Connect with us

BANTWAL

ಬಂಟ್ವಾಳ: ಭಾರೀ ಮಳೆಗೆ ಮರ ಬಿದ್ದು ವಾಹನ ಜಖಂ-ಮನೆ ಸಂಪೂರ್ಣ ಕುಸಿತ

Published

on

ಬಂಟ್ವಾಳ: ಇಂದು ಮಧ್ಯಾಹ್ನದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರು ಹಾಗೂ ರಿಕ್ಷಾವೊಂದು ಜಖಂಗೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.


ಬಂಟ್ವಾಳ ಹೃದಯಭಾಗದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಸಮೀಪದಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿದ್ದ ಮೇ ಪ್ಲವರ್ ಮರವೊಂದು ಗಾಳಿಗೆ ಬುಡಸಮೇತ ಉರುಳಿ ಬಿದ್ದಿದೆ. ಈ ಸಂದರ್ಭ ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದ ಮಾರುತಿ ಸುಜುಕಿ 800 ಕಾರು ಹಾಗೂ ಬಾಡಿಗೆ ರಿಕ್ಷಾವೊಂದು ಜಖಂಗೊಂಡಿದೆ. ಎರಡೂ ವಾಹನಗಳಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾರಿಗೂ ಅಪಾಯವಾಗಿಲ್ಲ.


ಸಮಾಜ ಸೇವಕ ಹಾಗೂ ವಿಜಯಲಕ್ಮೀ ಸಂಸ್ಥೆಯ ಮಾಲೀಕ ರಾಘವೇಂದ್ರ ನಾಯಕ್ ಅವರು ಕ್ರೇನ್ ಮೂಲಕ ರಸ್ತೆಯಲ್ಲಿ ಅಡ್ಡವಾಗಿ ಬಿದ್ದ ಮರವನ್ನು ಕೆಲವೇ ಗಂಟೆಗಳಲ್ಲಿ ತೆರವು ಮಾಡಿ ಸಾರ್ವಜನಿಕ ರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಅವರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಸಹಕರಿಸಿದರು.

ಮನೆ ಸಂಪೂರ್ಣ ಜಖಂ
ಬಂಟ್ವಾಳ ತಾಲೂಕಿನ ಆಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಮ್ಮುಕೋಡಿಯ ಲೀನಾ ಕ್ರಾಸ್ತ ಎಂಬುವವರ ಮನೆ ಮಳೆಯಿಂದ ಸಂಪೂರ್ಣ ಕುಸಿದು ಜಖಂಗೊಂಡಿದ್ದು ಹಾಗೂ ಲೋರೆಟ್ಟೋವಿನ ದಿ. ಎಫ್ರೇಮ್ ಸಿಕ್ವೇರಾ ಇವರ ಮನೆಯ ಕಂಪೌಂಡ್ ಕುಸಿದು ಮನೆಗೆ ಹಾನಿಗೊಂಡಿದೆ. ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.


ಈ ಸಂದರ್ಭ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪಿಯೂಸ್ ಎಲ್ ರೊಡ್ರಿಗಸ್, ಪುರಸಭಾ ಸದಸ್ಯ ವಾಸು ಪೂಜಾರಿ ಲೋರೆಟೊ,ರಿಚಾರ್ಡ್ ಮೆನೇಜಸ್, ರೋಕೇಶ್ ಡಿಸೋಜ, ಕಿರಣ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

 

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending