Saturday, November 27, 2021

ಮಲ್ಪೆ ಬಂದರಿನಲ್ಲಿ ಅಪರೂಪದ ಹೆಲಿಕಾಪ್ಟರ್‌ ಮೀನು ಬಲೆಗೆ

ಉಡುಪಿ: ಇಲ್ಲಿನ ಮಲ್ಪೆಯ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡು ಮೀನುಗಾರರು ಹಾಗು ಪ್ರವಾಸಿಗರಲ್ಲಿ ಆಶ್ಚರ್ಯ ಮೂಡಿಸಿದೆ.


ಭಾರೀ ಗಾತ್ರದ ಉದ್ದದ ಬಾಲ, ಬೆನ್ನ ಮೇಲೆ ಅಗಲ ರೆಕ್ಕೆಯನ್ನು ಈ ಮೀನು ಹೊಂದಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಗೆ 84 ಕಿಲೋ ತೂಗುವ ಈ ಬಹೃತ್ ಗಾತ್ರದ ಮೀನು ಬಿದ್ದಿದೆ.

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದು , ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರು ಕೊಡ ಇದೆ.

ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್ ನ ಮಾಂಸ ಇಷ್ಟ ಇಲ್ಲ. ಇಲ್ಲಿನವರಿಗೆ ಅದರ ರುಚಿ ಹಿಡಿಸೋದಿಲ್ಲ. ಕೇರಳಿಗರು ಅದನ್ನು ಇಷ್ಟಪಡುತ್ತಾರೆ. ಹೀಗಾಗಿ ಮಂಗಳೂರು ಮೂಲಕ ಕೇರಳಕ್ಕೆ ರವಾನಿಸಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...