Monday, July 4, 2022

ಏಳು ವರ್ಷದ ಬಾಲಕಿಯನ್ನು ಅತ್ಯಾಚಾರಗೈದ ಮದ್ರಾಸ್ ಅಧ್ಯಾಪಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನಿಗೆ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ಕಾಸರಗೋಡು ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.


ಬಂಟ್ವಾಳ ಮೂಲದ ಅಬ್ದುಲ್ ಮಜೀದ್ ಲತೀಫ್ (45) ಶಿಕ್ಷೆಗೊಳಗಾದವನು. 2016 ರ ಜನವರಿ 21ರಂದು ಕೃತ್ಯ ಬೆಳಕಿಗೆ ಬಂದಿತ್ತು.

ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಕಾಸರಗೋಡು ನಗರ ಠಾಣಾ ಪೊಲೀಸರಿಗೆ ದೂರು ಲಭಿಸಿತ್ತು.


ದೂರು ಲಭಿಸಿದ ಹಿನ್ನಲೆಯಲ್ಲಿ ಪೊಲೀಸರು ಅಬ್ದುಲ್ ಮಜೀದ್ ವಿದುದ್ದ ಸಾಕ್ಷ್ಯ ಕಲೆ ಹಾಕಿ ಈತನನ್ನು ಬಂಧಿಸಿತ್ತು.

ಪ್ರಕರಣದಲ್ಲಿ 15 ಸಾಕ್ಷಿಗಳು ಹಾಗೂ 14 ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಹಾಜರು ಪಡಿಸಿತ್ತು.

ಇದೀಗ ವಿಚಾರಣೆ ಬಳಿಕ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...