Connect with us

BANTWAL

ರೆಡ್‌ಬಾಕ್ಸೈಟ್‌ ದಂಧೆಯಲ್ಲಿ ಬಂಟ್ವಾಳ ಶಾಸಕರ ಅಕ್ರಮ ಸಾಬೀತು : ಶಾಸಕರ ರಾಜೀನಾಮೆ ರೈ ಆಗ್ರಹ..

Published

on

ರೆಡ್‌ಬಾಕ್ಸೈಟ್‌ ದಂಧೆಯಲ್ಲಿ ಬಂಟ್ವಾಳ ಶಾಸಕರ ಅಕ್ರಮ ಸಾಬೀತು : ಶಾಸಕರ ರಾಜೀನಾಮೆ ರೈ ಆಗ್ರಹ..

ಮಂಗಳೂರು : ಬಂಟ್ವಾಳದಲ್ಲಿ ಹಾಲಿ- ಮಾಜಿ ಶಾಸಕರುಗಳ  ವಾಕ್ಸಮರ ತೀವ್ರಗೊಂಡಿದೆ.  ಬಿಜೆಪಿ ಶಾಸಕರ ಮುರಕಲ್ಲು ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ರಮಾನಾಥ ರೈ ಸುದ್ದಿಗೋಷ್ಠಿ ನಡೆಸಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ನಾನು ಶಾಸಕರ ಸಂಬಂಧಿಯೊಬ್ಬರು ಇದರಲ್ಲಿ ಇದ್ದಾರೆ ಎಂದಿದ್ದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಂಟ್ವಾಳ ಶಾಸಕರು ಮಾಧ್ಯಮಗೋಷ್ಠಿ ನಡೆಸಿ ದಾಖಲೆ ಸಮೇತ ಸಾಬೀತುಪಡಿಸುವಂತೆ ಸವಾಲು ಹಾಕಿದ್ದರು.

ನಾನು ಯಾವ ಶಾಸಕರು ಅಂತಾ ಹೇಳಿರಲಿಲ್ಲ. ಆದರೆ ಸುದ್ದಿಗೋಷ್ಠಿ ನಡೆಸಿದ್ದ ಶಾಸಕರೇ ಅದನ್ನು ಒಪ್ಪಿಕೊಂಡಂತಾಗಿದೆ.

ನಾನೀಗ ದಾಖಲೆ ಸಮೇತ ಸಾಬೀತು ಪಡಿಸುತ್ತಿದ್ದೇನೆ. ತೆಂಕ ಎಡಪದವಿನ ಪರ್ಮಿಟ್ ಪಡೆದು ಇಲ್ಲಿ ಅಕ್ರಮ ನಡೆಸಲಾಗಿದೆ.

ಶಾಸಕ ರಾಜೇಶ್ ನಾಯ್ಕ್ ಪತ್ನಿ ಉಷಾ ನಾಯ್ಕ್ ಹೆಸರಲ್ಲಿ ಪರ್ಮಿಟ್ ಪಡೆದು ಮುಡಿಪುವಿನಿಂದ ಮುರಮಣ್ಣು ಸಾಗಾಟ ನಡೆಯುತ್ತಿದೆ.

ಮುಡಿಪುವಿನಲ್ಲಿ ಕೇವಲ ಭೂಮಿ ಸಮತಟ್ಟು ಮಾಡಲಷ್ಟೇ ಅನುಮತಿ ನೀಡಲಾಗಿತ್ತು. ಕೈರಂಗಳ ಪಿಡಿಓ ಹೆಸರಲ್ಲಿ ಅಕ್ರಮವಾಗಿ ಅನುಮತಿ ಪಡಯಲಾಗಿದೆ.

ಮುಡಿಪುವಿನಿಂದ ಸಿಮೆಂಟ್ ಕಂಪೆನಿಗಳಿಗೆ ರೆಡ್ ಬಾಕ್ಸೈಟ್ ಸಾಗಾಟ ನಿರಂತರವಾಗಿ ನಡೆಯುತ್ತಿದೆ. ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಗೆ ಮಣ್ಣು ಸಾಗಿಸಲಾಗಿದೆ ಎಂದು ಮಾಜಿ ಸಚಿವ ರೈ ವಾಗ್ದಾಳಿ ನಡೆಸಿದರು.

ಇಲ್ಲಿನ ಮಣ್ಣನ್ನು ಪ್ರಖ್ಯಾತ ಸಿಮೆಂಟ್ ಕಂಪೆನಿಗಳಿಗೆ ಸಾಗಾಟ ಮಾಡಲಾಗುತ್ತಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪತ್ನಿ ಹೆಸರಲ್ಲಿರೋ ಪರ್ಮಿಷನ್  ನಲ್ಲಿ, ಪಿಡಿಓ ಹೆಸರಲ್ಲಿ 14 ಸಾವಿರ ಟನ್ ರೆಡ್ ಬಾಕ್ಸೈಟ್ ಸಾಗಿಸಲಾಗಿದೆ.

ನಾನು ಮಾಡಿದ ಆರೋಪವನ್ನ ಸಾಬೀತು ಮಾಡಲು ಸವಾಲು ಹಾಕಿದ್ದರು. ಆರೋಪ ಸಾಬೀತುಪಡಿಸಿದ್ರೆ ರಾಜೀನಾಮೆ ಕೊಡುವುದಾಗಿ ಹೇಳಿದ್ದರು ಎಂದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending