ಮುಂಬೈ: ಬ್ಲೂ ಫಿಲ್ಮ್ ತಯಾರಿಸಿ ಅಪ್ ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಉದ್ಯಮಿ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾರನ್ನು ಮುಂಬೈ ನ್ಯಾಯಾಲಯವು ಜುಲೈ 23ರ ತನಕ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ರಾಜ್ ಕುಂದ್ರಾ ಅವರನ್ನು ಬ್ಲೂ ಫಿಲ್ಮ್ ತಯಾರಿಸಿ ಅಪ್ ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದರು.
ಪ್ರಕರಣದ ಮತ್ತೊಬ್ಬ ಆರೋಪಿ ರಿಯಾನ್ ಜಾನ್ ನನ್ನು ಪೊಲೀಸರು ಬಂಧಿಸಿದ್ದು ಆತನನ್ನು ಜುಲೈ 23ರ ತನಕ ನ್ಯಾಯಾಲಯವು ಪೊಲೀಸರ ವಶಕ್ಕೆ ನೀಡಿದೆ. ಕುಂದ್ರಾ ಹಾಗೂ ರಿಯಾನ್ ನನ್ನು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಈ ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಶ್ಲೀಲ ಚಿತ್ರಗಳ ತಯಾರಿ ಹಾಗೂ ಅವುಗಳನ್ನು ಕೆಲವು ಅಪ್ಲಿಕೇಶನ್ ಗಳ ಮೂಲಕ ಬಿತ್ತರಿಸುತ್ತಿರುವ ಕುರಿತಾಗಿ 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರಾಚ್ ನಲ್ಲಿ ಪ್ರಕರಣ ದಾಖಲಾಗಿತ್ತು.