Connect with us

    FILM

    ರಶ್ಮಿಕಾ ಮಂದಣ್ಣ ಭಾವುಕ ಪತ್ರ : “ಇಷ್ಟು ದಿನ ಎಲ್ಲವನ್ನೂ ಮೌನವಾಗಿ ಸಹಿಸಿಕೊಂಡೆ”..!

    Published

    on

    ರಶ್ಮಿಕಾ ಮಂದಣ್ಣ (Rashmika mandanna) ತಾನು ಅನುಭವಿಸಿದ ನೋವುಗಳ ಮೇಲೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗವಾಗಿ ಭಾವುಕ ಪತ್ರವೊಂದನ್ನು ಬರೆದಿದ್ದಾರೆ

    ಮುಂಬೈ : ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ(Rashmika mandanna)  ಆನೇಕ ಟೀಕೆಗಳನ್ನು ಧೈರ್ಯವಾಗಿ ಎದುರಿಸಿಕೊಂಡು ಬಂದವರು ಸದಾ ನಗುತ್ತಲೇ ಉತ್ರ ನೀಡಿದವಳು.
    ಸಾಮಾಜಿಕ ಜಾಲತಾಣದ ಮೂಲಕ ಅನೇಕ ಟೀಕೆಗಳನ್ನೂ ಈಗಾಗಲೇ ಕೇಳಿಸಿಕೊಂಡಿದ್ದಾರೆ.
    ಆದರೆ ಇದೀಗ ರಶ್ಮಿಕಾ ತಾನು ಅನುಭವಿಸಿದ ನೋವುಗಳ ಮೇಲೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗವಾಗಿ ಭಾವುಕ ಪತ್ರವೊಂದನ್ನು ಬರೆದಿದ್ದಾರೆ.
    ‘ನನ್ನ ಕೆಲಸದ ಮೂಲಕ ನಿಮ್ಮೆಲ್ಲರನ್ನು ರಂಜಿಸಲು ಪರಿಶ್ರಮ ಪಡುತ್ತಿದ್ದೇನೆ. ಈ ನಿಟ್ಟಿನಲ್ಲಿ ನಾನು ಹೆಚ್ಚು ಯೋಚಿಸುತ್ತೇನೆ.
    ನನ್ನ ಕೆಲಸ ಯಾವತ್ತೂ ನೀವೆಲ್ಲರೂ ಹೆಮ್ಮ ಪಡುವಂತೆ ಇರಲು ಪ್ರಯತ್ನಿಸುತ್ತೇನೆ. ಆದರೆ ನಾನಿಂದು ಹೇಳದೇ ಇರುವ ವಿಚಾರವೊಂದಕ್ಕೆ ನನ್ನನ್ನು ಅನೇಕರು ಟ್ರೋಲ್ ಮಾಡುತ್ತಿದ್ದಾರೆ.
    ಇದು ನನಗೆ ಅತೀವ ಬೇಸರ ತರಿಸಿದೆ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.‘ಇಷ್ಟು ದಿನ ಎಲ್ಲವನ್ನೂ ಸಹಿಸಿಕೊಂಡು ಮೌನವಾಗಿದ್ದೆ. ಆದರೆ ನನಗೆ ತೊಂದರೆಯಾದಾಗ ಮಾತನಾಡಬೇಕಿತ್ತು.
    ನಾನು ಸಿನಿಮಾ ರಂಗಕ್ಕೆ ಆಗಮಿಸಿದಾಗಿನಿಂದ ನನ್ನನ್ನು ಒಂದಲ್ಲಾ ಒಂದು ಕಾರಣಕ್ಕೆ ಕೆಲವರು ದ್ವೇಷ ಮಾಡುತ್ತಲೇ ಬರುತ್ತಿದ್ದಾರೆ.
    ಆರಂಭದಲ್ಲಿ ನಾನು ಹಲವು ಟ್ರೋಲ್, ಟೀಕೆಗಳನ್ನು ಸಹಿಸಿಕೊಂಡಿದ್ದೇನೆ.
    ಆದರೆ ಈಗ ಪತ್ರಿಯೊಂದು ಟ್ರೋಲ್​ಗೂ ನನ್ನನ್ನೇ ತೂಗಿ ಹಾಕಲಾಗುತ್ತಿದೆ. ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರ ವಿಭಿನ್ನವಾದುದು.
    ಇಲ್ಲಿ ನಿಮಗೆ ನಾನು ಇಷ್ಟ ಇಲ್ಲ ಎಂದ ಮಾತ್ರಕ್ಕೆ, ನನ್ನ ಬಗ್ಗೆ ಸುಳ್ಳನ್ನೇ ಹಬ್ಬಿಸಬಹುದು ಎಂಬ ಮನಸ್ಥಿತಿ ಸರಿಯಲ್ಲ.’‘

    ಕೆಲವು ಸಂದರ್ಶನಗಳಲ್ಲಿನ ನನ್ನ ಹೇಳಿಕೆಯನ್ನು ಟ್ರೋಲ್​ ಮಾಡಿ ತಿರುಚಲಾಗುತ್ತಿದೆ.
    ಇದು ನನ್ನ ವ್ಯಕ್ತಿತ್ವಕ್ಕೆ ಹಾನಿಯುಂಟು ಮಾಡಲು ಕಾರಣವಾಗುತ್ತಿದೆ.
    ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸಲು ಸದಾ ಸಿದ್ದನಿದ್ದೇನೆ. ಆದರೆ ನನ್ನ ಮಾತುಗಳನ್ನು ತಿರುಚಿ, ಸುಳ್ಳುಗಳನ್ನೇ ಹಬ್ಬಿಸುವುದರಿಂದ ಏನು ಲಾಭವಿದೆ’ ಎಂದು ರಶ್ಮಿಕಾ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

    1 Comment

    1 Comment

    1. Lohithkumar

      10/11/2022 at 10:49 AM

      Personal matters should be avoided comments and your are strong reply medam kept up

    Leave a Reply

    Your email address will not be published. Required fields are marked *

    FILM

    ದಿಲೀಪ್ ಕುಮಾರ್ ಆಗಿದ್ದ ಎ.ಆರ್ ರೆಹಮಾನ್ ಧರ್ಮ ಬದಲಿಸಿದ್ದು ಯಾಕೆ ಗೊತ್ತಾ ??

    Published

    on

    ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಸುಮಾರು 29 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನ ಘೋಷಣೆ ಮಾಡಿದ್ದು ಬಹಳ ಅಚ್ಚರಿ ಮೂಡಿಸಿತ್ತು. ಈ ವಿಚ್ಚೇದನದ ಸುದ್ದಿಯಿಂದಾಗಿ ಎ.ಆರ್‌ ರೆಹಮಾನ್‌ ಅವರ ವೈಯಕ್ತಿನ ಬದುಕಿನ ಹಲವು ವಿಚಾರಗಳು ಮುನ್ನೆಲೆಗೆ ಬರುತ್ತಿವೆ.

    ‘ರೆಹಮಾನ್’ ಎಂಬ ಹೆಸರಿನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದ ದಿಲೀಪ್ ಕುಮರ್ 1980ರಲ್ಲಿ ತಂದೆಯ ಮರಣದ ನಂತರ ಕುಟುಂಬದೊಂದಿಗೆ ಇಸ್ಲಾಂಗೆ ಮತಾಂತರಗೊಂಡ ನಂತರ, ಬಹುಕಾಲದ ಆಸೆಯಾಗಿದ್ದ ರೆಹಮಾನ್’ ಎಂಬ ಹೆಸರನ್ನು ಬಳಸಲು ನಿರ್ಧರಿಸಿದರು.

    ತಂಗಿಯ ಮದುವೆಗೆ ಜ್ಯೋತಿಷ್ಯ ನೋಡುವಾಗ, ಒಬ್ಬ ಹಿಂದೂ ಜ್ಯೋತಿಷಿ ಅಬ್ದುಲ್ ರೆಹಮಾನ್ ಮತ್ತು ಅಬ್ದುಲ್ ರಹೀಮ್ ಎಂಬ ಹೆಸರುಗಳನ್ನು ಸೂಚಿಸಿದ್ದಾಗಿ ರೆಹಮಾನ್ ಆಗಾಗ ನನಪಿಸುಕೊಳ್ಳುತ್ತಿರುತ್ತಾರೆ. ‘ರೆಹಮಾನ್’ ಹೆಸರು ಇಷ್ಟವಾಗಿದ್ದ ಕಾರಣ ಅದನ್ನೇ ಆಯ್ಕೆ ಮಾಡಿಕೊಂಡರು. ತಾಯಿಯ  ಮನದಿಚ್ಚೆಯಂತೆ, ‘ಅಲ್ಲಾ ರಕ್ಕಾ’ ಎಂಬುದನ್ನು ಸೇರಿಸಿ ಎ.ಆರ್. ರೆಹಮಾನ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು.

    ‘ದೇವರಿಂದ ರಕ್ಷಿಸಲ್ಪಟ್ಟವರು’ ಎಂಬ ಅರ್ಥವನ್ನು ಹೊಂದಿರುವ ಎ.ಆರ್. ರೆಹಮಾನ್ ಎಂಬ ಹೆಸರು ಇಂದು ಸಂಗೀತ ಲೋಕದಲ್ಲಿ ಅನುಪಮ ಸ್ಥಾನ ಪಡೆದಿದೆ. ಈ ಹೆಸರು ಬದಲಾವಣೆ ರೆಹಮಾನ್ ಅವರ ಆಧ್ಯಾತ್ಮಿಕ ಪಯಣವನ್ನು ಸೂಚಿಸುವುದು ಮಾತ್ರವಲ್ಲದೆ, ಜಾಗತಿಕ ಖ್ಯಾತಿಗೆ ಅವರ ಏಳಿಗೆಯ ಆರಂಭವನ್ನೂ ಸೂಚಿಸುತ್ತದೆ, ರೆಹಮಾನ್ ಎಂಬ ಹೆಸರು ವಿಶ್ವದ ಅತ್ಯಂತ ಪ್ರಸಿದ್ಧ ಸಂಗೀತಗಾರರಲ್ಲಿ ಒಬ್ಬರನ್ನಾಗಿ ಮಾಡಿದೆ.

    29 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ ರೆಹಮಾನ್ ಸಾಯಿರಾ ದಂಪತಿ ವಕೀಲರಾದ ವಂದನಾ ಶಾ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯ ಮೂಲಕ ಪ್ರತ್ಯೇಕಗೊಂಡಿರುವ ವಿಚಾರ ತಿಳಿಸಿದರು. ತಮ್ಮ ತಂದೆಯನ್ನು ಕೊನೆಯ ದಿನಗಳಲ್ಲಿ ಆರೈಕೆ ಮಾಡಿದ್ದ  ಸೂಫಿ ಸಂತರೊಬ್ಬರ ಪ್ರಭಾವಕ್ಕೆ ಒಳಗಾಗಿ ಮುಸ್ಲಿಂ ಧರ್ಮಕ್ಕೆ ರೆಹಮಾನ್ ಮತಾಂತರಗೊಂಡರು ಎನ್ನಲಾಗಿದೆ. ‘ಈ ನಂಬಿಕೆಯ ಬದಲಾವಣೆ ಮನಸ್ಸಿಗೆ ಶಾಂತಿ ನೀಡಿದ್ದು, ತಾವು ತಮ್ಮ ನಂಬಿಕೆಯನ್ನು ಬೇರೆಯವರ ಮೇಲೆ ಹೇರಲು ಇಷ್ಟಪಡುವುದಿಲ್ಲ’ ಎಂದು ಸ್ವತಃ ರೆಹಮಾನ್‌ ಹೇಳಿಕೊಂಡಿದ್ದಾರೆ.

    Continue Reading

    FILM

    ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?

    Published

    on

    ಮಂಗಳೂರು/ಬೆಂಗಳೂರು : ಏಕ್ ಲವ್ ಯಾ ಸಿನಿಮಾದಲ್ಲಿ ನಾಯಕನಾಗಿ ಮಿಂಚಿ ಸಕತ್ ಫೇಮಸ್ ಆಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಸೆಮಣೆ ಏರಲು ಸಜ್ಜಾಗಿದ್ದಾರೆ.  ಸರಳವಾಗಿ ಅವರ ನಿಶ್ಚಿತಾರ್ಥ ಕಾರ್ಯ ನೆರವೇರಿದೆ.

    ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು,  ರಾಣಾ ಎಂಗೇಜ್ಮೆಂಟ್  ಆಗಿರುವ ಹುಡುಗಿ ಯಾರು? ಎಲ್ಲಿಯವರು? ಎಂಬ ಮಾಹಿತಿ ಬಹಿರಂಗವಾಗಿಲ್ಲ.  ನಿಶ್ಚಿತಾರ್ಥದ ಫೋಟೋ ನೋಡಿದ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ  ಹರಿಸುತ್ತಿದ್ದಾರೆ.

    ಪ್ರೇಮ್ ಮಿಸ್ ಯಾಕೆ?

    ರಾಣಾ ಎಂಗೇಜ್ಮೆಂಟ್ ಸಮಾರಂಭದಲ್ಲಿ ನಟಿ ರಕ್ಷಿತಾ ಪ್ರೇಮ್  ಕುಟುಂಬ ಇದೆ. ಆದ್ರೆ ನಿರ್ದೇಶಕ ಪ್ರೇಮ್ ಇಲ್ಲ. ಅವರು ಏನು ಭಾಗಿಯಾಗಿಲ್ಲ ಎಂಬ ಅನುಮಾನ ಹುಟ್ಟಿರೋದು ಸಹಜ.  ಪ್ರೇಮ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರೋದರಿಂದ ನಿಶ್ಚಿತಾರ್ಥದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಕೆಡಿ ಸಿನಿಮಾದ ಶೂಟಿಂಗ್ ಗಾಗಿ ಅವರು ಚಿಕ್ಕಮಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.

    ಏಕ್ ಲವ್ ಯಾ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ರಾಣಾ, ಪ್ರೇಮ್ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ್ ಈಶ್ವರ್ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಾನ್ವಿ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

    Continue Reading

    FILM

    ಕ್ರಿಕೆಟರ್ ಆಗಬೇಕಿದ್ದ ಆದಿತ್ಯ ಹೀರೋ ಆಗಿದ್ದರ ಹಿಂದಿನ ಕಥೆ ಗೊತ್ತಾ ?

    Published

    on

    ಅನೇಕ ಕಲಾವಿದರು ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಆದರೆ, ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿಗೆ ಆದಿತ್ಯ ರಾಯ್ ಕಪೂರ್ ಸಹ ಸೇರುತ್ತಾರೆ. ಕ್ರಿಕೆಟರ್ ಆಗಬೇಕು ಎಂದು ಕನಸು ಕಂಡಿದ್ದ ಆದಿತ್ಯ ನಂತರ  ಬಾಲಿವುಡ್​ನ ಸ್ಟಾರ್ ಆಗಿರೋ ಕಥೆಯೇ ರೋಚಕ.

    ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ  ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು. ಈ ಸರಣಿಯಲ್ಲಿ ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಈ ಸರಣಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದಕ್ಕೆ ಸೀಕ್ವೆಲ್ ಕೂಡ ಬರಬೇಕಿದೆ. ಇಷ್ಟೆಲ್ಲ ಹೆಸರು ಮಾಡಿದ ಆದಿತ್ಯ ಅವರ ಮೂಲ ಕನಸು ಮಾತ್ರ ಬೇರೆಯದೇ ಇತ್ತು.

    ‘ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದೆ. ಆದರೆ, ಅದು ಹೊಂದಾಣಿಕೆ ಆಗಿಲ್ಲ. ನಂತರ ನಟನೆಗೆ ಬಂದೆ. ನಾನು ವಿಡಿಯೋ ಜಾಕಿ ಕೂಡ ಆಗಿದ್ದೆ’ ಎಂದಿದ್ದರು ಆದಿತ್ಯ ರಾಯ್ ಕಪೂರ್. ಹಾಗಂತ ಆದಿತ್ಯ ರಾಯ್ ಕಪೂರ್ ಅವರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದುಕೊಳ್ಳಬೇಡಿ. ಅವರು ದೊಡ್ಡ ಕುಟುಂಬದ ಹಿನ್ನೆಲೆಯಿಂದಲೇ ಬಂದವರು.

     

    Continue Reading

    LATEST NEWS

    Trending