Sunday, May 22, 2022

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ-ಆರೋಪಿ ಬಂಧನ

ಮಂಗಳೂರು: ವ್ಯಕ್ತಿಯೋರ್ವ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36) ಬಂಧಿತ ಆರೋಪಿ.


ಈತ ಮೂಡುಬಿದಿರೆ ನಿವಾಸಿ ಯುವತಿಯೊಬ್ಬಳಿಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದಾನೆ.

ಇಷ್ಟು ಮಾತ್ರವಲ್ಲದೇ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ ಆಮಿಷ ಒಡ್ಡಿ ರೂ.1.50 ಲಕ್ಷ ರೂ. ಸುಲಿಗೆ ಮಾಡಿದ್ದನು.

ಅಷ್ಟೇ ಅಲ್ಲದೆ ಆರೋಪಿಯು ನೊಂದ ಯುವತಿಯನ್ನು ನಗರದ ನಾನಾ ಲಾಡ್ಜ್, ಪುಣೆ, ಮುಂಬಯಿಯ ನಾನಾ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು.

ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ಪಡೆದು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

ಈಕೆ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಕೆಗೊಳ್ಳುವಂತೆ ಕಡತವನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ)ಕ್ಕೆ ವರ್ಗಾಯಿಸಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಸಿಬಿ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹೆಚ್ಚಿನ ತನಿಖೆಗಾಗಿ ಈತನನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಪೊಲೀಸರು ತನಿಖೆಯಲ್ಲಿ ಆರೋಪಿಯು ಹಲವಾರು ವರ್ಷಗಳಿಂದ ಮಾದಕ ವಸ್ತು ಮಾರಾಟ ಮಾಡುತ್ತಿದ್ದ.

ಈತನ ಮೇಲೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಎರಡು ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Hot Topics

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ ಬೆನ್ನಲ್ಲೇ ಗ್ಯಾಸ್‌ಗೆ 200 ರೂ ಸಬ್ಸಿಡಿ ಘೋಷಿಸಿದ ಕೇಂದ್ರ

ನವದೆಹಲಿ: ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ.ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಪ್ರತಿ ಸಿಲಿಂಡರ್‌ಗೆ 200 ರೂ...