Connect with us

DAKSHINA KANNADA

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ ಸಾಬೀತು- ಅಪರಾಧಿಗೆ 7 ವರ್ಷ ಕಠಿಣ ಶಿಕ್ಷೆ

Published

on

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ.


2014ರ ಡಿ. 6ರಂದು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡುವ ದುರುದ್ದೇಶದಿಂದ ಆಕೆಯನ್ನು ಮಂಗಳೂರಿನಿಂದ ಮೈಸೂರಿಗೆ ಅಪಹರಿಸಿಕೊಂಡು ಹೋಗಿದ್ದ.
ಮೈಸೂರಿನ ಪಾಂಡವಪುರ ಬಸವನಗುಡಿ ದೇವಸ್ಥಾನದಲ್ಲಿ ಕರಿಮಣಿ ಸರ ಕಟ್ಟಿ ನಂತರ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇವಿನಕೊಪ್ಪ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡಿದ್ದ.
ಈ ಸಂದರ್ಭ ಅಪ್ರಾಪ್ತೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ ಆರೋಪದಡಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಧಾಕರ ಪೂಜಾರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ನಂತರ ತನಿಖೆ ಪೂರ್ಣಗೊಳಿಸಿದ ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಆರ್.ಆರ್.ಕಲ್ಯಾಣ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಬಳಿಕ ವಾದ ಪ್ರತಿವಾದ ನಡೆದು ಆ.12ರಂದು ನ್ಯಾಯಾಧೀಶೆ ಮಂಜುಳಾ ಇಟ್ಟಿ ತೀರ್ಪು ಪ್ರಕಟಿಸಿದ್ದು, ಅಪರಾಧಿ ಸುಧಾಕರ ಪೂಜಾರಿಗೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಏಳು ವರ್ಷ ಮತ್ತು ಅಪಹರಣ ಆರೋಪಕ್ಕೆ ಸಂಬಂಧಿಸಿ ಐದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ.
ಅಲ್ಲದೆ, ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾದೇವಿ ವಾದ ಮಂಡಿಸಿದ್ದರು.

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending