Connect with us

LATEST NEWS

ಮಸಾಜ್ ಮತ್ತು ಸ್ಪಾ ಸೆಂಟರ್ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರ ಬಂಧನ

Published

on

ಚೆನ್ನೈ: ಇಲ್ಲಿನ ಸುಮಾರು 151 ಮಸಾಜ್ ಮತ್ತು ಸ್ಪಾ ಸೆಂಟರ್​ಗಳ ಮೇಲೆ ದಾಳಿ ನಡೆಸಿರುವ ತಮಿಳುನಾಡಿನ ಪೊಲೀಸರು ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಹಲವರನ್ನು ಬಂಧಿಸಿದ್ದಾರೆ.


ಅಕ್ರಮವಾಗಿ ಮಸಾಜ್ ಸೆಂಟರ್​ಗಳನ್ನು ನಡೆಸುತ್ತಿದ್ದ ಜಾಡು ಹಿಡಿದು ಕಾರ್ಯಾಚರಣೆ ನಡೆಸಿದ ತಮಿಳುನಾಡು ಪೊಲೀಸರು

ನವೆಂಬರ್ 21ರ ಮಧ್ಯರಾತ್ರಿ 151 ಮಸಾಜ್ ಸೆಂಟರ್​ಗಳ ಮೇಲೆ ದಾಳಿ ನಡೆಸಿದ್ದಾರೆ. ಚೆನ್ನೈ ತಿಯಗರಾಯ ನಗರ್ ಮತ್ತು ಕಿಲ್ಪೌಕ್​ನ ಸುಮಾರು 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ನಡೆಸುತ್ತಿದ್ದ ಆರೋಪದಲ್ಲಿ ಹಲವರನ್ನು ಬಂಧಿಸಲಾಗಿದ್ದು, ಕಾರ್ಯಾಚರಣೆಯ ನೇತೃತ್ವವನ್ನು ಡೆಪ್ಯುಟಿ ಕಮೀಷನರ್ ಕಾರ್ತಿಕೇಯನ್ ವಹಿಸಿಕೊಂಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ವೇಶ್ಯಾವಾಟಿಕೆ ನಿಗ್ರಹ ಘಟಕದ ಇನ್ಸ್​ಪೆಕ್ಟರ್​ಗಳಾದ ಶರವಣನ್

ಮತ್ತು ಶ್ಯಾಮ್ ವಿನ್ಸೆಂಟ್ ಅವರ ನಿವಾಸಗಳ ಮೇಲೆ ತಮಿಳುನಾಡಿನ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ವಿಚಾರಣೆ ನಡೆಸಿತ್ತು.

ಈ ಬೆನ್ನಲ್ಲೇ ಚೆನ್ನೈನಲ್ಲಿರುವ ಸುಮಾರು 151 ಮಸಾಜ್ ಸೆಂಟರ್​ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending