Connect with us

    LATEST NEWS

    ಛಾಯಾಗ್ರಾಹಕನ ಮುಂದೆ ಮಂಡಿಯೂರಿ ಕುಳಿತು ರಶ್ಮಿಕಾ ಮಂದಣ್ಣ ಮಾಡಿದ್ದೇನು..!? ವೈರಲ್ ವಿಡಿಯೋ ನೋಡಿ.!

    Published

    on

    ಬಹುಭಾಷೆಗಳಲ್ಲಿ ನಟಿಸಿ ಜನಪ್ರಿಯತೆ ಹೆಚ್ಚಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ದೊಡ್ಡದಿದೆ. ವಿನಮ್ರ ಸ್ವಭಾವದಿಂದ ಗುರುತಿಸಿಕೊಂಡಿರುವ ನಟಿಯ ಹೃದಯಸ್ಪರ್ಶಿ ವಿಡಿಯೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸಖತ್​​ ಸದ್ದು ಮಾಡುತ್ತಿದೆ. ಪಾಪರಾಜಿಯೊಬ್ಬರ ಜೊತೆ ಬಹಳ ಫ್ರೆಂಡ್ಲಿಯಾಗಿ ನಡೆದುಕೊಂಡಿರುವ ನಟಿಯ ನಡೆ ಅಭಿಮಾನಿಗಳ ಮನ ಗೆದ್ದಿದೆ. ಇತರರ ಫೊಟೋ ಕ್ಲಿಕ್ಕಿಸುವ ಕ್ಯಾಮರಾಮ್ಯಾನ್​​ನ ಫೋಟೋಗಳನ್ನು ರಶ್ಮಿಕಾ ಸೆರೆಹಿಡಿದಿದ್ದಾರೆ. ನಟಿಯ ನಗುಮಮೊಗ, ನಡೆನುಡಿ ಇಂಟರ್​​​ನೆಟ್​​ನಲ್ಲಿ ಸದ್ದು ಮಾಡಿದೆ.

    ಸಾಮಾಜಿಕ ಮಾಧ್ಯಮದಲ್ಲಿ ವೈರಲ್​​ ಆಗುತ್ತಿರುವ ಈ ವಿಡಿಯೋದಲ್ಲಿ ರಶ್ಮಿಕಾ ಆಕರ್ಷಕ ಲೊಕೇಶನ್​ ಒಂದರಲ್ಲಿ ನಿಂತು ತಮ್ಮದೇ ಆಲೋಚನೆಯಲ್ಲಿ ಮುಳುಗಿದ್ದಾರೆ. ನಟಿಯ ವಿಡಿಯೋ ಕ್ಯಾಮರಾಮ್ಯಾನ್​​​​ನ ಕ್ಯಾಮರಾದಲ್ಲಿ ಸೆರೆಯಾಗಿದೆ. ನಟಿ ಆ ವ್ಯಕ್ತಿಯಿಂದ ಕ್ಯಾಮರಾ ತೆಗೆದುಕೊಂಡು ಅವರ ಫೋಟೋಗಳನ್ನು ಸೆರೆಹಿಡಿದಿದ್ದಾರೆ. ವೃತ್ತಿಪರ ಛಾಯಾಗ್ರಾಹಕಿಯಂತೆ ನಿಂತು ಫೋಟೋ ಕ್ಲಿಕ್ಕಿಸಲಾರಂಭಿಸಿದ್ದಾರೆ. ಕ್ಯಾಮರಾಮ್ಯಾನ್‌ನ ಪರ್ಫೆಕ್​​​ ಫೋಟೋಗಾಗಿ ನಟಿ ಮಂಡಿಯೂರಿ ಕುಳಿತು ಉತ್ತಮ ಶಾಟ್​ಗಳನ್ನು ಕ್ಲಿಕ್ಕಿಸಿದ್ದಾರೆ.

    ಈ ವಿಡಿಯೋದ ಲೊಕೇಶನ್​​​​ ಮಾಹಿತಿ ಸ್ಪಷ್ಟವಾಗಿರದಿದ್ದರೂ, ಸೋಷಿಯಲ್​ ಮೀಡಿಯಾ ಪೋಸ್ಟ್‌ಗಳು ಇದು ಇಟಲಿಯ ಪೋರ್ಟೋಫಿನೋ ಎಂದು ಸೂಚಿಸಿದೆ. ರಶ್ಮಿಕಾ ಅಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ ವೆಡ್ಡಿಂಗ್​​ ಕ್ರೂಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ರಶ್ಮಿಕಾ ತಮ್ಮ ಸುತ್ತಲಿರುವ ಪ್ರತಿಯೊಬ್ಬರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆಂದು ಅಭಿಮಾನಿಗಳು ಪ್ರಶಂಸಿಸಿದ್ದಾರೆ.

    ಇನ್ನು ನಟಿಯ ಸಿನಿಮಾ ವಿಚಾರ ಗಮನಿಸುವುದಾದರೆ, ಕೊನೆಯ ಸಿನಿಮಾ ಅನಿಮಲ್​ 2023ರ ಡಿಸೆಂಬರ್​​ನಲ್ಲಿ ತೆರೆಕಂಡು ಸೂಪರ್​ ಡೂಪರ್ ಹಿಟ್​ ಆಗಿದೆ. ಮುಂದಿನ ಬಹುನಿರೀಕ್ಷಿತ ಚಿತ್ರ ‘ಪುಷ್ಪ 2: ದಿ ರೂಲ್’ ಇದೇ ಸಾಲಿನಲ್ಲಿ ತೆರೆಕಾಣಲಿದೆ. ಪುಷ್ಪ ರಾಜ್ ಪಾತ್ರದಲ್ಲಿ ನಟಿಸಲಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿ ಪಾತ್ರವನ್ನು ಮುಂದುವರಿಸಲಿದ್ದಾರೆ. ಇದಲ್ಲದೇ ದಿ ಗರ್ಲ್​ಫ್ರೆಂಡ್​​​, ಛಾವಾ, ರೈನ್​ಬೋ ಪ್ರಾಜೆಕ್ಟ್​ಗಳು ನಟಿ ಬಳಿ ಇದ್ದು, ಕೆಲ ದಿನಗಳ ಹಿಂದಷ್ಟೇ ಸಲ್ಮಾನ್​ ಖಾನ್​ ಜೊತೆಗೆ ಸಿಖಂದರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದಾಗಿಯೂ ಘೋಷಿಸಿದ್ದಾರೆ.

    ನಟಿಯ ಪ್ರತಿಭೆ ಮಾತ್ರವಲ್ಲದೇ ಡೌನ್-ಟು-ಅರ್ಥ್ ಸ್ವಭಾವದಿಂದ ಅಭಿಮಾನಿಗಳ ಸಂಖ್ಯೆ ಪ್ರತಿದಿನ ಹೆಚ್ಚುತ್ತಲೇ ಇದೆ. ನಟಿಯ ಮುಂದಿನ ಸಿನಿಮಾಗಳಿಗಾಗಿ ಅಭಿಮಾನಿಗಳು ಸೇರಿದಂತೆ ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿರುವ ಪುಷ್ಪ: ದಿ ರೈಸ್​ ಸಿನಿಮಾದ ಮುಂದುವರಿದ ಭಾಗ ಪುಷ್ಪ: ದಿ ರೂಲ್​​​​ ಎಷ್ಟರ ಮಟ್ಟಿಗೆ ಗೆಲ್ಲಲಿದೆ ಅನ್ನೋದನ್ನು ಕಾದು ನೋಡಬೇಕಿದೆ.

    DAKSHINA KANNADA

    3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ

    Published

    on

    ಇಲ್ಲೊಬ್ಬ ಮಹಿಳೆ ಮದುವೆಯ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಲೇ ಒಬ್ಬರನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳುವುದನ್ನು ನೋಡಿ ಬೇಸತ್ತಿದ್ದಾಳೆ. ಇದರಿಂದ ತಾನು ಮದುವೆ ವಿಚಾರದಲ್ಲಿ ಏನಾದರೂ ಭಿನ್ನವಾಗಿರುವುದನ್ನು ಮಾಡಬೇಕೆಂದು 3 ದಿನ ಮದುವೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಬರೋಬ್ಬರಿ 60 ಜನರನ್ನು ಮದುವೆ ಮಾಡಿಕೊಂಡಿದ್ದಾಳೆ.

    ಹೌದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆ ಛಾಯಾಗ್ರಾಹಕಿ ಆಗಿರುವ ಈ ಮಹಿಳೆ ಮದುವೆ ಸಮಾರಂಭಗಳಲ್ಲಿ ಎಲ್ಲರೂ ಒಟ್ಟಿಗೆ ಸೇರುವುದು, ಹಾಡು, ಕುಣಿತ, ಪಾರ್ಟಿ ಮಾಡುವುದನ್ನು ಕಂಡಿದ್ದಾಳೆ. ಇದರಿಂದ ತಾನು ಅದ್ಧೂರಿಯಾಗಿ ಮದುವೆ ಮಾಡಿಕೊಳ್ಳಬೇಕು ಎಂದು ಉದ್ದೇಶ ಹೊಂದಿದ್ದಳು. ಮುಂದುವರೆದು ಮದುವೆ ಆಗುವುದನ್ನು ಇನ್ನೂ ವಿಶೇಷವಾಗಿ ಆಚರಣೆ ಮಾಡಬೇಕು ಎಂದು ತನಗೆ ಗೊತ್ತಿರುವ ಎಲ್ಲ ಸ್ನೇಹಿತರಿಗೂ ಮದುವೆ ಆಮಂತ್ರಣ ಪತ್ರವನ್ನು ನೀಡಿದ್ದಾಳೆ.

    ಆದರೆ, ಮದುವೆ ಗಂಡು ಯಾರೆಂದು ಯಾರಿಗೂ ಹೇಳಿಲ್ಲ. ಆದರೆ, ತಾನು ಮದುವೆ ಮಾಡಿಕೊಳ್ಳುವವರಿಗೆ ಮಾತ್ರ ನಮ್ಮಿಬ್ಬರ ಮದುವೆಗೆ ಸಿದ್ಧವಾಗಿ ಬನ್ನಿ ಎಂದು ಹೇಳಿದ್ದಾಳೆ. ಹೀಗೆ, ಒಂದು ಮದುವೆ ಹೆಣ್ಣನ್ನು ಮದುವೆಯಾಗಲು ಬರೋಬ್ಬರಿ 60 ಜನರು ವೇದಿಕೆಯ ಬಳಿ ಬಂದಿದ್ದಾರೆ. ಆದರೆ, ಯಾರನ್ನೂ ನಿರಾಕರಿಸದೇ ಮೂರು ದಿನಗಳಲ್ಲಿ ಎಲ್ಲರನ್ನೂ ಮದುವೆ ಆಗಿದ್ದಾಳೆ. ಈ ಮೂಲಕ ತಾನು ‘ಒಬ್ಬ ವ್ಯಕ್ತಿಯನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಲು ಇಷ್ಟವಿಲ್ಲ, ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ’ ಹೀಗಾಗಿ, 60 ಜನರನ್ನು ಮದುವೆ ಮಾಡಿಕೊಂಡಿದ್ದಾಳೆ. ಈಗ ಈಕೆಯ ಮದುವೆಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

    ಕೇವಲ ಮೂರು ದಿನದಲ್ಲಿ ಬರೋಬ್ಬರಿ 60 ಜನರನ್ನು ಮದುವೆಯಾದ ಮಹಿಳೆ ಆಸ್ಟ್ರೇಲಿಯಾದ ಕಾರ್ಲಿ ಸಾರೆ (40). ತನ್ನ ಮದುವೆಯ ಬಗ್ಗೆ ಮಾತನಾಡಿದ ಕಾರ್ಲಿ ಸಾರೆ ಅವರು, ‘ನನಗೆ ನನ್ನ ನಿರ್ಧಾರದ ಬಗ್ಗೆ ಹೆಮ್ಮೆಯಿದೆ. ನನ್ನ ಜೀವನದಲ್ಲಿ ಇವರೆಲ್ಲರೂ ಬಹಳ ಮುಖ್ಯ. ಆದ್ದರಿಂದ ನನಗೆ ಬೇಕು ಎನಿಸಿದ ಎಲ್ಲ ಆಪ್ತರನ್ನೂ ಒಟ್ಟಿಗೆ ಮದುವೆಯಾಗಿದ್ದೇನೆ’ ಎಂದು ಹೇಳಿಕೊಂಡಿದ್ದಾಳೆ.

    Continue Reading

    LATEST NEWS

    ರಾಜ್ ಕೋಟ್ ವಿಮಾನ ನಿಲ್ದಾಣದ ಹೊರಗಿನ ಮೇಲ್ಫಾವಣಿ ಕುಸಿತ!

    Published

    on

    ರಾಜ್ ಕೋಟ್ : ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿದು ಓರ್ವ ವ್ಯಕ್ತಿ ಬಲಿಯಾದ ಘಟನೆ ಶುಕ್ರವಾರ(ಜೂ.28) ನಡೆದಿತ್ತು. ಈಗ ಗುಜರಾತಿನ ರಾಜ್ ಕೋಟ್ ವಿಮಾನ ನಿಲ್ದಾಣದ ಹೊರಗಿನ ಮೇಲ್ಫಾವಣಿ ಕುಸಿದು ಬಿದ್ದಿದೆ.


    ಭಾರೀ ಮಳೆಯ ನಡುವೆ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್‌ ಹೊರಗಿನ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿನ ಮೇಲ್ಛಾವಣಿ ಕುಸಿದಿದೆ. ಆದರೆ, ಯಾವುದೇ ಹಾನಿ ಬಗ್ಗೆ ಇನ್ನೂ ವರದಿಯಾಗಿಲ್ಲ.

    ಇದನ್ನೂ ಓದಿ : ದೆಹಲಿ ವಿಮಾನ ನಿಲ್ದಾಣದಲ್ಲಿ ದುರಂ*ತ : ಟರ್ಮಿನಲ್ 1 ರ ಮೇಲ್ಛಾವಣಿ ಕುಸಿದು ಓರ್ವ ಸಾ*ವು; ಹಲವರಿಗೆ ಗಾ*ಯ

    ಶುಕ್ರವಾರ ದೆಹಲಿ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದಿದ್ದರಿಂದ ಒಬ್ಬರು ಮೃತಪಟ್ಟು, ಎಂಟು ಜನರು ಗಾಯಗೊಂಡಿದ್ದರು. ಈ ಘಟನೆ ಸಂಭವಿಸಿದ ಮಾರನೇ ದಿನವೇ ಗುಜರಾತ್ ನ ರಾಜ್ ಕೋಟ್ ನಲ್ಲಿಯೂ ಇಂತಹುದೇ ಘಟನೆ ನಡೆದಿದೆ.

    Continue Reading

    LATEST NEWS

    ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್‌ ಅಪ*ಘಾತ – ಐವರು ಭಾರತೀಯ ಯೋಧರು ಹುತಾ*ತ್ಮ

    Published

    on

    ನವದೆಹಲಿ: ಲೇಹ್‌ನ ದೌಲತ್‌ ಬೇಗ್‌ ಓಲ್ಡಿ ಪ್ರದೇಶದ ಎಲ್‌ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್‌ ಅಪ*ಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾ*ತ್ಮರಾಗಿದ್ದಾರೆ.

    ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪ*ಘಾತದಲ್ಲಿ ಹುತಾ*ತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್‌ ಬಳಿ ಬೋಧಿ ನದಿಯನ್ನು ತಮ್ಮ T-72 ಟ್ಯಾಂಕ್‌ ಮೂಲಕ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಪ್ರಾರಂಭಿಸಿತು. ತಕ್ಷಣವೇ ಟ್ಯಾಂಕ್‌ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿ ಹೋದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ. ‘ಲಡಾಖ್‌ನಲ್ಲಿ ಸಂಭವಿಸಿದ ದುರ*ದೃಷ್ಟಕರ ಅಪ*ಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ಸಚಿವರು ಪೋಸ್ಟ್‌ ಮಾಡಿದ್ದಾರೆ.

    Continue Reading

    LATEST NEWS

    Trending