Connect with us

  LATEST NEWS

  ರಾಜ್ಯಸಭಾ ಸದಸ್ಯನ ಪುತ್ರಿಯ ಅವಾಂತರ..! ಫುಟ್‌ಪಾತ್‌ನಲ್ಲಿ ಮಲಗಿದ್ದವನ ಮೇಲೆ ಕಾರು ಚಲಾಯಿಸಿ ಎಸ್ಕೇಪ್.!!

  Published

  on

  ಚೆನ್ನೈ/ಮಂಗಳೂರು:  ರಾಜ್ಯಸಭಾ ಸಂಸದರ ಪುತ್ರಿ ಮಾಧುರಿ ಫುಟ್‌ಪಾತ್‌ ನಲ್ಲಿ ಮಲಗಿದ್ದ ಯುವಕನ ಮೇಲೆ ಕಾರು ಚಲಾಯಿಸಿದ್ದಾಳೆ. ಘಟನೆಯಿಂದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್‌ ರವರ ಪುತ್ರಿ ಫುಟ್‌ಪಾತ್‌ನಲ್ಲಿ ಮಲಗಿದ್ದ 24 ವರ್ಷದ ಯುವಕ ಮೇಲೆ ಬಿಎಮ್‌ಡಬ್ಲ್ಯೂ ಕಾರನ್ನು ಹರಿಸಿ ಗಂಭೀರ ಗಾಯಗೊಂಡ ಯುವಕ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಸಂಸದರ ಪುತ್ರಿ ಕಾಲ್ಕಿತ್ತಿದ್ದಾಳೆ.

  ಈ ಹಿಂದೆ ಪುಣೆಯಲ್ಲಿ ಅಪ್ರಾಪ್ತ ಬಾಲಕ ವೇದಾಂತ್ ಅಗರ್ವಾಲ್ ಮದ್ಯದ ಅಮಲಿನಲ್ಲಿ ಪೋರ್ಶೆ ಕಾರನ್ನು ಚಲಾಯಿಸಿದ್ದು, ಇಬ್ಬರು ಐಟಿ ಉದ್ಯೋಗಿಗಳ ಸಾವಿಗೆ ಕಾರಣನಾಗಿದ್ದ. ಈ ಕುರಿತು ಬಾಲಕ ಸೇರಿದಂತೆ ಆತನ ಪೋಷಕರು ಹಾಗೂ ಅಜ್ಜನನ್ನು ವಿವಿಧ ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣ ಇಡೀ ದೇಶದಲ್ಲೇ ಸಂಚಲನ ಮೂಡಿಸಿತ್ತು.

  Read More..; ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು..!

  ಏನಿದು ಘಟನೆ?

  ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಬೀಡ ಮಸ್ತಾನ್ ರಾವ್ ಅವರ ಮಗಳು ಮಾಧುರಿ, ಜೂ.17ರಂದು ರಾತ್ರಿ ತನ್ನ ಸ್ನೇಹಿತೆ ಜತೆಗೆ ತಮಿಳುನಾಡಿನಲ್ಲಿ ಕಾರು ಚಲಾಯಿಸುತ್ತಿದ್ದಳು. ಚೆನ್ನೈನ ಬೇಸಂತ್ ನಗರದಲ್ಲಿ ಪಾದಚಾರಿ ಮಾರ್ಗದಲ್ಲಿ ಕುಡಿದು ಅಮಲಿನಲ್ಲಿ ಮಲಗಿದ್ದ 24 ವರ್ಷದ ಸೂರ್ಯ ಎಂಬಾತನ ಮೇಲೆ ಕಾರು ಹರಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಇನ್ನು ಮೃತಪಟ್ಟ ಸೂರ್ಯ ವೃತ್ತಯಲ್ಲಿ ಪೇಯಿಂಟರ ಆಗಿದ್ದನು ಎನ್ನಲಾಗಿದೆ.

  ಅಪಘಾತ ಸಂಭವಿಸಿದ ಕೂಡಲೇ ಮಾಧುರಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಕಾರಿನಿಂದ ಇಳಿದ ಆಕೆಯ ಸ್ನೇಹಿತೆ, ಅಪಘಾತ ನಡೆದಾಗ ಸ್ಥಳದಲ್ಲಿ ಜಮಾಯಿಸಿದ ಜನರ ಜತೆ ವಾಗ್ವಾದ ನಡೆಸಿದ್ದಾಳೆ. ಆಕೆ ಕೂಡಾ ಕೆಲ ಸಮಯದಿಂದ ಅಲ್ಲಿಂದ ನಿರ್ಗಮಿಸಿದ್ದಾಳೆ. ಜನರ ಗುಂಪಿನಲ್ಲಿದ್ದ ಕೆಲವರು ಸೂರ್ಯನನ್ನು ಆಸ್ಪತ್ರೆಯೊಂದಕ್ಕೆ ಸಾಗಿಸಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

   

  LATEST NEWS

  ವಿದ್ಯುತ್ ತಂತಿಯಲ್ಲಿ ಜೀ*ವ ಕಳೆದುಕೊಂಡ ಹೆಬ್ಬಾವು..!

  Published

  on

  ಮಂಗಳೂರು ( ಉಳ್ಳಾಲ ) : ವಿದ್ಯುತ್ ಕಂಬ ಏರಿದ ಹೆಬ್ಬಾವೊಂದು ವಿದ್ಯುತ್ ಪ್ರವಹಿಸಿ ಸಾ*ವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ ವಿದ್ಯುತ್ ಶಾರ್ಟ್ ಆದ ಸದ್ದು ಕೇಳಿ ಹೊರ ಬಂದ ಮನೆಯವರಿಗೆ ಈ ದೃಶ್ಯ ಕಂಡು ಬಂದಿದೆ.

   

  ಬೃಹತ್ ಗಾತ್ರದ ಈ ಹೆಬ್ಬಾವು ವಿದ್ಯುತ್ ಕಂಬ ಏರಿದ್ದು ಯಾರೂ ಗಮನಿಸಿರಲಿಲ್ಲ. ಮಳೆಯ ಕಾರಣದಿಂದ ಮನೆಯೊಳಗೆ ಇದ್ದ ಜನರಿಗೆ ಶಾರ್ಟ್ ಸರ್ಕ್ಯೂಟ್ ಸದ್ದಿನಿಂದ ವಿಚಾರ ಗೊತ್ತಾಗಿದೆ. ಮಾಹಿತಿ ಪಡೆದು ಆಗಮಿಸಿದ ವಿದ್ಯುತ್ ಇಲಾಖೆಯ ಸಿಬ್ಬಂದಿ ಹೆಬ್ಬಾವಿನ ಕಳೇಬರವನ್ನು ಕಂಬದಿಂದ ತೆರವು ಮಾಡಿದ್ದಾರೆ.

  Continue Reading

  DAKSHINA KANNADA

  ಕಳ್ಳರನ್ನು ಹಿಡಿದ 60 ರ ವೃದ್ಧೆ..!

  Published

  on

  ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

  ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

  ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ‌ ಸಿಕ್ಕಿಬಿದ್ದಿದ್ದಾರೆ.

  ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  DAKSHINA KANNADA

  ಜುಲೈ 16. ದ.ಕ, ಉಡುಪಿ ಶಾಲಾ ಕಾಲೇಜಿಗೆ ರಜೆ..!

  Published

  on

  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಸೋಮವಾರ ಜುಲೈ 15 ರಂದು ರಜೆ ನೀಡಲಾಗಿತ್ತು. ನಾಳೆ (ಜುಲೈ 16 )ಕೂಡಾ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 15 ರ ಮಳೆಯಿಂದ ಸಾಕಷ್ಟು ಕಡೆಗಳಲ್ಲಿ ಜನರು ತೊಂದರೆ ಅನುಭವಿಸಿದ್ದಾರೆ.

  ತಗ್ಗು ಪ್ರದೇಶಗಳಲ್ಲಿ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ ಘಟನೆ ಕೂಡಾ ನಡೆದಿದೆ. ಕೆಲೆವಡೆ ಶಾಲೆಯ ಗೋಡೆ ಕುಸಿತವಾಗಿದ್ದು, ಕೆಲವೆಡೆ ಗಾಳಿಗೆ ಶಾಲೆಯ ಹೆಂಚು ಹಾರಿ ಹೋಗಿದೆ. ನದಿಯ ನೀರು ಉಕ್ಕಿ ಹರಿಯುತ್ತಿದ್ದು, ಅಪಾಯದ ಅಂಚಿನಲ್ಲಿದೆ.

  ಹವಾಮಾನ ಇಲಾಖೆಯ ಸೂಚನೆಯಂತೆ ಜುಲೈ 16 ರಂದು ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
  ಭಾನುವಾರದಿಂದ ಶಾಲೆಗೆ ನಿರಂತರ ರಜೆ ಅನುಭವಿಸಿದ ಮಕ್ಕಳಿಗೆ ಬುಧವಾರ ಮೊಹರಂ ಪ್ರಯುಕ್ತ ಸರ್ಕಾರಿ ರಜೆ ಕೂಡ ಸಿಗಲಿದೆ. ಗುರುವಾರದಿಂದ ಮಳೆ ಕಡಿಮೆ ಆಗುವ ಸೂಚನೆ ಇದೆ.

  Continue Reading

  LATEST NEWS

  Trending