Tuesday, October 19, 2021

ಮೋದಿಗೆ 12 ಪತ್ರ ಬರೆದಿದ್ದೇನೆ, ಅವರು ಸ್ವೀಕರಿಸಿದ್ದಾರೆಯೇ ವಿನಃ ಕ್ರಮ ಕೈಗೊಂಡಿಲ್ಲ: ಸುಬ್ರಮಣಿಯನ್ ಸ್ವಾಮಿ ಟ್ವೀಟ್

ನವದೆಹಲಿ: ‘ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

 

‘ಪ್ರಸ್ತುತ ಆರ್ಥಿಕ ಅವ್ಯವಸ್ಥೆ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡುವಂತೆ ಕೋರಿ ಇತ್ತೀಚಿನ ದಿನಗಳಲ್ಲಿ ನನಗೆ ಅನೇಕ ದೂರವಾಣಿ ಕರೆಗಳು ಬರುತ್ತಿವೆ. ಅಂಗಡಿ ಮಾಲೀಕರಿಂದಲೂ ಕರೆಗಳು ಬರುತ್ತಿವೆ.

ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ ಎಂದು ಅವರೆಲ್ಲರ ಬಳಿ ನಾನು ಪ್ರಶ್ನಿಸುತ್ತೇನೆ.

ಆರ್ಥಿಕತೆಗೆ ಸಂಬಂಧಿಸಿ ಮೋದಿಯವರಿಗೆ 12 ಪತ್ರಗಳನ್ನು ಬರೆದಿದ್ದೇನೆ. ಅವರು ಅವುಗಳನ್ನು ಸ್ವೀಕರಿಸಿದ್ದಾರೆಯೇ ವಿನಃ ಕ್ರಮ ಕೈಗೊಂಡಿಲ್ಲ’ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...