DAKSHINA KANNADA
ಪುತ್ತೂರು: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ- ಆರೋಪಿಗೆ ಷರತ್ತುಬದ್ಧ ಜಾಮೀನು
Published
3 years agoon
By
Adminಪುತ್ತೂರು: ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೊ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ.
ಕುದ್ಕಾಡಿ ನಾರಾಯಣ ರೈ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಶರತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ತನ್ನ ಮನೆಯ ಕೆಲಸಕ್ಕೆ ಬರುತ್ತಿದ್ದ ದಲಿತ ಬಾಲಕಿಯನ್ನು ನಿರಂತರ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣ ಎಂದು ನಾರಾಯಣ ರೈ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು.
ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿ ನಾರಾಯಣ ರೈ ನ್ಯಾಯಾಲಯಕ್ಕೆ ಶರಣಾಗಿದ್ದನು.
ಇದೀಗ ಜಾಮೀನು ಕೋರಿ ಎರಡನೇ ಬಾರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿರುವ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿ ನಾರಾಯಣ ರೈಗೆ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿ ಆದೇಶಿಸಿದೆ. ಆರೋಪಿ ಪರ ವಕೀಲ ಮಹೇಶ್ ಕಜೆ ವಾದಿಸಿದ್ದರು.
DAKSHINA KANNADA
ಮಂಗಳೂರು: 73ನೇ ವರ್ಷದ ಬಳ್ಳಾಲ್‌ಭಾಗ್ ಗುರ್ಜಿ ದೀಪೋತ್ಸವ ಸಂಭ್ರಮ
Published
11 hours agoon
29/11/2024ಮಂಗಳೂರು: ಬಳ್ಳಾಲ್‌ಭಾಗ್ ಗುರ್ಜಿ ದೀಪೋತ್ಸವ ಸಮಿತಿ ವತಿಯಿಂದ 73ನೇ ವರ್ಷದ ಗುರ್ಜಿ ದೀಪೋತ್ಸವ ಬಹಳ ಸಂಭ್ರಮದಿಂದ ಜರುಗಿತು.
ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ , ಸೇವಾ ಕಾರ್ಯಕ್ರಮಗಳನ್ನು ಪ್ರತಿ ವರ್ಷದಂತೆ ಈ ವರ್ಷವೂ ನೆರವೇರಿಸಲಾಯಿತು. ಅತ್ಯಂತ ಜನಮಣ್ಣನೆ ಗಳಿಸಿದ ಈ ಗುರ್ಜಿ ದೀಪೋತ್ಸವವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಈ ಬಾರಿಯೂ ನಡೆಯಿತು. ಸಂಜೆ 5.55ಕ್ಕೆ ದೀಪಾರಾಧನೆ, ಸಂಜೆ 6 .30ಕ್ಕೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ರಾತ್ರಿ 9.30ಕ್ಕೆ ರಸಮಂಜರಿ ಕಾರ್ಯಕ್ರಮ ನಡೆಯಿತು. ವೈಭವದ ಮೆರವಣಿಗೆ ಮೂಲಕ ಶ್ರೀದೇವರನ್ನು ಪಲ್ಲಕ್ಕಿಯಲ್ಲಿ ಹೊತ್ತುಕೊಂಡು ಬರಲಾಯಿತು. ವಿದ್ಯುತ್ ಅಲಂಕಾರ, ಹೂವಿನ ಅಲಂಕಾರದಿಂದ ರಥವನ್ನು ಶೃಂಗರಿಸಲಾಗಿತ್ತು.
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ಉದ್ಯಮಿ ಕುಡ್ಪಿ ಜಗದೀಶ್ ಶೆಣೈ ಅವರು ನೀಡಿದರು. ಕಾರ್ಮಿಕ ನಾಯಕ ಸುರೇಶ್ಚಂದ್ರ ಶೆಟ್ಟಿ, ಉದ್ಯಮಿ ರವೀಂದ್ರ ಶೇಟ್, ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್, ಮಾಜಿ ಕಾರ್ಪೋರೇಟರ್ ಪದ್ಮನಾಭ ಅಮೀನ್ , ರಂಗ ಕಲಾವಿದ ವಿಜಯಕುಮಾರ್ ಕೊಡಿಯಾಲ್‌ಬೈಲು, ಸುಶಾಂತ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಪ್ರಕಾಶ್ ಸಾಲ್ಯಾನ್, ಪ್ರಮೋದ್ ಭಂಢಾರಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸನಾತನ ನೃತ್ಯಾಂಜಲಿ ಕಾರ್ಯಕ್ರಮ ಪ್ರದರ್ಶನಗೊಂಡಿತು. ಇದೇ ವೇಳೆ ಗುರ್ಜಿ ದೀಪೋತ್ಸವದಲ್ಲಿ ಹಲವು ಮಂದಿ ಸಾಧಕರನ್ನು ಗೌರವಿಸಲಾಯಿತು.
BANTWAL
ನಾಲ್ಕು ಪತ್ನಿಯರಿಗೆ ಕೈಕೊಟ್ಟು ಐದನೇ ಮದುವೆಗೆ ಸಜ್ಜಾಗುತ್ತಿದ್ದ ರಸಿಕ ಅರೆಸ್ಟ್ !!
Published
16 hours agoon
29/11/2024ಬಂಟ್ವಾಳ: ನಾಲ್ಕು ಮದುವೆಯಾಗಿ, ಐದನೇ ಮದುವೆಗೆ ತಯಾರಾಗುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹ*ಲ್ಲೆ ನಡೆಸಿ ಮನೆಯಿಂದ ಹೊರದಹಾಕಿದ್ದ ರಾ*ಕ್ಷಸೀಯ ಕೃ*ತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ (ನ.27) ರಾತ್ರಿ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದನ್ನೇ ಕಸುಬಾಗಿಸಿಕೊಂಡ ನಟೋರಿಯಸ್ ಬಹುಪತ್ನಿ ವಲ್ಲಭನನ್ನು ಮಾಣಿ ರಫೀಕ್ ಯಾನೆ ಮಹಮ್ಮದ್ ರಫೀಕ್(42)ನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ. ಆರೋಪಿ ಮಾಣಿ ರಫೀಕ್ ಈಗಾಗಲೇ ನಾಲ್ಕು ಮದುವೆಯಾಗಿದ್ದು, ಒಂದೆರಡು ವರ್ಷ ಜೊತೆಯಾಗಿ ಜೀವನ ಮಾಡಿ ಮಕ್ಕಳನ್ನು ಕರುಣಿಸಿದ ಬಳಿಕ ವಿಚ್ಚೇದನ ನೀಡಿ ಪರಾರಿಯಾಗುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಲ್ಕನೇ ಪತ್ನಿಯಿಂದ ದೂರು ದಾಖಲು :
‘ನಿನ್ನೆ ( ನ.26) ಸಂಜೆ ಐದು ಗಂಟೆ ಸುಮಾರಿಗೆ ರಫೀಕ್ ನ ಮನೆಗೆ ನಾನು ಹೋಗಿದ್ದೇನೆ. ಹೋದಂತ ಸಂದರ್ಭದಲ್ಲಿ ಆರೋಪಿಯಾದ ರಫೀಕ್ ಅ*ವಾಚ್ಯ ಶಬ್ದಗಳಿಂದ ಬೈದು, ಹ*ಲ್ಲೆ ನಡೆಸಿದ್ದಲ್ಲದೇ ಮಗುವನ್ನು ಕೊಂ*ದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಲ್ಲದೇ, ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಿಗಿದ್ದಾನೆ’ ಎಂದು ಸಂತ್ರಸ್ತ ಪತ್ನಿ ಆರೋಪಿಸಿದ್ದಾಳೆ. ಅಲ್ಲದೇ ತ್ರಿವಳಿ ತಲಾಖ್ ಎಂದು ಹೇಳಿ ಕುತ್ತಿಗೆಗೆ ಕೈಹಾಕಿ ಮನೆಯಿಂದ ಹೊರಗೆ ದಬ್ಬಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನೂ ಕಿತ್ತುಕೊಂಡಿರುವ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ.
ಮಾಣಿ ರಫೀಕ್ ಯಾರು ? ಹಿನ್ನಲೆ ಏನು ?
ಮಾಣಿ ರಫೀಕ್ ಯಾನೆ ನಟೋರಿಯಸ್ ಕಿರಾತಕ. ಮಾಣಿಯಿಂದ ವಲಸೆ ಬಂದ ರಫೀಕ್ ವಿಟ್ಲ ಸಮೀಪದ ಮಂಗಲಪದವು ಎಂಬಲ್ಲಿ ಮನೆ ಕಟ್ಟಿಕೊಂಡಿದ್ದ. ಅಲ್ಲಿಯೂ ನೆರೆಹೊರೆಯವರ ಜೊತೆ ಗಲಾಟೆ, ಗದ್ದಲ ಎಬ್ಬಿಸಿ ಕೊನೆಗೆ ಮನೆ ಮಾರಾಟ ಮಾಡಿ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲೂ ಕೂಡಾ ಪರಿಸರದ ಶಾಂತಿಪ್ರಿಯ ನಿವಾಸಿಗಳ ಜೊತೆ ತಕರಾರು ಎಬ್ಬಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಜನ್ಮ ನೀಡಿದ ತಾಯಿಯ ಮೇಲೆಯೇ ಮನಬಂದಂತೆ ಹ*ಲ್ಲೆ ನಡೆಸಿ ಆಕೆಯ ಚಿನ್ನಾಭರಣ ಕಿತ್ತು ಕಾಲಿನಿಂದ ತುಳಿದು ಮನೆಯಿಂದ ಹೊರದಬ್ಬಿ ರಾ*ಕ್ಷಸೀಯ ಕೃ*ತ್ಯ ನಡೆಸಿದ್ದ. ಈತನ ಹ*ಲ್ಲೆ, ಕಿರುಕುಳದಿಂದ ಮನನೊಂದ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಲ್ಲದೇ ಠಾಣೆಯಲ್ಲೂ ಹೆತ್ತ ತಾಯಿಯ ಮೇಲೆ ಮನಬಂದಂತೆ ಅ*ವಾಚ್ಯ ಶಬ್ದಗಳಿಂದ ನಿಂದಿಸಿ ರಾ*ಕ್ಷಸೀ ಕೃ*ತ್ಯ ನಡೆಸಿರುವುದು ಪ್ರತಿಯೊಬ್ಬನಿಗೂ ತಿಳಿದ ವಿಚಾರವಾಗಿದೆ. ಅದಾದ ಬಳಿಕ ಅನಾರೋಗ್ಯದಿಂದ ಮೃ*ತಪಟ್ಟ ಮೊದಲ ಪತ್ನಿಯ ಹಿರಿಮಗಳ ಮೇಲೆ ಹ*ಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ. ಇದೀಗ ಆಕೆಯೂ ತನ್ನ ಅಜ್ಜಿ ಜೊತೆ ಮಂಗಲಪದವು ಬಳಿ ಬಾಡಿಗೆ ಮನೆಯಲ್ಲಿದ್ದಾರೆ।
ಇದೀಗ ನಾಲ್ಕನೇ ಪತ್ನಿಯ ಚಿನ್ನಾಭರಣವನ್ನೆಲ್ಲಾ ಕಿತ್ತುಕೊಂಡು ಬಳಿಕ ಆಕೆಯ ಮಗುವಿನ ಮೇಲೆ ಹ*ಲ್ಲೆ ನಡೆಸಿ ಹೊರದಬ್ಬಿದ್ದ ಕಿರಾತಕನ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಸೆಕ್ಷನ್ BNS/-85,86,352,351(1),115(2) ರಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು : ದಿ.ಉಮೇಶ್ ಕಾಜಿಲ ಸವಿನೆನಪಿಗಾಗಿ ಡಿ.1 ರಂದು ಬೃಹತ್ ರಕ್ತದಾನ ಶಿಬಿರ
Published
16 hours agoon
29/11/2024By
NEWS DESK4ಮಂಗಳೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ, ವೀರಾಂಜನೇಯ ಶಾಖೆ ಕಾಜಿಲ, ಭಾರತೀಯ ಜನತಾ ಪಾರ್ಟಿ ತೆಂಕುಳಿಪಾಡಿ ವಾರ್ಡ್ ಸಮಿತಿ ಕಾಜಿಲ, ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗ ಮೋರ್ಚಾ ಮಂಗಳೂರು ಉತ್ತರ ಮಂಡಲ ಇದರ ಸಹಯೋಗದಿಂದ ರಕ್ತಕೇಂದ್ರ ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿ.ಉಮೇಶ್ ಕಾಜಿಲ ಇವರ ಸವಿನೆನಪಿಗಾಗಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಡಿಸೆಂಬರ್ 1 ರಂದು ಭಾನುವಾರ ಕಾಜಿಲ ಮಾಧವ ಮನೆ ವಠಾರದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 8.30 ರಿಂದ 1 ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.
LATEST NEWS
ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ!
ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮನೆ ಮುಂದೆ ವಿಚಿತ್ರ ಪ್ರತಿಭಟನೆ; ಕಾರಣವೇನು?
Watch Video: ರಸ್ತೆಯಲ್ಲಿ ಸೂಪರ್ ಮ್ಯಾನ್ನಂತೆ ಬೈಕ್ ಹಾರಿಸಿದ ವ್ಯಕ್ತಿ
ಮೆಗಾ ಹರಾಜಿನಲ್ಲಿ ಅನ್ಸೋಲ್ಡ್; ನಿವೃತ್ತಿ ಘೋಷಿಸಿದ ಆರ್ಸಿಬಿ ಮಾಜಿ ಆಟಗಾರ
ಅಪರಾಧ ಪ್ರಕರಣಗಳಿಂದ ಸುಸ್ತಾದ ಪೊಲೀಸರು; ಠಾಣೆಯಲ್ಲಿ ಹೋಮ, ಹವನ !
Trending
- BIG BOSS6 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- BANTWAL1 day ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- Baindooru7 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
- Ancient Mangaluru2 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು