Home ಕರ್ನಾಟಕ ವಾರ್ತೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು

ರಾಜಸ್ಥಾನ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ನದಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಾಯಗೊಂಡಿರುವ ಘಟನೆ ಇಂದು ರಾಜಸ್ಥಾನದ ಬುಂದಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿ ಸಮೀಪ ನಡೆದಿದೆ.

ಕೋಟಾ ಪ್ರದೇಶದಿಂದ ಇಂದು ಬೆಳಗ್ಗೆ ಸ್ವಾಮಿ ಮಾಧುಪುರ್ ನಲ್ಲಿ ನಡೆಯಲಿರುವ ಮದುವೆ ಸಮಾರಂಭಕ್ಕೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ ಎಂದು ಲಾಖೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಂದರ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಬಸ್ ನಲ್ಲಿ ಒಟ್ಟು 28 ಜನರಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಬಸ್ ಮೆಜ್ ನದಿಗೆ ಉರುಳಿ ಬಿದ್ದಿತ್ತು. ಈ ಸೇತುವೆಗೆ ಯಾವುದೇ ತಡೆಗೋಡೆ ಕಟ್ಟಿರಲಿಲ್ಲವಾಗಿತ್ತು ಎಂದು ಕುಮಾರ್ ವಿವರಿಸಿದ್ದಾರೆ.

ಹದಿಮೂರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. 12 ಜನರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

ಘಟನೆಯಲ್ಲಿ 12 ಪುರುಷರು, ಹತ್ತು ಮಂದಿ ಮಹಿಳೆಯರು ಹಾಗೂ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ.ಗಾಯಗೊಂಡವರನ್ನು ಲಾಖೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...