Connect with us

DAKSHINA KANNADA

ಮತೀಯವಾದ ಹತ್ಯೆಯಲ್ಲಿ ಕಾಂಗ್ರೆಸ್‌ ಸದಸ್ಯ ಇದ್ದರೆ ನಾನು ರಾಜಕೀಯ ನಿವೃತ್ತಿ: ಮಾಜಿ ಸಚಿವ ರೈ

Published

on

ಮಂಗಳೂರು: ಈ ಜಿಲ್ಲೆಯಲ್ಲಿ ಮತೀಯವಾದ ಹಿನ್ನೆಲೆಯಲ್ಲಿ ಹಿಂದೂ-ಮುಸ್ಲಿಂ ಹತ್ಯೆಯಾಯಿತು. ಇದರಲ್ಲಿ ಒಬ್ಬನೇ ಒಬ್ಬ ಕಾಂಗ್ರೆಸ್‌ ಸದಸ್ಯನ ಮೇಲೆ ಎಫ್‌ಐಆರ್‌ ಇದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ.

ಇದನ್ನು ಮಾಧ್ಯಮಗಳಲ್ಲಿ ತಾವು ಬರೆಯಬೇಕು ಎಂದು ಮಾಜಿ ಸಚಿವ ರಮಾನಾಥ್‌ ರೈ ಹೇಳಿದ್ದಾರೆ.


ನಗರದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಅಪಪ್ರಚಾರದಿಂದ ಮಾತ್ರ ಸುದ್ದಿಯಾಗುತ್ತಿದ್ದೇವೆ. ಬಿಜೆಪಿಯ ಗೃಹಸಚಿವರು ಪೊಲೀಸರನ್ನು ಶ್ವಾನಗಳೆಂದು ಕರೆದಿದ್ದಾರೆ. ಇದನ್ನು ಮಾಧ್ಯಮಗಳಲ್ಲಿ ತರಾಟೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಮಾತನಾಡಿದರೆ ಅದು ಬೈದಿದ್ದು, ಬಿಜೆಪಿಯವರು ಮಾತನಾಡಿದರೆ ತರಾಟೆ ಎಂದು ತಮ್ಮ ಅಸಹನೆ ವ್ಯಕ್ತಪಡಿಸಿದರು.
ಈ ವೇಳೆ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪೊಲೀಸರಿಗೆ ಬೈದಿದ್ದೇನೆ ಎಂದು ನೀವು ದಾಖಲೆ ಸಮೇತ ತೋರಿಸಿದರೆ ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು. ಜಿಲ್ಲೆಯ 2 ಶಾಲೆಗೆ ಚೆಕ್‌ ಮೂಲಕ 3.50 ಕೋಟಿ ರೂಪಾಯಿ ಬಂದಿದೆ.

ಅದನ್ನು ವಾಪಾಸ್‌ ಕಟ್ಟಬೇಕೆಂಬ ಬೇಡಿಕೆ ಇದೆ. ರಾಜ್ಯದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿ ಹಾಗೂ ಡಿಸಿಗಳ ವರ್ಗಾವಣೆಯಲ್ಲಿ ದಂಧೆಯ ವಾಸನೆ ಕಂಡುಬರುತ್ತಿದೆ.

ಪ್ರತಿಯೊಂದು ಕಾಮಗಾರಿಯಲ್ಲಿ ಬಿಜೆಪಿ ಶಾಸಕರು 40 ಪರ್ಸೆಂಟ್‌ ತೆಗೆದುಕೊಳ್ಳುತ್ತಾರೆಂದು ಗುತ್ತಿಗೆದಾರರೇ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದ್ದನ್ನು ಗೃಹಇಲಾಖೆಯೇ ಒಪ್ಪಿಕೊಂಡಿದೆ. ಪಂಚಾಯತ್‌ ಮಟ್ಟದಲ್ಲಿ ಕಾಂಗ್ರೆಸ್‌ನ ಉದ್ಯೋಗ ಖಾತ್ರಿ ಬಿಟ್ಟು ಯಾವುದೇ ಕಾರ್ಯಕ್ರಮ ಆಗುತ್ತಿಲ್ಲ ಎಂದು ಆರೋಪಿಸಿದರು.

DAKSHINA KANNADA

ಮಂಗಳೂರು ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ವರ್ಗಾವಣೆ

Published

on

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್‌ ಸಿ.ಎಲ್‌. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ತತ್‌ಕ್ಷಣ ಜಾರಿಗೆ ಬರುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಅವರನ್ನು ಹಿಂಪಡೆಯಲಾಗಿದೆ.

ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ ಅವರನ್ನು ನೂತನ ಆಯುಕ್ತರಾಗಿ ಸರಕಾರ ನೇಮಕ ಮಾಡಿದೆ.

ಇದನ್ನೂ ಓದಿ : ಬಸ್ ಕದ್ದ ಪ್ರಕರಣಕ್ಕೆ ಟ್ವಿಸ್ಟ್; ಕಥೆ ಹಾಗಲ್ಲ ಹೀಗೆ ಎಂದ ವಿದೇಶದಲ್ಲಿರುವ ಮಾಲಕ

ರವಿಚಂದ್ರ ನಾಯಕ್‌ ಅವರು ಈ ಮೊದಲು ಮಂಗಳೂರಿನಲ್ಲಿ ತಹಶೀಲ್ದಾರ್‌ ಹಾಗೂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

Continue Reading

DAKSHINA KANNADA

ನಾಳೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಬಿಹಾರಕ್ಕೆ

Published

on

ಮಂಗಳೂರು : ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಜ. 20 ಮತ್ತು 21ರಂದು ಬಿಹಾರಕ್ಕೆ ತೆರಳಿದ್ದಾರೆ.

ಪಾಟ್ನಾದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನಾ ಅಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿರುವ ಅವರು “ಸಂವಿಧಾನದ 75ನೇ ವಾರ್ಷಿಕೋತ್ಸವ: ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ಶಾಸಕಾಂಗ ಸಂಸ್ಥೆಗಳ ಕೊಡುಗೆ” ಎಂಬ ವಿಷಯದಲ್ಲಿ ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.

ಇದನ್ನೂ ಓದಿ: ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಈ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

 

Continue Reading

DAKSHINA KANNADA

ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು

Published

on

ಮಂಗಳುರು/ಅಮರಾವತಿ: ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದು ಮಾತ್ರವಲ್ಲದೆ ಬಳಿಕ ಕಬ್ಬಿಣದ ರಾಡ್‌ನಿಂದ ಹೊಡೆದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ ಈ ತಿಂಗಳ ಆರಂಭದಲ್ಲಿ ಪೊಲೀಸ್ ದೂರು ದಾಖಲಾಗಿದ್ದು, ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಚಿಕಲ್ದಾರಾ ತಾಲೂಕಿನ ರೆತ್ಯಾಖೇಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಡಿಸೆಂಬರ್ 30ರಂದು ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ನೆರೆಹೊರೆಯವರು ಆಕೆಯನ್ನು ಹಿಡಿದು ಆಕೆ ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಗ್ರಾಮಸ್ಥರು ಸಂತ್ರಸ್ತೆಯನ್ನು ಮರದ ಕೋಲಿನಿಂದ ಹೊಡೆದು, ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ. ಆಕೆಯ ಕೈ ಮತ್ತು ಕಾಲುಗಳ ಮೇಲೆ ಬಿಸಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ. ಆ ಮಹಿಳೆಗೆ ಮೂತ್ರ ಕುಡಿಯಲು ಮತ್ತು ನಾಯಿಯ ಮಲ ಸೇವಿಸಲು ಒತ್ತಾಯಿಸಲಾಯಿತು. ನಂತರ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಕೆಲಸಕ್ಕೆ ಹೋಗಿದ್ದ ಆ ಮಹಿಳೆಯ ಮಗ ಮತ್ತು ಸೊಸೆ ಮನೆಗೆ ಬಂದಾಗ ಈ ವಿಷಯ ತಿಳಿದು ಅವರು ಜನವರಿ 5ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

Continue Reading

LATEST NEWS

Trending

Exit mobile version