Monday, January 24, 2022

ತಾಯಿಯ ಮೇಲೆ ಸ್ವಂತ ಮಗನಿಂದ ಪೈಶಾಚಿಕ ಕೃತ್ಯ: ಪುತ್ತೂರಿನಲ್ಲೊಂದು ಅಮಾನವೀಯ ಘಟನೆ

ಪುತ್ತೂರು: ತಾಯಿಯ ಮೇಲೆಯೇ ಸ್ವಂತ ಮಗ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಜ.12ರ ತಡರಾತ್ರಿ ನಡೆದಿದೆ.
ಜಯರಾಮ ರೈ (35) ಪೈಶಾಚಿಕ ಕೃತ್ಯ ಎಸೆದ ಆರೋಪಿ.

ಘಟನೆ ಹಿನ್ನೆಲೆ
ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅಮಾನುಷವಾಗಿ ಪ್ರಾಣಿಯಂತೆ ಎರಗಿ ಅತ್ಯಾಚಾರ ಎಸಗಿದ್ದಾನೆ.

ಇದರಿಂದ ಸಂತ್ರಸ್ತೆ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 58 ವರ್ಷದ ಸಂತ್ರಸ್ತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ.

ಮಗನ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್​​) ಮತ್ತು 506 ಸೆಕ್ಷನ್​ಗಳ ಅಡಿಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿಯನ್ನು ಸಂಪ್ಯ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಈ ಕೃತ್ಯ ನಡೆದ ರಾತ್ರಿ ಎಂದಿನಂತೆ ರಾತ್ರಿ ಊಟ ಮಾಡಿ ಆರೋಪಿಯು ತನ್ನ ಕೋಣೆಯಲ್ಲಿ ಮಲಗಿದ್ದ. 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದ ಕೋಣೆಗೆ ತೆರಳಿ ಆರೋಪಿ ಅತ್ಯಾಚಾರ ಎಸಗಿದ್ದಾನೆ.

ಈ ಸಂದರ್ಭ ತಾಯಿ ಕಿರುಚಿ, ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆರೋಪಿಯು ತಾಯಿಯ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ.

ಅತ್ಯಾಚಾರದ ಬಳಿಕ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಸಿದ್ದಾನೆ.

ಇದಾದ ಬಳಿಕ ಜನವರಿ 13ರಂದು ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಯು ಬಲವಂತದಿಂದ ಆಕೆಯನ್ನು ಮನೆಯ ಹಾಲ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ.

ಮಗನ ಕೃತ್ಯದಿಂದ ಅಸ್ವಸ್ಥಗೊಂಡಿರುವ ಮಹಿಳೆ ಮಧ್ಯಾಹ್ನ 1 ಗಂಟೆಗೆ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಪರೀಕ್ಷಿಸಿ, ಒಳರೋಗಿಯಾಗಿ ದಾಖಲಿಸಿಕೊಂಡಿದ್ದಾರೆ.

ಬಳಿಕ ಆಕೆ ಸಂಪ್ಯ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಆತನ ಪತ್ನಿಯು ತವರು ಮನೆಯಲ್ಲಿ ವಾಸ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.

Hot Topics

ಕುಂಪಲ: ಪ್ರಯಾಣಿಕರನ್ನು ಇಳಿಸುವ ವೇಳೆ ಖಾಸಗಿ ಸಿಟಿ ಬಸ್‌ಗಳ ಢಿಕ್ಕಿ

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...