Friday, August 19, 2022

ತನ್ನ ಒಡೆತನದ ಪಿ.ಜಿಯಲ್ಲಿದ್ದ ಯುವತಿಯನ್ನೂ ಬಿಡಲಿಲ್ಲ ಆ ಕಾಮುಕ…..

ಬೆಂಗಳೂರು: ಪಿ.ಜಿ ಮಾಲೀಕನೋರ್ವ ತನ್ನ ಪಿ.ಜಿಯಲ್ಲಿದ್ದ ಯುವತಿಯೋರ್ವಳಿಗೆ ರಿವಾಲ್ವಾರ್ ನಲ್ಲಿ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಹಾರ ಮೂಲದ ಅನಿಲ್ ರವಿಶಂಕರ್ ಪ್ರಸಾದ್ ಬಂಧಿತ ಆರೋಪಿ.


ಈತ ಟೈಲ್ಸ್ ವ್ಯಾಪಾರ ಮಾಡುತ್ತಿದ್ದ ಉದ್ಯಮಿಯಾಗಿದ್ದು, ತನ್ನ ಒಡೆತನದ ಯುವತಿಯೊಬ್ಬಳಿಗೆ ಆರೋಪಿಯು ರಿವಾಲ್ವಾರ್​ ತೋರಿಸಿ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ.

ಈತನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದು ರಿವಾಲ್ವರ್ ಅನ್ನು ಕೂಡ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಈ ಪುಟ್ಟ ಹುಡುಗನಿಗಿರುವಷ್ಟು ಕಾಳಜಿಯೂ ಜನಪ್ರತಿನಿಧಿ, ಅಧಿಕಾರಿಗಳಿಗೆ ಇಲ್ವಾಲ್ಲಾ ಛೇ..!

ಮಂಗಳೂರು: ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಕೋಟಿ ಗಟ್ಟಲೆ ಹಣವನ್ನು ತಂದು ಮಂಗಳೂರು ನಗರವನ್ನು ಸುಂದರೀಕರಣಗೊಳಿಸಲಾಗುತ್ತಿದೆ. ಆದರೆ ಹೊಂಡಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ.ಕಾರಿನಲ್ಲಿ ಸಂಚಾರ ಮಾಡುವವರಿಗೆ ಬೈಕಿನ ಸವಾರರ ಕಷ್ಟ...

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...