Friday, August 12, 2022

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಿಸಿರೋಡಿನ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಯಿತು.


ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ವಕೀಲ ಪ್ರಸಾದ್ ಕುಮಾರ್ ರೈ ಮಾತನಾಡಿ, ‘ಹಂತಕರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ, ವಿನಾಕಾರಣ ಕೊಲೆ ಮಾಡುವ ಮಾನಸಿಕತೆಯನ್ನು , ಇದರ ಹಿಂದಿನ ಕೈವಾಡವನ್ನು ಅವರಿಗೆ ಸಹಕಾರ ನೀಡುವ ಶಕ್ತಿಗಳನ್ನು ಪೋಲೀಸ್ ಇಲಾಖೆ ಪತ್ತೆ ಹಚ್ಚಿ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಅವರು ಹೇಳಿದರು.

ರಾಕ್ಷಸ ಪ್ರವೃತ್ತಿಯನ್ನು ಬೆಳೆಸುವ ಭಯೋತ್ಪಾದಕರನ್ನು ಸೃಷ್ಟಿ ಮಾಡುವ ಇವರ ಮಾನಸಿಕತೆ ಬದಲಾಗದಿದ್ದರೆ ಮುಂದೊಂದು ದಿನ ಇಡೀ ಸಮುದಾಯಕ್ಕೆ ಅಪಾಯವಿದೆ ಎಂದ ಅವರು ರಾಜಸ್ಥಾನದಲ್ಲಿ ನಡೆದ ಘಟನೆಗೆ ಹಿಂದೂ ಸಮಾಜ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ ಎಂಬ ಸಂದೇಶವನ್ನು ನೀಡಿದರು.

ಪ್ರತಿಭಟನೆಯ ಬಳಿಕ ಇಬ್ಬರು ಆರೋಪಿಗಳ ಪ್ರತಿಕೃತಿ ದಹನ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ, ವಿಶ್ವಹಿಂದೂ ಪರಿಷತ್ ಕಾರ್ಯದರ್ಶಿ ದೀಪಕ್ ಅಜೆಕಲ, ಭಜರಂಗದಳ ಸಂಚಾಲಕ ಶಿವಪ್ರಸಾದ್ ತುಂಬೆ, ಸಹಸಂಚಾಲಕ ಸಂತೋಷ್ ಕುಲಾಲ್ ಸರಪಾಡಿ, ಸೇವಾ ಪ್ರಮುಖ್ ಕಿರಣ್ ಕಾಫಿಕಾಡ್,

ಪ್ರಸಾದ್ ಬೆಂಜನಪದವು, ವಿನೀತ್ ತುಂಬೆ, ಸಂದೀಪ್ ದರ್ಬಳಿಕೆ, ಲೋಕೇಶ್ ಪಲ್ಲಿಪಾಡಿ, ಸಂದೇಶ್ ಕಾಡುಬೆಟ್ಟು, ದಿನೇಶ್ ದಂಬೆದಾರ್, ಪ್ರವೀಣ್ ಕುಲಾಲ್ ಕುಂಟಾಲ್ ಪಲ್ಕೆ, ಪುಷ್ಪ ರಾಜ್ ಜಕ್ರಿಬೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...