ಬೆಂಗಳೂರು: ನಾಡಿನಾದ್ಯಂತ ಇಂದು ರಾಮ ಹುಟ್ಟಿದ ದಿನವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರಾಜ್ಯದಾದ್ಯಂತ ಎಲ್ಲಾ ಆಂಜನೇಯನ, ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ.
ರಾಮನವಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ರಾಜ್ಯದಾದ್ಯಂತ ಇಂದು ಶ್ರೀರಾಮನನ್ನು ಜಪಿಸಲಾಗುತ್ತಿದ್ದು, ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಇಂದು ಇಡೀ ದಿನ ಭಕ್ತರು ಉಪವಾಸ ಇದ್ದು ವ್ರತ ಮಾಡಿ ಪಾನಕ, ಕೋಸಂಬರಿ, ಮಜ್ಜಿಗೆ ಸೇವಿಸಿದರೆ ಶುಭ ಆಗುತ್ತೆ ಎನ್ನುವ ನಂಬಿಕೆಯಿದೆ.
ಗಣ್ಯರಿಂದ ಶುಭಾಶಯ
ಶ್ರೀರಾಮನವಮಿ ಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ಶುಭಾಶಯಗಳನ್ನು ಹೇಳಿದ್ದಾರೆ.