Sunday, December 5, 2021

ಸೂಪರ್ ಸ್ಟಾರ್ ರಜನಿಕಾಂತ್‌ ಗೆ ಒಲಿದ ದಾದಾಸಾಹೇಬ್ ಫಾಲ್ಕೆ ಅವಾರ್ಡ್..! 

ನವದೆಹಲಿ: ಭಾರತ ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ಸೂಪರ್​ಸ್ಟಾರ್​ ತಲೈವಾ ರಜಿನಿಕಾಂತ್​ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ಟ್ವೀಟ್​ ಮಾಡಿ ಘೋಷಿಸಿದ್ದಾರೆ.  ಭಾರತೀಯ ಚಲನಚಿತ್ರ ಇತಿಹಾಸದ ಖ್ಯಾತ ನಟರುಗಳ ಸಾಲಲ್ಲಿ  ರಜನಿಕಾಂತ್ ಕೂಡ ಒಬ್ಬರಾಗಿದ್ದಾರೆ.

ರಜನಿಕಾಂತ್ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಘೋಷಿಸಲು ಬಹಳ ಸಂತೋಷವಾಗಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪ್ರತಿಮವಾಗಿದೆ ಎಂದು ಜಾವಡೇಕಾರ್ ಈ ವೇಳೆ ಬಣ್ಣಿಸಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಅವರು ಭಾರತ ಸಿನಿಮಾ ರಂಗದ ಸಂಸ್ಥಾಪಕರು. 108 ವರ್ಷದ ಹಿಂದೆ ಅವರು ಭಾರತದ ಚೊಚ್ಚಲ ‘ರಾಜಾ ಹರಿಶ್ಚಂದ್ರ’ ಚಿತ್ರವನ್ನು ನಿರ್ದೇಶಿಸಿದ್ದರು. ಅಂದಿನಿಂದ ದೇಶದ ಚಿತ್ರರಂಗ ಬೆಳವಣಿಗೆ ಕಾಣುತ್ತಾ ಬಂದಿದ್ದು, ಇಂದು ಪ್ರಪಂಚದಲ್ಲೇ ತನ್ನ ಛಾಪು ಮೂಡಿಸಿದೆ.

ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 50 ವರ್ಷಗಳಿಂದ ಭಾರತ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ರಜಿನಿಕಾಂತ್​ಗೆ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು. ಗಾಯಕಿ ಆಶಾ ಭೋಂಸ್ಲೆ, ನಿರ್ದೇಶಕ ಸುಭಾಷ್ ಘಾಯ್, ನಟ-ನಿರ್ಮಾಪಕ ಮೋಹನ್ ಲಾಲ್, ನಿರ್ದೇಶಕ ಎಸ್​ ಶಂಕರ್​ ಹಾಗೂ ನಿರ್ದೇಶಕ ಬಿಸ್ವಜೀತ್ ಚಟರ್ಜಿ ಅವರನ್ನೊಳಗೊಂಡ ತೀರ್ಪುಗಾರರ ತಂಡಕ್ಕೆ ಸಚಿವರು ಧನ್ಯವಾದ ಅರ್ಪಿಸಿದ್ದಾರೆ.

ರಜನೀಕಾಂತ್ ಮೂಲತ ಕನ್ನಡಿಗ. ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಕನ್ನಡ ಚಿತ್ರರಂಗವಲ್ಲದೆ, ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿಯೂ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಇವರು ಬೆಂಗಳೂರು ಮಹಾನಗರ ಸಾರಿಗೆಯಲ್ಲಿ ನಿರ್ವಾಹಕರಾಗಿದ್ದುಕೊಂಡು ನಾಟಕಗಳಲ್ಲಿ ಅಭಿನಯಿಸಲು ಪ್ರಾರಂಭಿಸಿದರು. ಡಿಸೆಂಬರ್ 12,1949ರಲ್ಲಿ ಬೆಂಗಳೂರಿನಲ್ಲಿ ಮರಾಠಿ ಸಂಸ್ಕಾರದ ಮನೆಯಲ್ಲಿ ಒಂದು ಗಂಡು ಮಗು ಜನಿಸಿತು. ಆ ಮಗುವಿಗೆ ಶಿವಾಜಿ ರಾವ್ ಎಂದು ಹೆಸರಿಡಲಾಯಿತು. ಮಗು ಐದನೆಯ ವಯಸ್ಸಿನಲ್ಲೇ ತಾಯಿಯ ಪ್ರೀತಿಯಿಂದ ವಂಚಿತವಾಯಿತು. ಪ್ರಾಥಮಿಕ ಶಿಕ್ಷಣವನ್ನು ಆಚಾರ್ಯ ಪಾಠಶಾಲೆಯಲ್ಲೂ, ಮುಂದೆ ಕರ್ನಾಟಕದ ರಾಮಕೃಷ್ಣ ವಿದ್ಯಾಶಾಲೆಯಲ್ಲೂ ಓದಿ ಹುಡುಗ ಒಂದಷ್ಟು ಕರ್ನಾಟಕದಲ್ಲಿ ಕೂಲಿ ಕೆಲಸ ಮಾಡಿ ಬದುಕನ್ನು ಬಂದಷ್ಟೇ ಭಾಗ್ಯ ಎಂದುಕೊಂಡು ನಡೆಸತೊಡಗಿದ.1968 ರಿಂದ 1973 ರ ಅವಧಿಯಲ್ಲಿ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಎಲ್ಲೋ ಒಂದು ಕಡೆ ನೆಲೆ ಸಿಗಲಿ ಎಂದು ಅತ್ತಿಂದಿತ್ತ ಅಲೆದಾಡುತ್ತಲೇ ಕಾಲ ತಳ್ಳಿದ ಹುಡುಗ. ಕೊನೆಗೆ ಕರ್ನಾಟಕದಲ್ಲಿ ಕಂಡಕ್ಟರ್ ಆಗಿ ಒಂದು ನೆಲೆ ಸಿಕ್ಕಿತು ಅಂದುಕೊಂಡರು.

ಸಿನಿಮಾ ಹುಚ್ಚು. ಈತನ ವರಸೆಗಳನ್ನು ನೋಡಿದ ರಾಜ್ ಬಹದ್ದೂರ್ ಎಂಬ ಗೆಳೆಯ ನೀನು ಮದ್ರಾಸು ಫಿಲಂ ಇನ್ಸ್ಟಿಟ್ಯೂಟಿನಲ್ಲಿ ತರಬೇತಿ ಪಡಿ ಎಂದು ಹುರುದುಂಬಿಸಿ ಆತನಿಗೆ ಎರಡು ವರ್ಷ ಬೆಂಗಾವಲಾಗಿ ನಿಂತರು. “ನಮನ”. ರಜನೀಕಾಂತ್ ತಮ್ಮ ಶಾಲಾಶಿಕ್ಷಣವನ್ನು ನಡೆಸಿದ್ದು ಬೆಂಗಳೂರಿನಲ್ಲಿ. ಇವರ ಮೂಲ ಹೆಸರು ಶಿವಾಜಿ ರಾವ್ ಗಾಯಕ್‍ವಾಡ್. ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದರೂ, ರಜನಿಕಾಂತ್ ಪ್ರಸಿದ್ಧಿ ಪಡೆದಿದ್ದು ತಮಿಳು ಚಿತ್ರರಂಗದಲ್ಲಿ. ಚಿತ್ರರಂಗ ಪ್ರವೇಶಿಸುವ ಮೊದಲು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಚಿತ್ರರಂಗಕ್ಕೆ ಸೇರಿದ ನಂತರ ಶಿವಾಜಿ ರಾವ್ ಗಾಯಕ್‍ವಾಡ್ ಅವರು ರಜನೀಕಾಂತ್ ಆದರು..

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...