Connect with us

    DAKSHINA KANNADA

    ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ವೃದ್ಧ ರೋಗಿಯ ಜೀವ ಉಳಿಸಿದ ಇಂಡಿಯಾನಾ ಆಸ್ಪತ್ರೆ

    Published

    on

    ಮಂಗಳೂರು : ಕರಾವಳಿಯ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ವೃದ್ಧ ರೋಗಿಯೊಬ್ಬರಿಗೆ ಅತ್ಯಂತ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವ ಉಳಿಸುವ ಕಾರ್ಯ ಮಾಡಿದ್ದಾರೆ.
    ರೋಗಿಯ ಧಮನಿಯ ಬ್ಲಾಕುಗಳನ್ನು ಅಂಜಿಯೊಪ್ಲಾಸ್ಟಿ ಮೂಲಕ ಮತ್ತು ಟ್ರಾನ್ಸ್-ಕ್ಯಾತಿಟರ್ ಮಹಾಪಧಮನಿಯ ಕವಾಟದ ಬದಲಿ / ಇಂಪ್ಲಾಂಟೇಶನ್ ಮೂಲಕ ತನ್ನ ಪ್ರಶಂಸನೀಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

    ಗೋವಾ ನಿವಾಸಿ ವಯೋವೃದ್ಧರಾದ ಆಹ್ಮದ್ ಖಾನ್ ಎಂಬವರಿಗೆ ಇಂಡಿಯಾನಾ ಆಸ್ಪತ್ರೆಯ ಮುಖ್ಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ನೇತೃತ್ವದ ವೈದ್ಯರ ತಂಡವು ಈ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.
    ರಕ್ತ ಧಮನಿಯಲ್ಲಿ ಅನೇಕ ಬ್ಲಾಕ್‍ಗಳನ್ನು ಹೊಂದಿರುವ ತೀವ್ರವಾದ ಮಹಾಪಧಮನಿಯ ಕವಾಟದ ಸ್ಟೆನೋಸಿಸ್‍ನಿಂದ ಬಳಲುತ್ತಿದ್ದ ಆಹ್ಮದ್ ಖಾನ್ ಅವರು ಎದೆ ನೋವು, ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿಸಿದ ಸಮಸ್ಯೆಗಳಿಂದ ಅಸ್ವಸ್ಥರಾಗಿ ಚಕಿತ್ಸೆಗಾಗಿ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ಅವರು ಈ ಮೊದಲು ಈ ಪ್ರದೇಶದ ಅನೇಕ ಆಸ್ಪತ್ರೆಗಳನ್ನು ಚಿಕಿತ್ಸೆಗಾಗಿ ಸಂಪರ್ಕಿಸಿದ್ದರು, ಆದರೆ ಅಂತಹ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಇಂಡಿಯಾನಾ ಸಿದ್ಧಹಸ್ತ ಎಂದು ತಿಳಿಸಿದ ನಂತರ, ಇಂಡಿಯಾನಾ ಆಸ್ಪತ್ರೆಗೆ ಆಗಮಿಸಿದ್ದರು.
    ಕವಾಟಗಳನ್ನು ಬದಲಾಯಿಸಲು ಮತ್ತು ಹಿಂದೆ ಬ್ಲಾಕ್‍ಗಳನ್ನು ತೆಗೆದುಹಾಕಲು ಅವರು ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಎದುರಿಸುತ್ತಿರುವ ಪ್ರಸ್ತುತ ಸಮಸ್ಯೆಗಳನ್ನು ನಿವಾರಿಸಲು, ಅವರು ಮತ್ತರೆಡು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.

    ಆದರೆ ಅವರು ವಯಸ್ಸಾದ ವ್ಯಕ್ತಿಯಾಗಿದ್ದರಿಂದ ಅವರನ್ನು ಮತ್ತರೆಡು ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಸವಾಲಾಗಿತ್ತು ಮತ್ತು ಅಪಾಯಕಾರಿಯೂ ಆಗಿತ್ತು. ಆಂಜಿಯೋಪ್ಲ್ಯಾಸ್ಟಿ ಮೂಲಕ ಬ್ಲಾಕ್‍ಗಳನ್ನು ತೆಗೆದುಹಾಕುವುದರ ಜೊತೆಗೆ ಶಸ್ತ್ರಚಿಕಿತ್ಸೆಯಿಲ್ಲದೆ ಕವಾಟದ ಬದಲಿಯನ್ನು ಬದಲಾಯಿಸಲು ಡಾ. ಯೂಸುಫ್ ಕುಂಬ್ಳೆ ಸೂಚಿಸಿದ್ದರು. “ಈ ವಿಧಾನವು ಸಾಮಾನ್ಯ ಕಾರ್ಯವಿಧಾನಗಳಿಗಿಂತ ಹೆಚ್ಚು ಜಟಿಲವಾಗಿದೆ ಏಕೆಂದರೆ ಹಳೆಯ ಕೃತಕ ಕವಾಟ ಬಳಿ ಹೊಸ ಕವಾಟವನ್ನು ನಿಯೋಜಿಸಬೇಕಾಗಿತ್ತು,” ಎಂದು ಹೇಳುತ್ತಾರೆ ಖಿಂಗಿI ಯನ್ನು ನಿರ್ವಹಿಸಿದ ಕರಾವಳಿ ಮತ್ತು ಮಲೆನಾಡು ಕರ್ನಾಟಕ ಪ್ರದೇಶದ ಮೊದಲಿಗರಾದ ಡಾ. ಯೂಸುಫ್ ಕುಂಬ್ಳೆ.
    ಎರಡು ವರ್ಷಗಳ ಹಿಂದೆ ಇಂಡಿಯಾನಾ ಆಸ್ಪತ್ರೆ ಕರಾವಳಿ ಮತ್ತು ಮಲೆನಾಡು ಕರ್ನಾಟಕದಲ್ಲಿ ಮೊದಲ ಬಾರಿಗೆ TAVI ಪ್ರದರ್ಶನ ನೀಡಿತು ಮತ್ತು ಅಂದಿನಿಂದ ಹಲವಾರು ರೋಗಿಗಳ ಮೇಲೆ TAVI ಯನ್ನು ನಡೆಸಿದೆ ಎಂದು ನೆನಪಿಸಿಕೊಳ್ಳಬಹುದು. ಆದಾಗ್ಯೂ, ಇಂಡಿಯಾನಾ ಆಸ್ಪತ್ರೆಯಲ್ಲಿ ಇಂತಹ ಅಪರೂಪದ TAVI ಯನ್ನು ಇದೇ ಮೊದಲ ಬಾರಿಗೆ ನಡೆಸಲಾಯಿತು, ಹೀಗಾಗಿ ಹೆಚ್ಚು ಕ್ಲಿಷ್ಟಕರ ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡುವಲ್ಲಿ ಇಂಡಿಯಾನಾ ಒಂದು ಮೈಲಿಗಲ್ಲನ್ನು ಸೃಷ್ಟಿಸಿತು. ಯಾವುದೇ ಸಾಮಾನ್ಯ ಅರಿವಳಿಕೆ ಇಲ್ಲದೆ ರೋಗಿಯನ್ನು ಕೇವಲ ಸ್ಥಳೀಯ ಅರಿವಳಿಕೆ ನೀಡಿ 90 ನಿಮಿಷಗಳ ಶಸ್ತ್ರಚಿಕಿತ್ಸೆ ಪ್ರಕ್ರಿಯೆಗೆ ಒಳಪಡಿಸಲಾಯಿತು ಮತ್ತು ಅವರನ್ನು ಐಸಿಯುಗೆ 24 ಗಂಟೆಗಳ ಕಾಲ ವೀಕ್ಷಣೆಗಾಗಿ ವರ್ಗಾಯಿಸಲಾಯಿತು. ಅವರನ್ನು ಎರಡೂವರೆ ದಿನಗಳ ಬಳಿಕ ಬಿಡುಗಡೆ ಮಾಡಲಾಯಿತು. ಅವರು ಈಗ ಮಾಮೂಲಿನಂತೆ ಜೀವನವನ್ನು ನಡೆಸುತ್ತಾರೆ, ಮತ್ತು ಆರೋಗ್ಯವಂತರಾಗಿದ್ದಾರೆ.

    ಯಶಸ್ವಿ ಚಿಕಿತ್ಸೆಯ ಬಗ್ಗೆ ರೋಗಿಯು ಸಂತೋಷವನ್ನು ವ್ಯಕ್ತಪಡಿಸಿದರು, ಅವರ ಕುಟುಂಬದ ಸದಸ್ಯರು ಅಂತಹ ಕ್ಲಿಷ್ಟಕರ ಹೃದಯ ಶಸ್ತ್ರಚಿಕಿತ್ಸೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ಆಸ್ಪತ್ರೆಯ ವೈದ್ಯರಾದ ಡಾ.ಯುಸುಫ್ ಕುಂಬ್ಳೆ, ಡಾ.ಮಂಜುನಾಥ್ ಸುರೇಶ್ ಪಂಡಿತ್, ಡಾ.ಸಿದ್ಧಾರ್ಥ್ ವಿ.ಟಿ, ಡಾ.ಲತಾ ಆರ್., ಡಾ.ಪ್ರಾಚಿ ಶರ್ಮಾ ಮತ್ತು ಇಂಡಿಯಾನಾದ ಇಡೀ ತಂಡಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. “ಮಹಾಪಧಮನಿಯ ಕವಾಟದ ವಯಸ್ಸಿಗೆ ಸಂಬಂಧಿಸಿದ ಅವನತಿ ಮಹಾಪಧಮನಿಯ ಸ್ಟೆನೋಸಿಸ್ ಸಾಮಾನ್ಯ ಕಾರಣವಾಗಿದೆ. TAVI ವೃದ್ಧರಿಗೆ ಆದರ್ಶ ಚಿಕಿತ್ಸೆಯಾಗಿದೆ ಮತ್ತು ಇಂಡಿಯಾನಾ ಆಸ್ಪತ್ರೆ ಈ ಚಿಕಿತ್ಸೆಯಲ್ಲಿ ವಿಶೇಷ ಪರಿಣತಿ ಹೊಂದಿದೆ,” ಎನ್ನುತ್ತಾರೆ ಡಾ. ಯೂಸುಫ್ ಕುಂಬ್ಳೆ.

    DAKSHINA KANNADA

    ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ

    Published

    on

    ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.

    ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    DAKSHINA KANNADA

    ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ

    Published

    on

    ಮಂಗಳೂರು/ಮಸ್ಕತ್  : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು  ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.

    ಈ ಸಂದರ್ಭ  ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

    ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :

    ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ  ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.

    Continue Reading

    LATEST NEWS

    Trending