ಬಂಟ್ವಾಳ: ಅಪ್ರಾಪ್ತೆಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡು ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಓರ್ವ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ.
ಕಬಕ ನಿವಾಸಿ ಸಂಶೀರ್ ಎಂಬಾತ ಬಂಧಿತ ಆರೋಪಿ.
ಈತ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪ ಮಾಡಿ ಬಳಿಕ ಮನೆಗೆ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.
ಈ ಹಿನ್ನೆಲೆ ಬಾಲಕಿ ಪೋಷಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿದ ವಿಟ್ಲ ಪೋಲಿಸ್ ಇನ್ಸ್‌ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ಎಸ್‌ಐ ಸಂದೀಪ್ ಶೆಟ್ಟಿ ಅವರ ತಂಡ ಆರೋಪಿಯನ್ನು ಬಂಧಿಸಿದೆ.