Connect with us

DAKSHINA KANNADA

ಮಳೆಗಾಲ ಆರಂಭ : ಶಿರಾಡಿ ಘಾಟ್ ತೆರಳಿ ರಸ್ತೆ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ..!

Published

on

ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಹಾಸನ: ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಢೆಸಿದ್ದಾರೆ.

ಶಿರಾಡಿ ಘಾಟ್ ಮಾರ್ಗದಲ್ಲಿ ನಿರ್ಮಾಣವಾಗಲಿರುವ 3.8 KM ಉದ್ದದ ಸುರಂಗ ಮಾರ್ಗದ ಪ್ರಾಥಮಿಕ ಹಂತದ ರೂಪುರೇಷೆ ತಯಾರು ಮಾಡಲಾಗಿದ್ದು ಕೇಂದ್ರದ ಮಂತ್ರಿಗಳು ಒಪ್ಪಿಗೆ ಕೊಟ್ಟ ಕೂಡಲೇ ಕಾಮಗಾರಿ ಆರಂಭವಾಗಲಿದೆ ಎಂದಿದ್ದಾರೆ.

ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯಲ್ಲಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 30 ಕಿಲೋಮೀಟರ್ ಉದ್ದದ ಕರ್ನಾಟಕದ ಹೆಮ್ಮೆಯ ಯೋಜನೆ ಇದಾಗಿದೆ.

ಅದರಲ್ಲಿ 3.8 ಕಿಲೋಮೀಟರ್ ಸುರಂಗ ಇದ್ದರೆ, 10 ಕಿ.ಮೀ ವಯಡಕ್ಟ್‌ ಇರಲಿದೆ ಎಂದರು.

ಮಾರೇನಹಳ್ಳಿಯಿಂದ ಪ್ರಾರಂಭವಾಗಿ ಅಡ್ಡಹೊಳೆಯವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇಲ್ಲಿ ಬಹಳಷ್ಟು ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ವಿವರವಾದ ಅಂದಾಜು ಮಾಡಬೇಕಿದೆ.

ಈಗಾಗಲೇ ಒನ್‌ವೇ ಸಂಚಾರದ ಪ್ರಸ್ತಾಪ ಬಂದಿದೆ. ಒಂದು ಕಡೆಯಿಂದ ವಾಹನಗಳು ಹೋಗಲು ಒಂದು ಕಡೆಯಿಂದ ಬರಲು ಅನುಕೂಲ ಆಗುತ್ತದೆ ಎಂದು ಹೇಳಿದರು. ಹಾಸನದಿಂದ ಸಕಲೇಶಪುರ ಬೈಪಾಸ್‌ವರೆಗೆ ನ.1 ರೊಳಗೆ ಕಾಮಗಾರಿ ಮುಗಿಸಲು ಸಮಯ ನೀಡಿದ್ದೇವೆ.

ಅಧಿಕಾರಿಗಳು ಮುದಿನ ಕಾಮಗಾರಿ ಮುಗಿಸಲು ಮುಂದಿನ ವರ್ಷ ಮಾ.24 ರವರೆಗೆ ಸಮಯ ಕೇಳಿದ್ದಾರೆ. ಸಂಪೂರ್ಣ ಕಾಮಗಾರಿ ಮಾಡಲು ಸಮಯ ಕೇಳಿದ್ದಾರೆ. ನಾವು ಪ್ರತಿ ತಿಂಗಳು ಯೋಜನೆಯ ಪ್ರಗತಿಯನ್ನು ಪರಿಶೀಲಿಸುತ್ತೇವೆ ಎಂದು ಹೇಳಿದರು.

ಎಲ್ಲಾ ಸರ್ಕಾರಗಳು ಇದ್ದ ವೇಳೆ ಕಾಮಗಾರಿ ಯಾಕೆ ವಿಳಂಬವಾಗಿದೆ ಗೊತ್ತಿಲ್ಲ. ಏಕೆ ಆಗಿದೆ ಎಂಬುದನ್ನು ಹುಡುಕುವ ಬದಲು ಮುಂದಿನ ಪರಿಹಾರ, ಎಷ್ಟು ಸಮಯದ ಅವಧಿಯಲ್ಲಿ ಕಾಮಗಾರಿ ಮುಗಿಸುತ್ತೇವೆ ಎನ್ನುವುದು ಮುಖ್ಯ.

ಎರಡು ಟೈಂ ಕೊಟ್ಟಿದ್ದೇವೆ ಒಂದು ನ.1, ಇನ್ನೊಂದು ಮಾ.24 ಕ್ಕೆ ಮುಗಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡ್ತಿವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರಿಗಳ ಬೇಜವಾಬ್ದಾರಿಯಿಂದ ಕೆಲಸ ವಿಳಂಬವಾಗಿದೆ. ಮಳೆಗಾಲದಲ್ಲಿ ಭೂಕುಸಿತವಾಗಿದೆ. ಅದಕ್ಕೆ ಕಡ್ಡಾಯವಾಗಿ ಎಲ್ಲಾ ಕಡೆ ರಿಟೈನಿಂಗ್ ವಾಲ್ ಮಾಡಬೇಕು.

ಎಲ್ಲೆಲ್ಲಿ ಬಹಳಷ್ಟು ಸಮಸ್ಯೆಯಿದೆ ಅಲ್ಲಲ್ಲಿ ಕಾಂಕ್ರಿಟ್ ವಾಲ್ ಕಟ್ಟಲು ಸೂಚನೆ ಕೊಟ್ಟಿದ್ದೇವೆ. ಭೂಕುಸಿತದಿಂದ ನಷ್ಟ ಅನುಭವಿಸುವವರಿಗೆ ಪರಿಹಾರ ಕೊಡುತ್ತೇವೆ ಎಂದರು.

DAKSHINA KANNADA

ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

Published

on

ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.

ಶುಕ್ರವಾರ ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾ*ತ ನಡೆಸಿದ ಕಾರು ಚಾಲಕನೇ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕೊಡದೆ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ : ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

ಮೃ*ತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿದ್ದರು. ಶ್ರೀಕಾಂತ್ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

Published

on

ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5 ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ವಹಿಸಲಾಗಿದೆ.

ಬೆಂದೂರು ಸ್ಥಾವರದಿಂದ ನೀರು ಪೂರೈಕೆ :

ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್‌ಸ್ಟ್ರೀಟ್, ಬಾವುಟಗುಡ್ಡ, ಆಕಾಶವಾಣಿ, ಪದವು, ಗೋರಿಗುಡ್ಡ, ಸೂಟರ್‌ಪೇಟೆ, ಶಿವಬಾಗ್, ಕದ್ರಿ, ವಾಸ್‌ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ, ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್‌ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್‌ನಿಂದ ಕುಂಜತ್ತಬೈಲ್, ಮೊಗ್ರೊಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ, ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ – ಪಣಂಬೂರು ನೇರ ಲೈನ್‌ನಿಂದ ಕಂಕನಾಡಿ, ನಾಗುರಿ, ಪಂಪ್‌ವೆಲ್, ಬಳ್ಳೂರುಗುಡ್ಡೆ, ಪಡೀಲ್‌ಗೆ ನೀರು ಪೂರೈಕೆ ಮಾಡಲಾಗುವುದು.

ಪಣಂಬೂರು ಸ್ಥಾವರದಿಂದ ನೀರು ಪೂರೈಕೆ :

ಮೇ 6 ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್‌ಐಟಿಕೆ, ಮುಕ್ಕ, ಹೊಸಬೆಟ್ಟು, ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ, ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್‌ ಬ್ಯಾಂಕ್, ಗೂಡ್ಸ್‌ಶೆಡ್, ಬಂದರ್ ದಕ್ಕೆ,ಕಣ್ಣೂರು, ನಿಡ್ಡೆಲ್, ಶಿವನಗರ. ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್‌ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್‌ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್‌ಹೌಸ್, ಕೂಳೂರು ಪಂಪ್‌ಹೌಸ್, ಕಾಪಿಕ್ಕಾಡ್, ದಡ್ಡಲ್‌ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೋಲು ಮಾಡಿದಲ್ಲಿ ನೀರು ಕಡಿತ :

ಕಟ್ಟಡ ರಚನೆ ಮತ್ತಿತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್‌ಗಳ ಜೋಡಣೆ ಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ ಜೋಡಣೆ ಕಡಿತಗೊಳಿಸುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ :

ಸಂಪರ್ಕ ಸಂಖ್ಯೆ :

ಕುಡಿಯುವ ನೀರಿನ ಸಮಸ್ಯೆಯಾದರೆ ದೂ.ಸಂ: ಪಡೀಲ್ ರೇಚಕ ಸ್ಥಾವರ-0824-2220364 ಹಾಗೂ ಮನಪಾ ವಾಟ್ಸ್‌ಆ್ಯಪ್ ಸಂಖ್ಯೆ 9449007722/ಮನಪಾ ಕಂಟ್ರೋಲ್ ರೂಮ್- 0824-2220319/2220306ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Continue Reading

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

LATEST NEWS

Trending