Thursday, August 11, 2022

ದಶಕದ ಹಿಂದಿನ ಪ್ರಕರಣದಲ್ಲಿ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್‌

ಸಾಂಗ್ಲಿ: 14 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ವಿರುದ್ಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.


2008ರಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ರಾಜ್ ಠಾಕ್ರೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದಕ್ಕೆ ಸಂಬಂಧಿಸಿ ಸಾಂಗ್ಲಿಯ ಮ್ಯಾಜಿಸ್ಟ್ರೇಟರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ.

ರಾಜ್ ಠಾಕ್ರೆ ಹಾಗೂ ಎಂಎನ್‌ಎಸ್ ನಾಯಕ ಶಿರೀಶ್ ಪರಾಕರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮುಂಬೈ ಪೊಲೀಸ್ ಆಯುಕ್ತರಿಗೆ ಹಾಗೂ ಖೆರ್‌ವಾಡಿ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ ಎಂದು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಪಾಟೀಲ್ ತಿಳಿಸಿದ್ದಾರೆ.

ಜೂನ್ 8ರ ಒಳಗಾಗಿ ಇಬ್ಬರೂ ನಾಯಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...