Saturday, October 1, 2022

ಶಿರಾಡಿ ಘಾಟ್ ಹೆದ್ದಾರಿಗೆ ಶಾಶ್ವತ ಯೋಜನೆ ರೂಪಿಸುವಂತೆ ಗಡ್ಕರಿಗೆ ಮನವಿ ಮಾಡಿದ ಸಂಸದ ಡಾ. ಹೆಗ್ಗಡೆ

ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ ಮಾತುಕತೆ ನಡೆಸಲಾಗಿದೆ. ಶಿರಾಡಿ ಘಾಟ್ ಬಳಿಕ ಸಕಲೇಶಪುರ ವ್ಯಾಪ್ತಿಯಲ್ಲಿ ಹೆದ್ದಾರಿ ತೀವ್ರವಾಗಿ ಕೆಟ್ಟುಹೋಗಿದೆ.

ಇದನ್ನು ವೀಕ್ಷಿಸುವ ಸಲುವಾಗಿಯೇ ನಾನು ಬೆಂಗಳೂರಿನಿಂದ ಶಿರಾಡಿ ಘಾಟ್ ಮಾರ್ಗವಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಶಿರಾಡಿ ಘಾಟ್‌ನಲ್ಲಿ ಸಮಾನಾಂತರ ಇನ್ನೊಂದು ಹೆದ್ದಾರಿ ನಿರ್ಮಾಣಕ್ಕೆ ಪರಿಸರ ಇಲಾಖೆಯ ವಿರೋಧ ಇರುವುದಾಗಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ’ ಎಂದು ಹೇಳಿದರು.

ಈ ಸಮಸ್ಯೆಯನ್ನು ಬಗೆಹರಿಸಿದ ಬಳಿಕವೇ ಶಿರಾಡಿ ಘಾಟ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ಪ್ರತೀ ಬಾರಿಯೂ ತಾತ್ಕಾಲಿಕ ಪರಿಹಾರದಿಂದ ಪ್ರಯೋಜನವಿಲ್ಲ.

ಪ್ರತೀ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿ ಸಮಸ್ಯೆ ತಲೆದೋರುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲು ಯತ್ನಿಸಲಾಗುವುದು’ ಎಂದು ಹೇಳಿದ್ದಾರೆ.

ಇನ್ನು ಜನೋಪಯೋಗಿ ಯೋಜನೆ ಬಗ್ಗೆ ಮಾತನಾಡಿ ‘ಕೇಂದ್ರ ಸರ್ಕಾರದಲ್ಲಿ ಸುಮಾರು 500ಕ್ಕೂ ಅಧಿಕ ಜನೋಪಯೋಗಿ ಯೋಜನೆಗಳಿದ್ದು, ಇದನ್ನು ಜನರಿಗೆ ತಲುಪಿಸುವ ದಿಶೆಯಲ್ಲಿ ಕಾಮನ್ ಸರ್ವಿಸ್ ಸೆಂಟರ್‌ಗಳನ್ನು ದೇಶಾದ್ಯಂತ ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ರಾಜ್ಯಸಭಾ ಸದಸ್ಯರಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.


ಮಂಗಳೂರಿನಲ್ಲಿ ನಿನ್ನೆ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ 6 ಸಾವಿರ ಸಿಎಸ್‌ಸಿ ಕೇಂದ್ರಗಳಿದ್ದು ಇದನ್ನು 10 ಸಾವಿರಕ್ಕೆ ವಿಸ್ತರಿಸುವ ಗುರಿ ಹೊಂದಲಾಗಿದೆ.

ಈ ಸಿಎಸ್‌ಸಿ ಕೇಂದ್ರಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಯೋಜನೆಗಳನ್ನು ಜನರಿಗೆ ತಲುಪಿಸುವ ದಿಶೆಯಲ್ಲಿ ಇದು ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳು ಸಿಎಸ್‌ಸಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದು ಇದರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತುಳುವಿಗೆ ತಾಂತ್ರಿಕ ತೊಡಕು: ಕರಾವಳಿಯ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ತಾಂತ್ರಿಕ ತೊಡಕು ಎದುರಾಗಿದೆ. ಕೇವಲ ತುಳು ಒಂದೇ ಭಾಷೆಯನ್ನು ಸೇರ್ಪಡೆಗೊಳಿಸಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಹೀಗಾಗಿ ತುಳುವಿನ ಜತೆ ಗುಡ್ಡಗಾಡು ಜನತೆಯ ಭಾಷೆಗಳನ್ನೂ ಒಟ್ಟಾಗಿ ಸೇರ್ಪಡೆಗೊಳಿಸುವ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು ಎಂದರು.

ದ.ಕ ಜಿಲ್ಲೆಯಲ್ಲಿ ಪಶ್ಚಿಮ ಘಟ್ಟ ಸಂರಕ್ಷಣೆ ದಿಶೆಯಲ್ಲಿ ಪ್ರೊ. ಮಾಧವ ಗಾಡ್ಗೀಳ್, ಡಾ. ಕಸ್ತೂರಿ ರಂಗನ್ ವರದಿ ಬಗೆಗಿನ ಪ್ರಶ್ನೆಗೆ ಡಾ. ಹೆಗ್ಗಡೆ ಅವರು, ಈ ವಿಚಾರದ ಬಗ್ಗೆ ಕೂಲಂಕುಷವಾಗಿ ತಿಳಿದುಕೊಂಡು ಮಾತನಾಡುತ್ತೇನೆ.

ಜನತೆಗೆ ತೊಂದರೆಯಾಗದಂತಹ ಕೇಂದ್ರ ಸರ್ಕಾರ ಜಾರಿಗೊಳಿಸುವ ಕಾನೂನುಗಳ ಬಗ್ಗೆ ಪರಾಮರ್ಶೆ ನಡೆಸಿಯೇ ಹೆಜ್ಜೆ ಇಡಬೇಕಾಗುತ್ತದೆ. ಯಾವುದಕ್ಕೂ ಇದರ ಬಗ್ಗೆ ಅರಿತುಕೊಳ್ಳುವುದಾಗಿ ಹೇಳಿದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ರೂ ಮೌಲ್ಯದ ಚಿನ್ನ ಪತ್ತೆ

ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮಸ್ಕತ್‌ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.ಭಟ್ಕಳ ಮೂಲದ...

ಕಡಬದಲ್ಲಿ 14 ವರ್ಷದ ಬಾಲಕಿಯ ಮೇಲೆ ಪೈಶಾಚಿಕ ಕೃತ್ಯ ಮಹಿಳೆ ಸೇರಿ 14 ಮಂದಿ ವಿರುದ್ಧ FIR

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ...

ಎಲ್ಲಿಯಾದ್ರು SDPI ಕಚೇರಿ ಸೀಲ್ ಮಾಡಿದ್ರೆ ನನಗೆ ತಿಳಿಸಿ-ADGP ಅಲೋಕ್ ಕುಮಾರ್

ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್‌ಡಿಪಿಐ...