ಮೈಸೂರು: ‘ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ’ ಎಂದು ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇನ್ನು 8 ರಿಂದ 10 ದಿನ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಒಂದು ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅನಿಸಿದಲ್ಲಿ ಈ ಬಗ್ಗೆ ಮುಂಬೈನಲ್ಲಿ ತೀರ್ಮಾನಿಸುತ್ತೇನೆ. ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ. ನಾನು ರಾಜಕೀಯ ನಿವೃತ್ತಿ ಪಡೆಯುವುದು ನಿಜ ಎಂದರು. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.