Saturday, August 20, 2022

ಅಪ್ರಾಪ್ತೆಯನ್ನು ಕಿಡ್ನಾಪ್‌ ಮಾಡಿ ಐವರಿಂದ 3 ದಿನ ಅತ್ಯಾಚಾರ: ಬಾಯ್ಬಿಟ್ಟರೆ ವೀಡಿಯೋ ವೈರಲ್‌ ಬೆದರಿಕೆ

ಪಟ್ನಾ: ಅಪ್ರಾಪ್ತೆಯನ್ನು ಅಪಹರಿಸಿ ನಿರಂತರ ಮೂರು ದಿನ ಐವರು ಯುವಕರು ಅತ್ಯಾಚಾರ ಎಸಗಿ ನಂತರ ಆಕೆಯನ್ನು ಮನೆ ಬಳಿ ಬಿಟ್ಟು ಹೋದ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ.


ಆರೋಪಿಗಳು ಮಾ. 19 ರಂದು ಬಾಲಕಿಯನ್ನು ಅಪಹರಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಳಿಕ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕೃತ್ಯವನ್ನು ರೆಕಾರ್ಡ್ ಮಾಡಿ, ಈ ಬಗ್ಗೆ ಯಾರಿಗಾದರೂ ಬಾಯ್ಬಿಟ್ಟರೆ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಬಾಲಕಿಗೆ ಬೆದರಿಕೆಯೊಡ್ಡಿದ್ದಾರೆ.
ಬಳಿಕ ಬಾಲಕಿಯನ್ನು ಮಾರ್ಚ್ 22 ರಂದು ಆಕೆಯ ಗ್ರಾಮದ ಸಮೀಪ ಬಿಟ್ಟು ಹೋಗಿದ್ದಾರೆ. ಮನೆಗೆ ಬಂದ ಬಾಲಕಿ ಪೋಷಕರಿಗೆ ಘಟನೆ ಬಗ್ಗೆ ವಿವರಿಸಿದ್ದಾಳೆ.
ಇದಕ್ಕೂ ಮುನ್ನ ಬಾಲಕಿ ಕಾಣೆಯಾಗಿರುವ ಬಗ್ಗೆ ಆಕೆಯ ತಂದೆ ಸಾದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಮನೆಗೆ ಹಿಂದಿರುಗಿದ ಬಳಿಕ ಮತ್ತೆ ಠಾಣೆಗೆ ತೆರಳಿ ಸಾಮೂಹಿಕ ಅತ್ಯಾಚಾರ ಮತ್ತು ಅಪಹರಣದ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಕೇಳಿದ್ದಾರೆ. ಆದರೆ ಪೊಲೀಸರು ನಿರಾಕರಿಸಿದ್ದಾರೆ.
ಬಳಿಕ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಸಂತ್ರಸ್ತೆ ದೂರು ನೀಡಿದ್ದಾರೆ. ಜಯದೀಪ್ ಠಾಕೂರ್ ಎಂಬಾತ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾಲಕಿಯನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ತಿಳಿಸಿದ್ದಾಳೆ.
ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಎಸ್‌ಡಿಪಿಒ ಇಂದ್ರಾ ಪ್ರಕಾಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics