LATEST NEWS
ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ : 2 ಲಾರಿ ಸಹಿತ 3 ಮೆಟ್ರಿಕ್ ಟನ್ ಮರಳು ವಶಕ್ಕೆ..!
Published
2 years agoon
By
Adminಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ 2 ಲಾರಿ ಸಮೇತ 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿರುತ್ತಾರೆ.
ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ, ಉಡುಪಿ ತಾಲೂಕು ಪೆರಂಪಳ್ಳಿ ಪರಿಸರದಲ್ಲಿ ದಲ್ಲಿ (ಸ್ವರ್ಣ ನದಿ) ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರ ಮಾಹಿತಿ ಮೇರೆಗೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಅವರು ರಾತ್ರಿ ಸಮಯ 10.00 ಕ್ಕೆ ದಾಳಿ ನಡೆಸಿ ಎರಡು ಲಾರಿ ಮತ್ತು 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಚಾಲಕ ಯೋಗೇಶ್ವರ್ ಶೆಟ್ಟಿಗಾರ್ ಸಹಕರಿಸುತ್ತಾರೆ. ಭೂವಿಜ್ಞಾನಿ ಯವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವ ವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ವಾಹನಗಳನ್ನು ಮಣಿಪಾಲ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.
LATEST NEWS
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Published
5 minutes agoon
22/11/2024By
NEWS DESK3ಮಂಗಳೂರು/ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಈಗಾಗಲೇ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಸೋಲು, ಗೆಲುವಿನ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನವೆಂಬರ್ 23ಕ್ಕೆ ನಿರ್ಧಾರವಾಗಲಿದ್ದು, ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಯು ಬಂದಿದೆ. ಮೂರು ಕ್ಷೇತ್ರಗಳಲ್ಲಿ 2 ಕ್ಷೇತ್ರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಒಂದರಲ್ಲಿ ಕಾಂಗ್ರೇಸ್ ಗೆಲುವು ಸಾಧಿಸಲಿದೆ ಎಂದು ಹೇಳಿದೆ.
ಇದನ್ನೂ ಓದಿ:ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ
ಜಿದ್ದಾಜಿದ್ದಿನ ಕ್ಷೇತ್ರವಾದ ಚೆನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ. ಯೋಗೆಶ್ವರ್ ಸೋಲಲಿದ್ದು, ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಕಾಣಲಿದ್ದಾರೆ ಎಂಬ ಲೆಕ್ಕಚಾರವಿದೆ. ಹೀಗಾಗಿ ಜೆಡಿಎಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. ಆದರೆ ಕಾಂಗ್ರೇಸ್ ನ ಡಿಕೆ ಬ್ರದರ್ಸ್ ಗೆ ಚನ್ನಪಟ್ಟಣ ಕ್ಷೇತ್ರ ತಮ್ಮ ಪ್ರತಿಷ್ಥೆಯ ಕಣವಾಗಿದೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಸ್ಪರ್ಧಿಸಿದ್ದ ಅನ್ನಪೂರ್ಣ ತುಕರಾಂ ಜಯ ಗಳಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳುತ್ತಿದೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರ ಕೋಟೆಯನ್ನು ಉಳಿಸಿಕೊಂಡಂತಾಗುತ್ತದೆ.
ಮುಸ್ಲಿಂ ಪ್ರಾಬಲ್ಯವಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಲಿಂಗಾಯುತರ ಮತಗಳೇ ನಿರ್ಣಾಯಕವಾಗಿದೆ. ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಬಿಜೆಪಿ ಆಭ್ಯರ್ಥಿಯಾಗಿ ಸ್ಪರ್ಧಿಸಿದರೆ, ಅವರ ವಿರುದ್ದ ಕಾಂಗ್ರೆಸ್ ನ ಯಾಸಿರ್ ಅಹಮಾದ್ ಖಾನ್ ಪಠಣ್ ಸ್ಪರ್ಧಿಸಿದ್ದಾರೆ. ಈ ಬಾರಿ ಶಿಗ್ಗಾಂವಿಯಲ್ಲಿ ಮತದಾರರು ಬಿಜೆಪಿಯತ್ತ ವಾಲಿದ್ದಾರೆ. ಆ ಮೂಲಕ ಭರತ್ ಬೊಮ್ಮಾಯಿ ಗೆಲ್ಲುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಒಂದು ಕಡೆ ಕಾಂಗ್ರೆಸ್ ಗೆ ಈ ಉಪಚುನಾವಣೆಯ ಗೆಲುವು ಪ್ರತಿಷ್ಠೆಯ ಕಣವಾದರೆ, ಬಿಜೆಪಿ- ಜೆಡಿಎಸ್ ಗೆ ಮೂರು ಕ್ಷೇತ್ರವನ್ನು ಗೆಲ್ಲುವುದರ ಮೂಲಕ ಸರ್ಕಾರದ ವೈಫಲ್ಯವನ್ನು ತೋರಿಸುವ ಪ್ರಯತ್ನವಾಗಲಿದೆ. ಇದಕ್ಕೆಲ್ಲಾ ನಾಳೆಯ ಫಲಿತಾಂಶ ಉತ್ತರ ನೀಡಲಿದೆ.
Baindooru
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Published
14 minutes agoon
22/11/2024By
NEWS DESK4ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು.
ಇದನ್ನೂ ಓದಿ : ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಪೆರಂಪಳ್ಳಿಗೆ ತೆರಳುವ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Baindooru
ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
Published
21 minutes agoon
22/11/2024By
NEWS DESK2ಬೆಂಗಳೂರು: ಇನ್ಮುಂದೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ! ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉಬರ್‌ನಿಂದ ಹೊಸ ಯೋಜನೆ. ಹೌದು, ಬೆಂಗಳೂರು ಎಂದಾಕ್ಷಣ ತಟ್ಟನೆ ನೆನಪಾಗುವುದು ಟ್ರಾಫಿಕ್ ಜಾಮ್.. ಇದನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಉಬರ್ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಶೀಘ್ರವೇ ಬೆಂಗಳೂರಿನಲ್ಲಿ ಉಬರ್ ಶಟಲ್ ಬಸ್ ಸೇವೆಯನ್ನು ಪರಿಚಯಿಸುತ್ತಿದೆ. ಈ ಬಗ್ಗೆ ಈಗಾಗಲೇ ಘೋಷಣೆ ಕೂಡ ಮಾಡಲಾಗಿದೆ. ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ. ದೆಹಲಿ, ಕೋಲ್ಕತ್ತಾ ಬಳಿಕ ಬೆಂಗಳೂರಿನಲ್ಲಿ ಈ ಉಬರ್ ಶಟಲ್ ಬಸ್ ಸೇವೆ ಜಾರಿಗೆ ಬರುತ್ತಿದೆ.
ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಜಾಗತಿಕ ರೈಡ್-ಹೇಲಿಂಗ್ ಸಂಸ್ಥೆಯ ಭಾರತದಲ್ಲಿನ ಹೊಸ ಕೊಡುಗೆಯಾದ ಉಬರ್ ಷಟಲ್ ಅನ್ನು ಅವರು ಪರಿಶೀಲಿಸಿದರು.ಈಗಲೇ ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಉಬರ್ ಷಟಲ್ ಅನ್ನು ಪ್ರಾರಂಭಿಸಲಾಗಿದೆ, ಹೆಚ್ಚಿನ ಜನರು ತಮ್ಮ ಪ್ರಯಾಣಗಾಗಿ ದೊಡ್ಡ ವಾಹನಗಳಲ್ಲಿ ಕಾಯ್ದಿರಿಸಲು ಸಹಾಯ ಮಾಡುತ್ತದೆ. ಇದು ನಿಗದಿತ ಮಾರ್ಗಗಳಲ್ಲಿ ಚಲಿಸುತ್ತದೆ ಮತ್ತು ಮುಂಚಿತವಾಗಿ ಬುಕ್ ಮಾಡಿದ ಸೀಟುಗಳನ್ನು ನೀಡುತ್ತದೆ.
ಉಬರ್ ಶಟಲ್ ಬಸ್ ಸೇವೆಯಿಂದ ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಮತ್ತು ಬೆಂಗಳೂರಿನಂತಹ ನಗರಗಳಿಗೆ ಇದು ಉತ್ತಮವಾಗಿದೆ. ಹೆಚ್ಚು ಪರಿಣಾಮಕಾರಿ ಸಾರಿಗೆ ವ್ಯವಸ್ಥೆಯನ್ನು ರಚಿಸಲು ತಂತ್ರಜ್ಞಾನ ಆಧಾರಿತ ಪರಿಹಾರಗಳ ಅಗತ್ಯವನ್ನು ಖರ್ಗೆ ಪ್ರತಿಪಾದಿಸಿದ್ದಾರೆ ಎಂದು ಉಬರ್ ಹೇಳಿಕೆಯಲ್ಲಿ ತಿಳಿಸಿದೆ.
ಉಬರ್ ಇಂಡಿಯಾದ ಅಧ್ಯಕ್ಷ ಪ್ರಭಜೀತ್ ಸಿಂಗ್ ಅವರು ಈ ಹಿಂದೆ ಕಂಪನಿಯು “ಬೆಂಗಳೂರಿನಲ್ಲಿ ಬಸ್ ಸೇವೆಯನ್ನು ಪ್ರಾರಂಭಿಸಲು ಬಹು ಮಧ್ಯಸ್ಥಗಾರರೊಂದಿಗೆ ಸಕ್ರಿಯ ಮಾತುಕತೆ ನಡೆಸುತ್ತಿದೆ” ಎಂದು ಹೇಳಿದ್ದರು. “ಈ ರೀತಿಯ ಸೇವೆಯನ್ನು ಪ್ರಾರಂಭಿಸಲು ನಮಗೆ ನಿಯಂತ್ರಣದ ಅಗತ್ಯವಿದೆ ಮತ್ತು ಅದನ್ನು ಸ್ವೀಕರಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು. “ನಿಯಂತ್ರಕರು ನಮಗೆ ಅವಕಾಶ ಮಾಡಿಕೊಡುತ್ತಾರೆ ಎಂದು ಭಾವಿಸಿ ನಾವು ಉಬರ್ ಬಸ್ ಅನ್ನು ಬೆಂಗಳೂರಿಗೆ ತರಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ನನ್ನ ಉತ್ಸಾಹದ ಯೋಜನೆಯಾಗಿದೆ, ಆದರೆ ಇದು ಗ್ರಾಹಕರು ಬಯಸಿದ ರೀತಿಯಲ್ಲಿ ನಾವು ತಿರುಗುತ್ತಿರುವ ಸ್ಥಳೀಕರಣದ ಪ್ರಯಾಣವನ್ನು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಸಿಂಗ್ ಪ್ರಕಾರ, ಶಟಲ್ ಸೇವೆಯು ಹೆಬ್ಬಾಳದಿಂದ ಮತ್ತು ಹೊರವರ್ತುಲ ರಸ್ತೆಯಲ್ಲಿರುವ ಟೆಕ್ ಹಬ್‌ನವರೆಗೆ ಚಲಿಸಬಹುದು.
LATEST NEWS
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ
ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ
ಕಾಸರಗೋಡು: ಮಹಿಳಾ ಪೊಲೀಸ್ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ
ವಾಟ್ಸಾಪ್ ಗ್ರೂಪ್ ನೋಡಿ ಪತ್ನಿಗೆ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ..!
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ