DAKSHINA KANNADA
ಕರಾವಳಿಯಲ್ಲಿ ಪವಿತ್ರ ರಮಾದಾನ್ ಆರಂಭ: ಎರಡು ವರ್ಷಗಳ ಬಳಿಕ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ
Published
3 years agoon
By
Adminಮಂಗಳೂರು: ಮುಸ್ಲಿಮರ ಪವಿತ್ರ ರಮದಾನ್ ತಿಂಗಳು ಎಪ್ರಿಲ್ 2ರಿಂದ ಆರಂಭವಾಗಿದೆ. ಸಾಮಾನ್ಯವಾಗಿ ಗಲ್ಫ್ ದೇಶಗಳಲ್ಲಿ ಮೊದಲು ಆರಂಭವಾಗಿ ಒಂದು ದಿನದ ನಂತರ ಕರ್ನಾಟಕದ ಕರಾವಳಿಯಲ್ಲಿ ಆರಂಭವಾಗುವುದು ರೂಢಿ. ಈ ಬಾರಿಯೂ ಅದೇ ಸಂಪ್ರದಾಯ ಮುಂದುವರೆದಿದೆ. ಈ ಬಾರಿಯ ರಮಾದಾನ್ ವಿಶೇಷತೆ ಅಂದರೆ ಎರಡು ವರ್ಷದ ನಂತರ ಮಸೀದಿಗೆ ತೆರಳಿ ಸಾಮೂಹಿಕ ನಮಾಝ್ ಮಾಡುವ ಅವಕಾಶ ದೊರಕಿದೆ.
2020 ಹಾಗೂ 2021ರಲ್ಲೂ ದೇಶಾದ್ಯಂತ ಕೋವಿಡ್ ಲಾಕ್‌ಡೌನ್ ಆರಂಭಗೊಂಡಿದ್ದರಿಂದ ಇಡೀ ರಮ್ಜಾನ್ ತಿಂಗಳು ಮನೆಯಲ್ಲೇ ಉಪವಾಸ ಆಚರಿಸಿದ್ದು, ಪ್ರಾರ್ಥನೆ ನೆರವೇರಿಸಲು ಮಸೀದಿಗಳಿಗೆ ತೆರಳಲು ಅವಕಾಶ ಇರಲಿಲ್ಲ.
ಈ ಬಾರಿ ಅರಬ್ ಹಾಗೂ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಏ.2ರಂದು ಉಪವಾಸ ಆರಂಭವಾಗಿದೆ. ಸಾಮಾನ್ಯವಾಗಿ ಕರಾವಳಿಯಲ್ಲಿ ಮೊದಲು ಉಪವಾಸ ಆರಂಭಗೊಂಡು, ಮರುದಿನ ಬೆಂಗಳೂರು ಹಾಗೂ ರಾಜ್ಯ ಇತರ ಕಡೆ ಶುರುವಾಗುವುದು ರೂಢಿ.
ಈ ಬಾರಿ ಬಹುತೇಕ ಭಾನುವಾರ ಉಪವಾಸ ವ್ರತ ಪ್ರಾರಂಭಗೊಂಡಿದೆ. ಕರಾವಳಿ ಭಾಗದಲ್ಲಿ ಎರಡು ದಿನಗಳಿಂದ ರಾತ್ರಿ ವೇಳೆ ಸ್ವಲ್ಪ ಮಳೆಯಾಗುತ್ತಿದ್ದು, ಈ ವರ್ಷ ಯಾವುದೇ ನಿರ್ಬಂಧಗಳಿಲ್ಲದೇ ಮಸೀದಿಗಳಲ್ಲಿ ಪ್ರಾರ್ಥನೆ, ಪ್ರವಚನ ನಡೆಯುತ್ತಿವೆ.
ರಮಾದಾನ್ ತಿಂಗಳಲ್ಲಿ ಹಗಲು ಉಪವಾಸವಿದ್ದು ಸಂಜೆ ವೇಳೆಗೆ ನಡೆಯುವ ಇಫ್ತಾರ್ ಕೂಟಗಳಲ್ಲಿ ವಿಶೇಷ ತಿಂಡಿ ತಿನಿಸುಗಳನ್ನು ಮಾಡಲಾಗುತ್ತದೆ. ವಿಶೇಷವಾಗಿ ರಮಾದಾನ್‌ನ ಇಫ್ತಾರ್ ಕೂಟದಲ್ಲಿ ಖರ್ಜೂರಕ್ಕೆ ಬಹಳ ಬೇಡಿಕೆಯಿದ್ದು, ಕರಾವಳಿಗೆ ವಿದೇಶಗಳಿಂದ ಹಲವು ಬಗೆಯ ಖರ್ಜೂರಗಳ ದಾಸ್ತಾನು ಬಂದಿದೆ.
ಮಸೀದಿಗಳಲ್ಲಿ ರಾತ್ರಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು, ಮುಸ್ಲಿಮರು ಕುಟುಂಬ ಸಮೇತ ಭಾಗವಹಿಸುತ್ತಾರೆ. ಮುಂಜಾನೆ 4 ಗಂಟೆಗೆ ಎದ್ದು ಉಪಾಹಾರ ಸೇವಿಸಿ, ಉಪವಾಸ ಆರಂಭಿಸುತ್ತಾರೆ. ಒಂದು ತಿಂಗಳ ಉಪವಾಸದ ಬಳಿಕ ಈದುಲ್ ಫಿತರ್ ಹಬ್ಬ ಆಚರಿಸಲಾಗುತ್ತದೆ.
ಮೈಕ್ ಬಳಕೆ ನಿಯಂತ್ರಣ ಮನವಿ
ಮಸೀದಿಗಳಲ್ಲಿ ಅದಾನ್ (ನಮಾಜ್‌ನ ಕರೆ) ಮೊಳಗಿಸುವ ಉದ್ದೇಶದಿಂದ ಅಳವಡಿಸಲಾಗಿರುವ ಲೌಡ್ ಸ್ಪೀಕರ್‌ಗಳನ್ನು ಬೇಕಾಬಿಟ್ಟಿ ಬಳಸದಂತೆ ಆಯಾ ಮಸೀದಿಯ ಆಡಳಿತ ಸಮಿತಿಗಳು ವಿಶೇಷ ಗಮನಹರಿಸಬೇಕು ಎಂದು ಮೂಲ್ಕಿ ಜುಮಾ ಮಸೀದಿಯ ಧರ್ಮ ಗುರು ಎಸ್.ಬಿ. ದಾರಿಮಿ ಮನವಿ ಮಾಡಿದ್ದಾರೆ.
ಕೆಲವೆಡೆ ಬೆಳಗ್ಗಿನ ಜಾವ ಸಹರಿಗೆ ಮೈಕ್ ಮೂಲಕ ಎದ್ದೇಳುವಂತೆ ಹೇಳಲಾಗುತ್ತದೆ. ಇದರಿಂದ ಸುತ್ತಮುತ್ತಲಿನ ಜನರ ನಿದ್ದೆಗೆ ಭಂಗವಾಗುತ್ತದೆ.
ಆದ್ದರಿಂದ ಆಝಾನ್ ಮಸೀದಿಯೊಳಗೆ ಮಾತ್ರ ಕೇಳಿಸುವಂತೆ ಸೀಮಿತ ವಲಯಕ್ಕೆ ಮೈಕ್ ಬಳಸಬೇಕು ಎಂದು ಅವರು ಹೇಳಿದ್ದಾರೆ.
DAKSHINA KANNADA
ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ
Published
5 hours agoon
26/11/2024ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.
ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
22 hours agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
DAKSHINA KANNADA
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
Published
24 hours agoon
25/11/2024By
NEWS DESK4ಮಂಗಳೂರು/ಮಸ್ಕತ್ : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.
ಈ ಸಂದರ್ಭ ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :
ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.
LATEST NEWS
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಮುಂದಿನ ಸಿಎಂ ಇವರೇ ?
ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು
BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್
14 ಬಾರಿಯ ಒಲಿಂಪಿಕ್ ಪದಕ ವಿಜೇತೆ ವಿದಾಯ !
ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ನ್ಯೂಸ್..!
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!