Wednesday, July 28, 2021

ರೈತರ ಪ್ರತಿಭಟನೆ: ಜಂತರ್‌ಮಂತರ್‌ನಲ್ಲಿ ಪೊಲೀಸ್‌ ಪಹರೆ

ದೆಹಲಿ: ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ‘ಕಿಸಾನ್ ಪಂಚಾಯತ್’ ಎಂದು ಕರೆಯಲ್ಪಡುವ ಧರಣಿ ಸಂಸತ್ ಬಳಿ ಇಂದಿನಿಂದ ಪ್ರಾರಂಭವಾಗಲಿದೆ. ಪ್ರತಿಭಟನೆಯ ಮುನ್ನ ದೆಹಲಿ ಪೊಲೀಸರು ಜಂತರ್ ಮಂತರ್ ಸುತ್ತಮುತ್ತಲಿನ ಇಡೀ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಪ್ರತಿಭಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಯನ್ನು ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್ ಹಾಕಲಾಗಿದೆ. ಪೊಲೀಸರು ಈಗಾಗಲೇ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಾಗದ ಸಿಂಘು, ಟಿಕ್ರಿ ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದ ಇತರ ಸ್ಥಳಗಳಲ್ಲಿ ಭಾರೀ ಭದ್ರತೆಗೆ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

ಸಂಸತ್ತಿನತ್ತ ಮೆರವಣಿಗೆ ನಡೆಸುವುದಿಲ್ಲ ಎಂದು ಪ್ರತಿಭಟನಾಕಾರರಿಂದ ಭರವಸೆ ನೀಡಿದ ನಂತರ ದೆಹಲಿ ಪೊಲೀಸರು ರೈತರಿಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಿದರು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಕೊವಿಡ್ -19 ನಿಬಂಧನೆಗಳನ್ನು ಅನುಸರಿಸಿ ದಿನಕ್ಕೆ 200 ಪ್ರತಿಭಟನಾಕಾರರಿಗೆ ಮಾತ್ರ ಅನುಮತಿ ನೀಡಿದೆ. ಜುಲೈ 22 ರಿಂದ ಆಗಸ್ಟ್ 9 ರವರೆಗೆ ಅನುಮತಿ ನೀಡಲಾಗಿದೆ. ಈ ಮಧ್ಯೆ ಸಂಸತ್‌ ಭವನದ ಸಮೀಪ ರಾಹುಲ್‌ ಗಾಂಧಿ ನೇತೃತದಲ್ಲಿ ಪ್ರತಿಭಟನೆ ನಡೆಯಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...