Thursday, August 11, 2022

ರಾಜಸ್ಥಾನ್ ಟೈಲರ್ ಹತ್ಯೆ ಪ್ರಕರಣ: ಇಬ್ಬರ ಬಂಧನ-ನಿಷೇಧಾಜ್ಞೆ ಜಾರಿ

ರಾಜಸ್ಥಾನ್ : ಇತ್ತೀಚೆಗಷ್ಟೇ ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ವಿವಾದಾತ್ಮಕ ಹೇಳಿಒಕೆ ನೀಡಿದ ಬೆನ್ನಲ್ಲಿ ಇಡೀ ದೇಶವೇ ಕೆಂಡಾಮಂಡಲವಾಗಿ ಹೋಗಿತ್ತು. ಇದೀಗ ನೂಪುರ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ಟೈಲರ್‌ ಒಬ್ಬರನ್ನು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ನಿನ್ನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.

ರಾಜಸ್ಥಾನದ ಟೈಲರ್‌ ಕನ್ಹಯ್ಯ ಲಾಲ್‌ (40) ಎಂಬುವವರು ಹತ್ಯೆಗೀಡಾದ ಯುವಕ.


ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಅಲ್ಲದೆ ರಾಜಸ್ಥಾನ ಉದ್ವಿಗ್ನಗೊಂಡಿದ್ದು, ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ. ಇನ್ನೊಂದೆಡೆ ರಾಜಸ್ಥಾನದಾದ್ಯಂತ 1 ತಿಂಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.


ಟೈಲರ್ ಕನ್ಹಯ್ಯಾ ಲಾಲ್ ತೇಲಿ ಅವರು, ಧನ್ಮಂಡಿಯ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಎಂಬ ಅಂಗಡಿ ಇಟ್ಟುಕೊಂಡಿದ್ದರು.

ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಬೈಕ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಬಂದು ಬಟ್ಟೆಯ ಅಳತೆ ಕೊಡುವ ನೆಪದಲ್ಲಿ ಅಂಗಡಿ ಪ್ರವೇಶಿಸಿದ್ದಾರೆ. ಈ ಪೈಕಿ ಓಬ್ಬಾತ ವಿಡಿಯೋ ಕಾಲ್ ಮಾಡುವಂತೆ ನಟಿಸಿ ವಿಡಿಯೋ ಮಾಡುತ್ತಿದ್ದ.

ಮತ್ತೊರ್ವ ಅಳತೆ ತೆಗೆಯುವ ನೆಪದಲ್ಲಿ ಬಂದು ಶಿರಚ್ಛೇದ ಮಾಡಿದ ಹತ್ಯೆ ಮಾಡಿದ್ದಾನೆ. ಇದರಿಂದ ಟೈಲರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಕ್ರೂರತೆಯ ತೀವ್ರ ಹಂತಕ್ಕೆ ತಲುಪಿದ್ದು ಉದಯಪುರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಜಾರಿ ಮಾಡಲಾಗಿದೆ.

ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಗಳನ್ನು ರದ್ದುಗೊಳಿಸಲಾಗಿದ್ದು, ಯಾವುದೇ ರೀತಿಯ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡಿದಂತೆ ಎಚ್ಚರಿಕೆ ನೀಡಲಾಗಿದೆ.


ಈ ಹಂತಕರು ವೀಡಿಯೋ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರಲ್ಲಿ ಓರ್ವನನ್ನು ರಿಯಾಜ್‌ ಎಂದು ಗುರುತಿಸಲಾಗಿದೆ.

ಇನ್ನು ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...