Sunday, November 27, 2022

ಸುಳ್ಯ: ಮಂಗಳೂರಿಗೆ ಬರುವ ರೈಲ್ವೇ ಹಳಿ ತಪ್ಪಿಸಲು ಷಡ್ಯಂತ್ರ..!

ಸುಳ್ಯ: ಯಾರೋ ಕಿಡಿಗೇಡಿಗಳು ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಕಾಸರಗೋಡು ತಾಲೂಕಿನ ಹಲವೆಡೆ ರೈಲು ಅಪಘಾತಕ್ಕೆ ಸಂಚು ರೂಪಿಸುವ ಹಿನ್ನೆಲೆ ರೈಲ್ವೆ ಹಳಿಗಳಿಗೆ ಹಾನಿ ಮಾಡಲು ಯತ್ನಿಸಿರುವುದು ತಿಳಿದುಬಂದಿದೆ.


ಇಲ್ಲಿನ ಕೋಟ್ಟಿಕುಳಂ ಸೇರಿದಂತೆ ಹಲವು ಕಡೆಗಳಲ್ಲಿ ದುಷ್ಕರ್ಮಿಗಳು ಪತ್ತೆಯಾಗಿದೆ. ಸುಗಮ ರೈಲು ಸಂಚಾರಕ್ಕೆ ತೊಡಕು ಉಂಟುಮಾಡುವ ಉದ್ಧೇಶದಿಂದ ಹಳಿಗಳಿಗೆ ಕಲ್ಲು, ಕಾಂಕ್ರಿಟ್ ತುಂಡು ಕಬ್ಬಿಣದ ಬೀಮ್ ಅಡ್ಡ ಇಡಲಾಗಿದೆ.

ಘಟನೆಯ ವಿಚಾರ ಬೆಳಕಿಗೆ ಬರುತ್ತಲೇ ಕೇರಳ ಪೊಲೀಸ್ ಇಲಾಖೆ ಹಾಗೂ ರೈಲ್ವೆ ಭದ್ರತಾ ಪಡೆಯು ಗಂಭೀರವಾಗಿ ಪರಿಗಣಿಸಿ ಸ್ಥಳೀಯ ಪೊಲೀಸರ ಜೊತೆಗೂಡಿ ತನಿಖೆ ಆರಂಭಿಸಿದ್ದಾರೆ.

ಕಳೆದೊಂದು ವಾರದ ಮಧ್ಯೆ ಕಾಸರಗೋಡಿನ ವಿವಿಧ ಕಡೆಗಳಲ್ಲಿ ಈ ರೀತಿಯ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ಆಗಸ್ಟ್ 21ರಂದು ಭಾನುವಾರ ಕಾಸರಗೋಡು – ಕಾಂಞಗಾಡು ಮಧ್ಯೆ ಹಾದುಹೋಗುವ ಹಳಿಗಳಲ್ಲಿ ಕೋಟಿಕುಳಂ-ಬೇಕಲ ನಡುವೆ ಮೊದಲು ಈ ದುಷ್ಕೃತ್ಯ ನಡೆಸಲಾಗಿತ್ತು.

ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು, ಬೀಮ್ ಪತ್ತೆಯಾಗಿತ್ತು. ರೈಲ್ವೆ ಗಾರ್ಡ್ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದು ಬಂದಿದೆ.

ತೀವ್ರ ನಿಗಾಕುಂಬಳೆ ನಿಲ್ದಾಣದ ಬಳಿಯಲ್ಲೂ ರೈಲ್ವೆ ಹಳಿಗಳ ಮೇಲೆ ಕಲ್ಲುಗಳು ಪತ್ತೆಯಾಗಿತ್ತು. ಸುಮಾರು 35 ಕೆಜಿ ತೂಗುವ ಕಾಂಕ್ರೀಟ್ ತುಂಡೊಂದು ಪತ್ತೆಯಾಗಿದೆ.

ಕಳೆದ ಶನಿವಾರ ಚಿಟ್ಟಾರಿ ಎಂಬಲ್ಲೂ ಕೊಯಂಬುತ್ತೂರು-ಮಂಗಳೂರು ರೈಲಿನ ಮೇಲೆ ಕಲ್ಲೆಸೆತ ನಡೆದಿದೆ. ಜೊತೆಗೆ ತೃಕ್ಕನ್ನಾಡ್, ಕುಂಬಳೆ, ಹೊಸದುರ್ಗ, ತಳಂಗರೆದಲ್ಲಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಪ್ರಯತ್ನಿಸಿದ್ದಾರೆ. ಮಂಗಳೂರು – ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚರಿಸುವ ರೈಲು ಮಾರ್ಗದಲ್ಲೂ ಕಲ್ಲುಗಳು ಪತ್ತೆಯಾಗಿವೆ ಎಂದು ಎನ್ನಲಾಗಿದೆ.

ಹೀಗಾಗಿ ಸ್ಥಳಕ್ಕೆ ಉತ್ತರ ವಲಯ ರೈಲ್ವೆ ಪೊಲೀಸ್ ಡಿವೈಎಸ್​ಪಿ ಕೆ.ಎನ್.ರಾಧಾಕೃಷ್ಣನ್ ಭೇಟಿ ನೀಡಿದ್ದಾರೆ.ಕಳೆದ ಎರಡು ವರ್ಷಗಳ ಹಿಂದೆ ಕೂಡ ಇದೆ ರೀತಿಯ ಘಟನೆಗಳು ಈ ಕಡೆಗಳಲ್ಲಿ ವರದಿಯಾಗಿತ್ತು.

ಕಾಸರಗೋಡು- ಮಂಗಳೂರು ಹಾದಿಯ ಮೊಗ್ರಾಲು ಪುತ್ತೂರು, ಆರಿಕ್ಕಾಡಿ, ಉಪ್ಪಳ ಮುಂತಾದ ಕಡೆಗಳಲ್ಲಿ ಇದೇ ರೀತಿಯ ಘಟನೆಗಳು ನಡೆದಿದ್ದವು.

ಅಂದು ಪೊಲೀಸರು, ರೈಲ್ವೆ ರಕ್ಷಣಾ ಪಡೆ, ಸ್ಥಳೀಯರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಈಗ ಮತ್ತೆ ಇಂತಹ ಕೃತ್ಯಗಳೇ ನಡೆದಿರುವುದು ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಕೈಗೊಂಡು ತೀವ್ರ ನಿಗಾ ವಹಿಸಿದ್ದಾರೆ

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...