Connect with us

DAKSHINA KANNADA

ದೇವರಗದ್ದೆ ಕೊರಗಜ್ಜನ ಸನ್ನಿಧಾನಕ್ಕೆ ರಾಪರ್ ಚಂದನ್ ಶೆಟ್ಟಿ, ನಿರೂಪಕ ನಿರಂಜನ್ ದೇಶಪಾಂಡೆ ದಂಪತಿ ಭೇಟಿ..!

Published

on

ಇಲ್ಲಿನ ದೇವರಗದ್ದೆ ಶ್ರೀ ಆದಿಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಶುಕ್ರವಾರ ಖ್ಯಾತ ರಾಪರ್ ಚಂದನ್ ಶೆಟ್ಟಿ ಮತ್ತು ಗಿಚ್ಚಿ ಗಿಲಿ ಗಿಲಿ ನಿರೂಪಕ ನಿರಂಜನ್ ದೇಶಪಾಂಡೆ , ಅವರ ಪತ್ನಿ ಶಸ್ವಿನಿ ದೇಶಪಾಂಡೆ ಭೇಟಿ ನೀಡಿ ಅಜ್ಜನ ದರ್ಶನ ಪಡೆದರು.

ಸುಬ್ರಹ್ಮಣ್ಯ: ಇಲ್ಲಿನ ದೇವರಗದ್ದೆ ಶ್ರೀ ಆದಿಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಶುಕ್ರವಾರ ಖ್ಯಾತ ರಾಪರ್ ಚಂದನ್ ಶೆಟ್ಟಿ ಮತ್ತು ಗಿಚ್ಚಿ ಗಿಲಿ ಗಿಲಿ ನಿರೂಪಕ ನಿರಂಜನ್ ದೇಶಪಾಂಡೆ , ಅವರ ಪತ್ನಿ ಶಸ್ವಿನಿ ದೇಶಪಾಂಡೆ ಭೇಟಿ ನೀಡಿ ಅಜ್ಜನ ದರ್ಶನ ಪಡೆದರು.

ಸನ್ನಿಧಾನಕ್ಕೆ ಭೇಟಿ ವೇಳೆ ಚಂದನ್ ತಾನು ಖ್ಯಾತ ಕ್ರಿಕೆಟಿಗ ಕ್ರಿಸ್ ಗೇಲ್ ಜೊತೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಆಲ್ಬಂ ಸಾಂಗ್ ಅಂತರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗಿ ಮೂಡಿ ಬರಬೇಕು ಎಂದು ಕೊರಗಜ್ಜನಲ್ಲಿ ಮದ್ಯಸ್ಥ ಬಾಬು ಎಂ ಮೊಗ್ರರ ಮೂಲಕ ಪ್ರಾರ್ಥಿಸಿದರು.

ಅಲ್ಲದೆ ಪ್ರಪ್ರಥಮವಾಗಿ ತಾನು ನಾಯಕ ನಟನಾಗಿ ಅಭಿನಯಿಸಿದ ಚಲನಚಿತ್ರವು ಇನ್ನೇನು ಬಿಡುಗಡೆಯಾಗಲಿದ್ದು ಯಶಸ್ವಿ ಯಾಗಬೇಕು ಎಂದು ಪ್ರಾರ್ಥನೆ ಮಾಡಿದರು.

DAKSHINA KANNADA

ದೇವರಿಗೆ ತುಪ್ಪದಲ್ಲಿ ದೀಪ ಹಚ್ಚುವುದು ಶುಭವೇ..?

Published

on

ಮಂಗಳೂರು: ಮನೆಯ ದೇವರ ಕೊಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ, ಎಣ್ಣೆ, ಸಾಸಿವೆ, ಎಳ್ಳು ಅಥವಾ ಮಲ್ಲಿಗೆಯ ಎಣ್ಣೆಯ ದೀಪವನ್ನು ಹಚ್ಚುವ ಪದ್ಧತಿ ಇದೆ. ಈ ರೀತಿಯಾಗಿ ಪ್ರತಿಯೊಂದು ಎಣ್ಣೆಯ ದೀಪವನ್ನು ಸುಡುವುದು ವಿಭಿನ್ನ ಮಹತ್ವವನ್ನು ಹೊಂದಿದೆ. ತುಪ್ಪದ ದೀಪವನ್ನು ಹಚ್ಚುವುದು ದುಬಾರಿಯಾದ ಕಾರಣ ಜನರು ಎಣ್ಣೆಯ ದೀಪಗಳನ್ನು ಹೆಚ್ಚು ಹಚ್ಚುತ್ತಾರೆ. ಎಣ್ಣೆ ಅಥವಾ ತುಪ್ಪದ ದೀಪಕ್ಕಿಂತ ಯಾವುದರ ದೀಪ ಹಚ್ಚುವುದು ಹೆಚ್ಚು ಮಂಗಳಕರ ಎಂಬುದನ್ನು ತಿಳಿದುಕೊಳ್ಳೋಣ.

ಯಾವ ದೀಪವನ್ನು ಬೆಳಗಬೇಕು?

ತುಪ್ಪದ ದೀಪವನ್ನು ಯಾವಾಗಲೂ ಹೂವಿನಾಕಾರದ ದೀಪದಲ್ಲಿ ಬಿಳಿ ಎಂಬ ಬೆಳಕಿನಿಂದ ಬೆಳಗಿಸಲಾಗುತ್ತದೆ ಮತ್ತು ಎಣ್ಣೆ ದೀಪವನ್ನು ಉದ್ದವಾದ ದೀಪದಿಂದ ಬೆಳಗಿಸಲಾಗುತ್ತದೆ. ಆದರೆ, ಎಳ್ಳಿನ ಎಣ್ಣೆಯ ದೀಪವನ್ನು ಹಚ್ಚಿದರೆ ಅದರಲ್ಲಿ ಕೆಂಪು ಅಥವಾ ಹಳದಿ ದೀಪವನ್ನು ಬಳಸಬೇಕು.

ಯಾವ ದೀಪ ಸೂಕ್ತ?

ತುಪ್ಪದ ದೀಪವನ್ನು ದೇವರಿಗೆ ಸಮರ್ಪಿಸಲಾಗುತ್ತದೆ. ಆದರೆ ಇಷ್ಟಾರ್ಥಗಳ ಈಡೇರಿಕೆಗಾಗಿ ಎಣ್ಣೆಯ ದೀಪವನ್ನು ಬೆಳಗಿಸಲಾಗುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ಹೊಂದಲು ತುಪ್ಪದ ದೀಪವನ್ನು ಹಚ್ಚುವುದು ಹೆಚ್ಚು ಪ್ರಯೋಜನಕಾರಿ. ಇದರಿಂದ ದೇವರುಗಳು ಮತ್ತು ದೇವತೆಗಳು ಸಂತೋಷಪಡುತ್ತಾರೆ.

ತುಪ್ಪದ ದೀಪವನ್ನು ಹಚ್ಚುವುದು ಅತ್ಯಂತ ಮಂಗಳಕರ

ಮನೆ ಅಥವಾ ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಜೊತೆಗೆ ಮನೆಯ ವಾಸ್ತು ದೋಷಗಳು ಸಹ ನಿವಾರಣೆಯಾಗುತ್ತದೆ. ಇದು ಎಲ್ಲಾ ರೀತಿಯ ನೋವನ್ನು ನಾಶಪಡಿಸುತ್ತದೆ. ಶಿವ ಪುರಾಣದ ಪ್ರಕಾರ ಪ್ರತಿದಿನ ತುಪ್ಪದ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ಸುಖ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ ಎಂದು ಹೇಳಲಾಗಿದೆ.

ತುಪ್ಪದ ದೀಪವನ್ನು ಹಚ್ಚಿದರೆ ಗಾಳಿಯು ಶುದ್ಧವಾಗುತ್ತದೆ ಮತ್ತು ಗಾಳಿಯಲ್ಲಿರುವ ರೋಗಾಣುಗಳು ನಾಶವಾಗುತ್ತದೆ. ಇದರ ಸುವಾಸನೆಯು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಮತ್ತು ಖಿನ್ನತೆಯನ್ನು ಹೋಗಲಾಡಿಸುತ್ತದೆ. ತುಪ್ಪವು ಚರ್ಮದ ರಕ್ತ ಕಣಗಳನ್ನು ಸಕ್ರಿಯಗೊಳಿಸುವ ವಿದ್ಯುತ್ಕಾಂತೀಯ ಶಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತದೆ, ಇದರಿಂದಾಗಿ ಯಾವುದೇ ಚರ್ಮ ರೋಗಗಳು ಬರುವುದಿಲ್ಲ.

Continue Reading

DAKSHINA KANNADA

ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!

Published

on

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.

accident

ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

 ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

accident

 

Continue Reading

DAKSHINA KANNADA

ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶ*ವ.!!

Published

on

ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್‌ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.

bantwala death

ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್‌ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading

LATEST NEWS

Trending