸಚಿವರ ಭೇಟಿಗೆ ಅವಕಾಶ ನೀಡದ ಕಾರಣ ರಾಜಕಾಲುವೆಯಲ್ಲಿ ನಿಂತು ಕೊಳಕು ನೀರನ್ನು ಮೈಮೇಲೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ರಾಯಾಚೂರಿನಲ್ಲಿ ವರದಿಯಾಗಿದೆ.

ಸಫಾಯಿ ಕರ್ಮಚಾರಿಗಳಿಗೆ ಪ್ರತ್ಯೇಕ ಸ್ಮಶಾನ ಮತ್ತು ರಾಷ್ಟ್ರೀಯ ಗುರುತಿನ ಚೀಟಿ ನೀಡಬೇಕು ಎಂದು ಒತ್ತಾಯಿಸಿ ಸಫಾಯಿ ಕರ್ಮಚಾರಿಯಾಗಿರುವ ಗೀತಾ ಸಿಂಗ್ ಎನ್ನುವವರು ರಾಜಕಾಲುವೆಗೆ ಇಳಿದು ಕೊಳಕು ನೀರನ್ನು ಮೈಮೇಲೆ ಸುರಿದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಸಚಿವರನ್ನು ಭೇಟಿ ಮಾಡಿ ಬೇಡಿಕೆಗಳನ್ನು ಸಲ್ಲಿಸಲು ಬಂದಿದ್ದ ಗೀತಾ ಸಿಂಗ್ ಅವರು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಭೇಟಿಗೆ ಅವಕಾಶ ನೀಡದ ಕಾರಣ ಪ್ರತಿಭಟನೆ ನಡೆಸಿದರು.

ಸಚಿವರ ಭದ್ರತಾ ಸಿಬ್ಬಂದಿ ಅವರನ್ನು ಭೇಟಿಯಾಗಲು ಅಥವಾ ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಇದರಿಂದ ಕುಪಿತರಾದ ಅವರು ಸಮೀಪದಲ್ಲೇ ಇದ್ದ ಚರಂಡಿಗೆ ಹಾರಿ ಪ್ರತಿಭಟನೆ ನಡೆಸಿದ್ದಾರೆ.

ಇತರರು ಆಕೆಯನ್ನು ತಡೆಯಲು ಪ್ರಯತ್ನಿಸಿದರೂ, ಪ್ರಯೋಜನವಾಗಲಿಲ್ಲ. ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.ಗೀತಾ ಸಿಂಗ್ ಪ್ರತಿಭಟನೆ ನಡೆಸುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಡಾ.ಶರಣಪ್ರಕಾಶ ಪಾಟೀಲ್ ಅವರನ್ನು ರಾಯಚೂರು ಉಸ್ತುವಾರಿ ಸಚಿವರನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿತ್ತು. ಅವರ ನೇಮಕವನ್ನು ವಿರೋಧಿಸಿ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿದ್ದವು.  ಸ್ಥಳೀಯರು ಆಗಿರುವ ಮತ್ತು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಎನ್.ಎಸ್. ಬೋಸರಾಜು ಅವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದು ಜನರು ಒತ್ತಾಯಿಸಿದ್ದರು.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending