Connect with us

DAKSHINA KANNADA

ಮಂಗಳೂರಿನ ವಿಧ್ವಂಸಕ ಕೃತ್ಯಗಳನ್ನು ಮಟ್ಟ ಹಾಕಲು ಸಜ್ಜಾಗಿದ್ದಾಳೆ ‘ರಾಣಿ’.!

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಲು ರಾಣಿ ಎಂಬ ಶ್ವಾನವನ್ನು ನಿಯೋಜನೆ ಮಾಡಿದ್ದಾರೆ.


ಲ್ಯಾಬ್ರಡಾರ್‌ ತಳಿಯ ರಾಣಿ ಹೆಸರಿನ ಶ್ವಾನವು ಬೆಂಗಳೂರು ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದು,

ಸದ್ಯ ಇದರ ತರಬೇತಿ ಮುಗಿದು ಮಂಗಳೂರು ನಗರಕ್ಕೆ ಕರ್ತವ್ಯ ನಿಯೋಜನೆಗೊಂಡಿದೆ.


ಸಿಟಿ ಆರ್ಮ್‌ಡ್‌ ರಿಸರ್ವ್‌ ಪೋರ್ಸ್‌ನ ಸಿಬ್ಬಂದಿ ಮನೋಜ್ ಶೆಟ್ಟಿ ಮತ್ತು ನಾಗೇಂದ್ರರವರು ಇದನ್ನು ನಿರ್ವಹಣೆ ನಡೆಸಲಿದ್ದಾರೆ.

ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಸ್ಫೋಟಕ ಪತ್ತೆ ಬಗ್ಗೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಮಾಹಿತಿ ನೀಡಿದ್ದಾರೆ.


ಎರಡು ತಿಂಗಳ ಹಿಂದೆ ಇದೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಧಾ ಎಂಬ ಶ್ವಾನ ಕ್ಯಾನ್ಸರ್‌ ಕಾಯಿಲೆಯಿಂದ ಮೃತಪಟ್ಟಿತ್ತು.

ಇದೀಗ ಅದೇ ವಿಭಾಗಕ್ಕೆ ರಾಣಿ ಸೇರ್ಪಡೆಗೊಂಡಿದ್ದಾಳೆ. ಜೊತೆಗೆ ಕಳೆದ ಕರಾವಳಿಯಲ್ಲಿ ಉಗ್ರರ ಕರಿನೆರಳು ಬಿದ್ದಿದ್ದು,

ಮುಂಬರುವ ಹಬ್ಬಗಳ ದಿನದಂದು ವಿಧ್ವಂಸಕ ಕೃತ್ಯ ನಡೆಸಲು ಯೋಜನೆ ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿತ್ತು. ಈ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ಮಧ್ಯೆ ರಾಣಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾಳೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending