ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ. ಅವರು ಕನ್ನಡ ಸಿನಿಮಾ, ಧಾರವಾಹಿ ಹಾಗೂ ರಂಗಭೂಮಿಯಲ್ಲಿ ನಟಿಸಿದ್ದರು.
ಸರಿಗಮ ವಿಜಿ ಅವರ ಮೂಲ ಹೆಸರು ವಿಜಯ್ ಕುಮಾರ್. ಆದರೆ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡಿದ್ದು ಹೇಗೆ ಎನ್ನುವ ಕುತೂಹಲ ಹಲವರಲ್ಲಿ ಇದೆ.
‘ಸರಿಗಮ ವಿಜಿ’ ಎಂದೇ ಕರೆಯಲ್ಪಡುವ ನಟ ವಿಜಯ್ ಕುಮಾರ್ (76) ಅವರು ಬುಧವಾರ (ಜ.15) ನಿಧ*ನರಾದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಶ್ವಾಸಕೋಶದ ಸೋಂಕು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವಾರದ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 9:45ರ ಸುಮಾರಿಗೆ ಅವರು ನಿಧ*ನ ಹೊಂದಿದ್ದಾರೆ.
ಬೆಂಗಳೂರಿನ ವಿಮಾನಪುರದಲ್ಲಿ (ಎಚ್ಎಎಲ್ ಪ್ರದೇಶ) ಜನಿಸಿದ ವಿಜಯ್ ಕುಮಾರ್, ನಾಟಕದ ನಂಟು ಇಟ್ಟುಕೊಂಡು ಸಿನಿಮಾಲೋಕ ಪ್ರವೇಶಿಸಿದವರು. ‘ಬೆಳುವಲದ ಮಡಿಲಲ್ಲಿ’ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ, ನಟನಾಗಿ ಮೊದಲ ಹೆಜ್ಜೆ ಇಟ್ಟ ಅವರು ಎನ್ ಜಿಇಎಫ್ ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ದುಡಿದವರು. ಈ ಅವಧಿಯಲ್ಲೇ ಅವರು ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕ ಬರೆದರು.
ಇದು ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ, ಹೈದರಾಬಾದ್, ಚೆನ್ನೈ, ದೆಹಲಿಗಳಲ್ಲಿಯೂ ಆ ನಾಟಕ ಪ್ರದರ್ಶನವಾಗಿತ್ತು. ಸುಮಾರು 1390 ಪ್ರದರ್ಶನಗಳಲ್ಲಿ ‘ಸಂಸಾರದಲ್ಲಿ ಸರಿಗಮ’ ನಾಟಕ ಕಂಡಿತ್ತು. ಇದೇ ಕಾರಣಕ್ಕೆ ವಿಜಿ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡು ಸರಿಗಮ ವಿಜಿ ಎಂದೇ ಜನಪ್ರಿಯರಾದರು.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದ ವಿಜಿ ಅವರು, ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಮಂಗಳೂರು/ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರೋಬ್ಬರಿ 7 ತಿಂಗಳ ನಂತರ ತಮ್ಮ ಅಭಿಮಾನಿಗಳಿಗೆ, ಜನತೆಗೆ ಜಾಲತಾಣದ ಮೂಲಕ ಸಂದೇಶವೊಂದನ್ನು ಹಂಚಿಕೊಂಡಿದ್ದು, ಫೋಟೊ ಫುಲ್ ವೈರಲ್ ಆಗುತ್ತಿದೆ.
2024 ರ ಜೂನ್ ತಿಂಗಳಿನಿಂದ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ ದರ್ಶನ್ ಕೊನೆಗೂ ತಮ್ಮ ಅಭಿಮಾನಿಗಳಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು-ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿ ಯನ್ನು ಬರಮಾಡಿಕೊಳ್ಳೋಣ’ ಎಂದು ಬರೆದುಕೊಂಡಿದ್ದು, ಕುದುರೆಯೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಮಾಡಿದ ಕೆಲವೇ ಗಂಟೆಯಲ್ಲಿ 4.66 ಲಕ್ಷಕ್ಕೂ ಅಧಿಕ ಲೈಕ್, 27 ಸಾವಿರಕ್ಕೂ ಅಧಿಕ ಕಮೆಂಟ್ಸ್ ಪಡೆಯಿತು.
ನಟ ದರ್ಶನ್ ಪ್ರತಿ ವರ್ಷವೂ ಕೂಡ ಫಾರಂ ಹೌಸ್‌ನಲ್ಲಿ ತನ್ನ ಸಾಕು ಪ್ರಾಣಿಗಳೊಂದಿಗೆ ಸಂಕ್ರಾತಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದಾರೆ. ಈ ಬಾರಿಯೂ ನೆಚ್ಚಿನ ಸ್ಥಳದಲ್ಲೇ ಸಂಕ್ರಾಂತಿ ಆಚರಿಸಿಕೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನೆಚ್ಚಿನ ನಟನ ಪೋಸ್ಟ್ ಕಂಡು ಅಭಿಮಾನಿಗಳು ಖುಷಿಯಾಗಿದ್ದಾರೆ. ದರ್ಶನ್ ಪೋಸ್ಟ್ ಮಾಡುತ್ತಿದ್ದಂತೆ, ಅಭಿಮಾನಿಗಳು ‘ಜೈ ಡಿ ಬಾಸ್’ ಎಂದು ಕಮೆಂಟ್ ಮಾಡಿದ್ದಾರೆ.
ಮಂಗಳೂರು/ಮೈಸೂರು : ಪ್ರತೀ ವರ್ಷ ನಟ ದರ್ಶನ್ ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಾರೆ. ಎತ್ತುಗಳು, ಹಸುಗಳನ್ನು ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕಿಚ್ಚು ಹಾಯಿಸುತ್ತಾರೆ. ಆದರೆ, ಈ ವರ್ಷ ದರ್ಶನ್ ಏನು ಮಾಡುತ್ತಿದ್ದಾರೆ ಎಂಬ ಕುತೂಹಲ ಇತ್ತು. ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಿಂದ ಜಾಮೀನು ಪಡೆದಿರುವ ದರ್ಶನ್ ಈ ಬಾರಿ ಸಂಕ್ರಾಂತಿ ಆಚರಿಸಿದ್ದಾರಾ ಎಂಬ ಕುತೂಹಲ ಮನೆ ಮಾಡಿತ್ತು.
ಈ ಕುತೂಹಲವನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ತಣಿಸಿದ್ದಾರೆ. ತನ್ನ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಅವರು ಸ್ಟೋರಿ ಹಾಕಿದ್ದಾರೆ. ಈ ಮೂಲಕ ಫಾರ್ಮ್ ಹೌಸ್‌ನಲ್ಲಿ ದರ್ಶನ್ ಜೊತೆ ಸಂಕ್ರಾಂತಿ ಆಚರಿಸುತ್ತಿದ್ದಾರೆ ಅನ್ನೋದು ಕನ್ಫಮ್ ಆಗಿದೆ.
ಸದ್ಯ ಈ ಫೋಟೋ ವೈರಲ್ ಆಗಿದೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮೈಸೂರಿನ ತಮ್ಮ ಫಾರ್ಮ್ ಹೌಸ್‌ನಲ್ಲಿದ್ದಾರೆ. ಅಲ್ಲಿ ಪ್ರಾಣಿಗಳ ಆರೈಕೆ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ ಇಬ್ಬರೂ ಮುಖ ತೋರಿಸಿಲ್ಲ. ಪ್ರಾಣಿಗಳತ್ತ ನೋಡುತ್ತಿರುವಂತೆ ಫೋಟೋ ಕ್ಲಿಕ್ಕಿಸಲಾಗಿದೆ. ಬೆನ್ನಿನ ಭಾಗ ಮಾತ್ರ ತೋರಿಸಲಾಗಿದೆ ವಿಜಯಲಕ್ಷ್ಮಿ ತನ್ನ ಮುದ್ದಿನ ನಾಯಿಯನ್ನು ಫಾರ್ಮ್ ಹೌಸ್‌ಗೆ ಕೊಂಡೊಯ್ದಿದ್ದು, ಈ ಫೋಟೋದಲ್ಲಿ ನಾಯಿಯೂ ಇರುವುದನ್ನು ಕಾಣಬಹುದು.