Wednesday, May 18, 2022

ನವಜಾತ ಶಿಶುವಿನ ಮೇಲೆ ಅತ್ಯಾಚಾರಗೈದ ಪಾಪಿ: ಮಗುವಿನ ಸ್ಥಿತಿ ಚಿಂತಾಜನಕ

ಇಟಾ: ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.


ಮಗು ಅಳುವುದಕ್ಕೆ ಶುರು ಮಾಡಿದಾಗ ತಾಯಿ ಬಂದು ನೋಡಿದ್ದಾಳೆ. ಈ ವೇಳೆ ಮಗುವಿನ ಖಾಸಗಿ ಭಾಗದಲ್ಲಿ ರಸ್ತಸ್ರಾವವಾಗುತ್ತಿರುವುದು ಕಂಡುಬಂದಿದೆ.

ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ಬೇರೆಡೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.

ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಗು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ, ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆದರೆ ಘಟನೆ ನಡೆದ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ.

LEAVE A REPLY

Please enter your comment!
Please enter your name here

Hot Topics

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...