ಪುಣೆ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನನ್ನು ತರುವಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಪುಣೆಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ‘ದೇಶದಲ್ಲಿ ಶೀಘ್ರ ಏಕರೂಪ ನಾಗರಿಕ ಸಂಹಿತೆ ಹಾಗೂ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿ ಹೊಸ ಕಾನೂನನ್ನು ಜಾರಿಗೆ ತರಬೇಕು. ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕು’ ಎಂದು ಹೇಳಿದ್ದಾರೆ.
ಅಯೋಧ್ಯೆಗೆ ಜೂ.5ರಂದು ನೀಡಬೇಕಿದ್ದ ಭೇಟಿಯನ್ನು ಮುಂದೂಡಿರುವುದಾಗಿ ಇತ್ತೀಚೆಗೆ ರಾಜ್ ಠಾಕ್ರೆ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದರು.