ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಕೃಷ್ಣಪ್ಪ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 3ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಹೆತ್ತವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ನಿನ್ನೆ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವಾಗಿದೆ.