Monday, July 4, 2022

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಆರೋಪ: 50 ಸಾವಿರ ನೆರವು ಎಂದ ಜಿಲ್ಲಾಧಿಕಾರಿ

ಹೈದರಾಬಾದ್: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಆರೋಪ ನಗರದ ಸಯೀದಾಬಾದ್ ಪ್ರದೇಶದ ಸಿಂಗರೇಣಿ ಕಾಲೋನಿಯಲ್ಲಿ ನಡೆದಿದೆ. ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ.


ಕಾಣೆಯಾಗಿದ್ದ ಬಾಲಕಿ ಮೃತದೇಹ ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ ಪಕ್ಕದ ಮನೆಯಲ್ಲಿ ಪತ್ತೆಯಾಗಿದೆ. ಹತ್ಯೆಗೂ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಸ್ಥಳೀಯರು ಆರೋಪಿಗಳನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಶವ ಪರೀಕ್ಷೆಗಾಗಿ ಮೃತದೇಹ ನೀಡದಿರಲು ಸ್ಥಳೀಯರು ಮುಂದಾಗಿದ್ದು, ಪೊಲೀಸರು ಅವರ ಮನವೊಲಿಸಿ ಶವವನ್ನು ಪರೀಕ್ಷೆಗೆ ರವಾನಿಸಿದರು.

ಈ ವೇಳೆ, ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಕಾರದ ಪುಡಿ ಎರಚಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಯಿತು. ಬಾಲಕಿ ಮೃತದೇಹ ಪತ್ತೆಯಾಗುತ್ತಿದ್ದಂತೆ, ಆರೋಪಿ ರಾಜು ತಲೆ ಮರೆಸಿಕೊಂಡಿದ್ದಾನೆ.

ಆತನನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಕುಟುಂಬಸ್ಥರಿಗೆ 50 ಸಾವಿರ ರೂಪಾಯಿ ನೆರವು ನೀಡುವುದಾಗಿ ಹೈದರಾಬಾದ್​ನ ಜಿಲ್ಲಾಧಿಕಾರಿ ಎಲ್. ಶರ್ಮಾನ್​ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ ಮತ್ತಿಬ್ಬರ ರಕ್ಷಣೆ

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ.ನಾಪತ್ತೆಯಾದ ಯುವಕನನ್ನು ರಾಜು ಸಾಹ್...

ವಿಟ್ಲ: ಬಕ್ರೀದ್ ಹಬ್ಬ ಹಿನ್ನೆಲೆ ಜಿಲ್ಲಾ ಗಡಿಪ್ರದೇಶದಲ್ಲಿ ಬಂದೋಬಸ್ತ್‌

ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ...