Connect with us

LATEST NEWS

Ramanagara: ಚಾಕುವಿನಿಂದ ಚುಚ್ಚಿ ಪಿಯುಸಿ ವಿದ್ಯಾರ್ಥಿನಿಯ ಅಪಹರಣ – ಆರೋಪಿ ಬಂಧನ..!

Published

on

ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಪಿಯುಸಿ ವಿದ್ಯಾರ್ಥಿನಿಗೆ ಚಾಕು ಇರಿದು ಅಹಹರಿಸಿದ ಘಟನೆ ರಾಮನಗರದ ಸರ್ಕಾರಿ ಮಹಿಳಾ ಕಾಲೇಜು ಬಳಿ ಆ.28ರಂದು ನಡೆದಿದ್ದು, ಆರೋಪಿಯನನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ರಾಮನಗರ: ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಪಿಯುಸಿ ವಿದ್ಯಾರ್ಥಿನಿಗೆ ಚಾಕು ಇರಿದು ಅಹಹರಿಸಿದ ಘಟನೆ ರಾಮನಗರದ ಸರ್ಕಾರಿ ಮಹಿಳಾ ಕಾಲೇಜು ಬಳಿ ಆ.28ರಂದು ನಡೆದಿದ್ದು, ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಹಿಡಿದು ಪೊಲೀಸರು ಬಂಧಿಸಿದ್ದಾರೆ.

ಸಂಜನಾ(16) ಕಿಡ್ನಾಪ್ ಆದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ.

ಸಂಜನಾ ಬೆಳಗ್ಗೆ ಗೆಳತಿಯರ ಜೊತೆ ಕಾಲೇಜಿಗೆ ಬರುತ್ತಿದ್ದ ವೇಳೆ ಇನ್ನೋವಾ ಕಾರಿನಲ್ಲಿ ಬಂದ ಚೇತನ್ ಆಕೆಯ ಕೈ ಹಾಗೂ ಭುಜದ  ಭಾಗಕ್ಕೆ ಚಾಕುವಿನಿಂದ ಇರಿದು ಬಳಿಕ ಆಕೆಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾನೆ.

ಯುವತಿಯನ್ನು ರಕ್ಷಿಸಿಲು ಸ್ಥಳೀಯ ನಿವಾಸಿಗಳು ಯತ್ನಿಸಿದ್ದು, ಕಿಡ್ನ್ಯಾಪ್ ಮಾಡುತ್ತಿದ್ದ ಕಾರಿನ ಮೇಲೆ ಕಲ್ಲೆಸೆದಿದ್ದಾರೆ.

ಆದರೂ ಆತ ಪರಾರಿಯಾಗಿದ್ದಾನೆ.

ಬಳಿಕ ಆತ ಪರಾರಿಯಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.

ಸದ್ಯ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಆರೋಪಿಯನ್ನು ಬಂಧಿಸಿ, ರಾಮನಗರ ಟೌನ್ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

LATEST NEWS

Trending