Connect with us

    DAKSHINA KANNADA

    ಉಪ್ಪಿನಂಗಡಿಯಲ್ಲಿ ಮನೆಗೆ ನುಗ್ಗಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ : ಇಬ್ಬರು ಆರೋಪಿಗಳ ಬಂಧನ..!

    Published

    on

    ಮನೆಗೆ ನುಗ್ಗಿ ಬಾಲಕಿಯೋರ್ವಳ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ಪುತ್ತೂರು :  ಮನೆಗೆ ನುಗ್ಗಿ ಬಾಲಕಿಯೋರ್ವಳ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ 24 ವರ್ಷದ ಹಸೈನಾರ್  ಹಾಗೂ 30 ವರ್ಷದ ಅಬ್ಬಾಸ್  ಆರೋಪಿಗಳಾಗಿದ್ದಾರೆ.

    ಇವರಿಬ್ಬರ ವಿರುದ್ಧ  ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

    ಆರೋಪಿಗಳಿಬ್ಬರು ಕಳೆದ  ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

    ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ  ಬಾಲಕಿಯ ಮನೆಗೆ ಹೋಗಿದ್ದರು.

    ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿ ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದಾನೆ ಎನ್ನಲಾಗಿದೆ.

    ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ತನ್ನ ಸಹಚರ ಅಬ್ಬಾಸ್  ಎಂಬವ ನೊಂದಿಗೆ ಬಂದ ಆರೋಪಿಯು ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ  ಎನ್ನಲಾಗಿದೆ.

    ಈ ವೇಳೆ ಬಾಲಕಿ ಹಾಗೂ ಬಾಲಕಿಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು  ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಬಳಿಕ  ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ ಎನ್ನುವ ಮಾಹಿತಿ ಇದೆ.

    ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು  ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

     

    DAKSHINA KANNADA

    ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    Published

    on

    ಧರ್ಮಸ್ಥಳ :  53 ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.3 ರ ಶನಿವಾರ ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ.

    ‘ಮದುವೆ’ ಎನ್ನುವುದು ಅದೆಷ್ಟೋ ಜನರ ಸುಂದರ ಕನಸು. ಆದರೆ ಆರ್ಥಿಕ ಪರಿಸ್ಥಿತಿಯು ಆ ಖುಷಿಗೆ ಸಾಥ್ ನೀಡದೆ ಇರಬಹುದು. ಕೆಲವೊಮ್ಮೆ ಜೋಡಿಯ ಪವಿತ್ರ ಪ್ರೇಮಕ್ಕೆ ಕುಟುಂಬವೂ ಅಡ್ಡಿಯಾಗಬಹುದು. ಅಂತಹ ಯುವ ಜೋಡಿಗೆ ಸಿಹಿ ಸುದ್ದಿಯೊಂದು ಬಂದಿದ್ದು, ಶ್ರೀ ಕ್ಷೇತ್ರ ದರ್ಮಸ್ಥಳದಲ್ಲುಇ ನಡೆಯುವ ಸಾಮೂಹಿಕ ವಿವಾಹದ ಸದುಪಯೊಗವನ್ನು ಪಡೆದುಕೊಳ್ಳಬಹುದು.

    ಎರಡನೇ ವಿವಾಹಕ್ಕೆ ನಿರ್ಬಂಧ ಹೇರಿದ್ದು, ಮೊದಲ ಮದುವೆಗೆ ಮಾತ್ರ ಆದ್ಯತೆ ನೀಡಲಾಗುವುದು. ಮಧುಮಗನಿಗೆ ಧೋತಿ, ಶಾಲು ನೀಡಲಾಗುವುದು. ಮಧುಮಗಳಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಹೂವಿನ ಹಾರ ಕೊಡಲಾಗುವುದು.

    ಇದನ್ನೂ ಓದಿ : ಕಣ್ಣೀರು ಹಾಕುತ್ತಾ ಮಹಾಕುಂಭಮೇಳದಿಂದ ಹೊರ ನಡೆದ ಸುಂದರಿ ಸಾಧ್ವಿ

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯ ಮೂಲಕವೇ ಮದುವೆಯ ಎಲ್ಲಾ ವೆಚ್ಚವನ್ನು  ಮಾಡಲಾಗುವುದು. ಆಸಕ್ತರು 2025 ಫೆ.25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08256-266644 ಸಂಖ್ಯೆಯನ್ನು ಸಂಪರ್ಕಿಸಬಹುದು.

    Continue Reading

    DAKSHINA KANNADA

    ಚಿನ್ನ ಕಡಿಮೆ ಬೆಲೆಗೆ ನೀಡುವವರ ಬಗ್ಗೆ ಎಚ್ಚರ; ಮಂಗಳೂರಿನಲ್ಲಿ ಅಂಗಡಿಯವರೊಬ್ಬರನ್ನು ವಂಚಿಸಲು ಯತ್ನ

    Published

    on

    ಮಂಗಳೂರು : ಕೃಷಿ ಮಾಡುವಾಗ ಭೂಮಿಯಲ್ಲಿ ನಿಧಿ ಸಿಕ್ಕಿದೆ. ನಮಗೆ ತುರ್ತಾಗಿ ಹಣ ಬೇಕಾದ ಕಾರಣ ಕಡಿಮೆಯಲ್ಲಿ ಚಿನ್ನ ಕೊಡ್ತೇವೆ … ಹೀಗಂತ ಯಾರಾದರೂ ನಿಮ್ಮ ಬಳಿ ಬಂದು ಹೇಳಿದ್ರೆ ಎಚ್ಚರವಾಗಿರಿ.

    ಯಾಕಂದ್ರೆ ಇಂತಹ ಕಥೆ ಹೇಳಿ ನಕಲಿ ಚಿನ್ನ ನೀಡಿ ವಂಚಿಸುವ ತಂಡವೊಂದು ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದೆ. ನಗರದ ನಾಗುರಿ ಬಳಿ ಇದೇ ಕಥೆ ಹೇಳಿಕೊಂಡು ಅಂಗಡಿಯವರೊಬ್ಬರನ್ನು ವಂಚಿಸಲು ಪ್ರಯತ್ನಿಸಿದ್ದಾರೆ.

    ಮಹಿಳೆ ಹಾಗೂ ನಾಲ್ವರು ಯುವಕರ ತಂಡ ಈ ಪ್ರಯತ್ನ ಮಾಡಿ ತಗಲಾಕೊಂಡಿದ್ದಾರೆ. ಮೊದಲಿಗೆ ಅಸಲಿ ಚಿನ್ನ ನೀಡಿ ಪರೀಕ್ಷಿಸಲು ಹೇಳಿದ್ದು ಪರೀಕ್ಷೆ ವೇಳೆ ಅದು ಅಸಲಿಯೇ ಆಗಿತ್ತು. 2 ಲಕ್ಷಕ್ಕೆ ಮತ್ತೊಂದು ಚಿನ್ನ ನೀಡಿದ್ದು ಅದು ನಕಲಿಯಾಗಿತ್ತು.

    ಇದನ್ನೂ ಓದಿ: 23 ವರ್ಷದ ಹಿಂದಿ ಕಿರುತೆರೆ ನಟ ಸಾವು

    ಆದರೆ ಇಂತಹ ವಂಚನೆ ಬಗ್ಗೆ ಮೊದಲೇ ಅನುಮಾನ ಇದ್ದ ಅಂಗಡಿಯವರು ಈ ಚಿನ್ನ ಕೂಡಾ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಈ ವೇಳೆ ಬಂಡವಾಳ ಬಯಲಾಗುತ್ತದೆ ಎಂದು ನಾಲ್ವರು ಯುವಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆದರೆ ಜೊತೆಯಲ್ಲಿದ್ದ ಮಹಿಳೆಯನ್ನು ಅಂಗಡಿಯವರು ಹಿಡಿದಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಕಡಿಮೆ ಬೆಲೆಗೆ ಇಂತಹ ಮೋಸದ ಕಥೆ ಹೆಣೆದು ಚಿನ್ನದ ಆಸೆ ತೋರಿಸಿ ವಂಚಿಸೋ ದೊಡ್ಡ ತಂಡವೇ ಇಲ್ಲಿ ಕಾರ್ಯಾಚರಿಸ್ತಾ ಇದೆ. ಹೀಗಾಗಿ ಸಾರ್ವಜನಿಕರು ಇಂತವರ ಬಗ್ಗೆ ಎಚ್ಚರವಾಗಿರುವುದು ಒಳ್ಳೆಯದು.

     

    Continue Reading

    DAKSHINA KANNADA

    ಖ್ಯಾತ ಡಾಲಿ ಚಾಯ್‌ವಾಲ ಮಂಗಳೂರಿಗೆ ಆಗಮನ

    Published

    on

    ಮಂಗಳೂರು : ಇಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಾಲಿ ಚಾಯ್ ವಾಲ ಅವರನ್ನು ಅದ್ದೂರಿಯಾಗಿ ಸ್ವಾಗತ ಕೊರಲಾಯಿತು.

     

    ಮಂಗಳೂರಿನಲ್ಲಿ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟದಲ್ಲಿ ಈ ಬಾರಿ ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್‌ವಾಲ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಕಾರ್ಯಕ್ರಮದ ಮೊದಲ ದಿನ ಅವರು ಭಾಗವಹಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಜಿಲ್ಲಾಡಳಿತದ ಸಹಕಾರದಲ್ಲಿ ಈ ಐದು ದಿನಗಳ ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟ ಹಮ್ಮಿಕೊಳ್ಳಲಾಗಿದೆ.

    ಇದನ್ನೂ ಓದಿ: ಸಂಕ್ರಾಂತಿ ರಜೆ : ಮನೆ ಮಾಲಿಕ ಕಳ್ಳನಿಗೆ ಬರೆದಿಟ್ಟ ಲೆಟರ್ ವೈರಲ್

    ತನ್ನ ಮಂಗಳೂರು ಭೇಟಿಯ ಕುರಿತು ಡಾಲಿ ಚಾಯ್‌ವಾಲ ಅವರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ‘ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. ಮಜಾ ಕರೇಂಗೆ .. ಚಾಯ್‌ ಪಿಯೇಂಗೆ’ ಎಂದು ಪೋಸ್ಟ್‌ ಹಾಕಿದ್ದರು.

    ಮೈಕ್ರೋಸಾಪ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್‌ ಹಂಚಿ ಕೊಂಡ ಬಳಿಕ ಡಾಲಿ ಚಾಯ್‌ವಾಲ ಅವರು ದೇಶಾದ್ಯಂತ ಪರಿಚಿತರಾಗಿದ್ದಾರೆ. ಅವರ ಮೂಲ ಹೆಸರು ಸುನಿಲ್‌ ಪಾಟೀಲ್‌. ಆದರೆ ಅವರು ಡಾಲಿ ಚಾಯ್‌ವಾಲ ಎಂದೇ ಪ್ರಸಿದ್ಧರಾಗಿದ್ದಾರೆ.

    Continue Reading

    LATEST NEWS

    Trending