Home ಪ್ರಮುಖ ಸುದ್ದಿ 'ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ'-ರಮಾನಾಥ ರೈ

‘ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ’-ರಮಾನಾಥ ರೈ

‘ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ’-ರಮಾನಾಥ ರೈ 

ಮಂಗಳೂರು: ರಾಜ್ಯ ಹಾಗೂ ಕೇಂದ್ರ ಸರಕಾರ ಜನಪರ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು  ಜನವಿರೋಧಿ ಸರಕಾರ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಢಿದ ಅವರು, ಸರಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದೆ. ಏಕಾಏಕಿ ಇಷ್ಟು ದರ ಹೆಚ್ಚಳ ಮಾಡುವುದು ಸರಿಯಲ್ಲ. ಇದೇ ಬಿಜೆಪಿ ಸರಕಾರ, ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದ್ದರೂ ಬೊಬ್ಬೆ ಹೊಡೆಯುತಿದ್ದರು ಎಂದು ಹೇಳಿದರು. ಇದು ಜನರ ಮೇಲೆ ಬರೆ ಎಳೆದಂತೆ ಆಗಿದೆ.

ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಪ್ರಕೃತಿ ವಿಕೋಪದ ಹಣ ಯಾವ ಜಿಲ್ಲೆಗೂ ಬಿಡುಗಡೆ ಆಗಿಲ್ಲ, ಇನ್ನೂ 2800 ಕೋಟಿ ರಾಜ್ಯಕ್ಕೆ ಬಾಕಿ ಇದೆ, ಪಂಚಾಯತ್ ‌ನಲ್ಲಿ ಆಗುತ್ತಿದ್ದ ಸ್ವಲ್ಪ ಕೆಲಸ ಕೂಡ ಆಗುತ್ತಿಲ್ಲ.  ಜಿಎಸ್ ಟಿ ಈ ವರ್ಷ 9 ಸಾವಿರ ಕೋಟಿ ಬಾಕಿ ಇದೆ ಅದನ್ನು ತರಿಸುವಲ್ಲಿ ರಾಜ್ಯ ಸರಕಾರ ವಿಫಲ ಆಗಿದೆ.  ಸರಕಾರ ಅಕ್ಕಿ ಕೊಡುವ ಬಗ್ಗೆ ಕೂಡ ಯೋಚನೆ ಮಾಡುತ್ತಿದೆ. ಸಿದ್ದ ರಾಮಯ್ಯ ಕಾಲದಲ್ಲಿ ಯಾವುದೇ ಹಣಕಾಸಿನ ಕೊರತೆ ಆಗಲಿಲ್ಲ. ಪಂಚಾಯತ್ ಅಧಿಕಾರವನ್ನು ಎಂಎಲ್ಎ ತೆಗೆದುಕೊಳ್ಳುವ ಹುನ್ನಾರ ನಡೆಯುತ್ತಿದೆ. ನಾಯಿಯನ್ನು ಸಾಯಿಸಬೇಕಾದರೆ ಹುಚ್ಚು ಹಿಡಿದಿದೆ ಎನ್ನುತ್ತಾರೆ, ಹಾಗೆ ಆಗಿದೆ ಬಿಜೆಪಿ ಸರಕಾರ ಪರಿಸ್ಥಿತಿ ಎಂದು ಹರಿಹಾಯ್ದರು. ಇದು ದರಿದ್ರ ಸರಕಾರ, ಜಿಲ್ಲೆಯಲ್ಲಿ, ರಾಜ್ಯದಲ್ಲಿ ಶೂನ್ಯ ಸಾಧನೆ ಮಾಡಿದೆ.

ಸಿದ್ದರಾಮಯ್ಯ ಕಾಲದಲ್ಲಿ ಅದ್ಭುತ ಕೆಲಸ ಆಗಿದೆ, ಯಾವುದೇ ಕೆಲಸಕ್ಕೆ ಹಣ ಇಲ್ಲದಂತಾಗಿಲ್ಲ. ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವರಿಗೆ ಅವರ ರಾಜಕೀಯ ಅನುಭವದ ವಯಸ್ಸಾಗಿದೆ ಅಷ್ಟೇ.  ನಮ್ಮ ಜಿಲ್ಲೆಯ ಪರಿಶಿಷ್ಟ ಜಾತಿಯವರನ್ನು ಮಂತ್ರಿ ಮಾಡುವ ಯೋಗ್ಯತೆ ಅವರಿಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!