Wednesday, October 20, 2021

ಫ್ರಾನ್ಸ್‌ ಚರ್ಚ್‌ಗಳಲ್ಲಿ 2 ಲಕ್ಷಕ್ಕೂ ಅಧಿಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ವರದಿ

ಪ್ಯಾರಿಸ್: 1950ನೇ ಇಸ್ವಿಯಿಂದಲೂ ಫ್ರಾನ್ಸ್ ನ ಕ್ಯಾಥೊಲಿಕ್ ಚರ್ಚ್ ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತನಿಖೆ ನಡೆಸುತ್ತಿರುವ ಆಯೋಗ ಹಲವು ಬೆಚ್ಚಿಬೀಳಿಸುವ ಸಂಗತಿಗಳನ್ನು ಹೊರಹಾಕುತ್ತಿದೆ.

ಚರ್ಚ್ ಪಾದ್ರಿಗಳು ಹಾಗೂ ಉನ್ನತ ಅಧಿಕಾರಿಗಳಿಂದ 2 ಲಕ್ಷಕ್ಕೂ ಅಧಿಕ ಮಕ್ಕಳು ಈವರೆಗೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಫ್ರಾನ್ಸ್ ನ ಸ್ವತಂತ್ರ ತನಿಖಾ ಆಯೋಗ ವರದಿಯಲ್ಲಿ ಉಲ್ಲೇಖಿಸಲಾಗಿದೆ.


ಕಳೆದ 70 ವರ್ಷಗಳಲ್ಲಿ ಅಲ್ಲಿನ ಕ್ಯಾಥೊಲಿಕ್ ಚರ್ಚ್ ನ ಪಾದ್ರಿಗಳು ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು,

ಈ ಬಗ್ಗೆ ಚರ್ಚ್ ಕಳೆದ ಹಲವಾರು ವರ್ಷಗಳಿಂದ ಕಣ್ಣುಮುಚ್ಚಿ ಕುಳಿತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಮಕ್ಕಳ ಮೇಲಿನ ಈ ದೌರ್ಜನ್ಯದ ಬಗ್ಗೆ ಚರ್ಚ್ ಉದಾಸೀನತೆ ಮೆರದಿದ್ದು,

ಈ ಬಗ್ಗೆ ಕೇಳಿಬರುತ್ತಿರುವ ನಿಂದನೆಗಳಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿದೆ ಎಂದು ಆಯೋಗದ ಮುಖ್ಯಸ್ಥ ಜೀನ್ ಮಾರ್ಕ್ ಸಾವೆ ಕಿಡಿಕಾರಿದ್ದಾರೆ.
ಈ ಚರ್ಚ್ ಗಳಲ್ಲಿ ಲೈಂಗಿಕ ದೌರ್ಜನ್ಯ ಕೇವಲ ಹೆಣ್ಣುಮಕ್ಕಳ ಮೇಲೆಯಲ್ಲ. ಬದಲಿಗೆ 10-13 ವರ್ಷದೊಳಗಿನ ಗಂಡು ಮಕ್ಕಳ ಮೇಲೂ ಕಾಮುಕರ ಕೆಟ್ಟ ದೃಷ್ಟಿ ವಕ್ಕರಿಸಿದೆ.
ರೋಮನ್ ಕ್ಯಾಥೊಲಿಕ್ ಚರ್ಚ್ನ ಈ ಲೈಂಗಿಕ ಹಗರಣಗಳು ಜಗತ್ತಿನಾದ್ಯಂತ ನಡೆಯುತ್ತಿದ್ದು, ಇದರಲ್ಲಿ ಮಕ್ಕಳ ಲೈಂಗಿಕ ಶೋಷಣೆ ಹೆಚ್ಚಾಗಿದೆ.

ಕಳೆದ 20 ವರ್ಷಗಳಲ್ಲಿ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ಹೆಚ್ಚಾಗಿ ವರದಿ ಆಗುತ್ತಿದ್ದು, 1950ರಿಂದ ಈ ವರಗೆ ಲೈಂಗಿಕ ದೌರ್ಜನ್ಯದಲ್ಲಿ ಭಾಗಿಯಾಗಿರುವ ಪಾದ್ರಿಗಳು ಮತ್ತು ಚರ್ಚ್ ಅಧಿಕಾರಿಗಳ ಸಂಖ್ಯೆ 3000.
ಮಂಗಳವಾರ ಬಿಡುಗಡೆಗೊಂಡಿರುವ ವರದಿಯು ರೋಮನ್ ಕ್ಯಾಥೊಲಿಕ್ ಚರ್ಚ್ ಗಳಲ್ಲಿ ಕಳೆದ 20 ವರ್ಷಗಳಿಂದ ವರದಿಯಾಗುತ್ತಿರುವ ಸರಣಿ ಲೈಂಗಿಕ ಹಗರಣ ಪ್ರಕರಣಕ್ಕೆ ಇತ್ತೀಚಿಗಿನ ಸೇರ್ಪಡೆಯಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...